ಬಿಯರ್ 
ರಾಜ್ಯ

ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ BAI ಪತ್ರ

ಕಳೆದ ಎರಡು ವರ್ಷಗಳಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ನಾಲ್ಕು ಬಾರಿ ಹೆಚ್ಚಳ ಮಾಡಲಾಗಿದ್ದು, ಕರ್ನಾಟಕದಲ್ಲಿ ಎಇಡಿಯನ್ನು "ಶೇ.205" ರಷ್ಟು ಹೆಚ್ಚಿಸಲಾಗಿದೆ ಎಂದು ಬಿಎಐ ಹೇಳಿಕೊಂಡಿದೆ.

ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚಿಗೆ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ(ಎಇಡಿ)ವನ್ನು ಶೇ.10 ರಷ್ಟು ಹೆಚ್ಚಳಕ್ಕೆ ಭಾರತೀಯ ಬ್ರೂವರ್ಸ್ ಸಂಘ(BAI) ಶುಕ್ರವಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಕಳೆದ ಎರಡು ವರ್ಷಗಳಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ನಾಲ್ಕು ಬಾರಿ ಹೆಚ್ಚಳ ಮಾಡಲಾಗಿದ್ದು, ಕರ್ನಾಟಕದಲ್ಲಿ ಎಇಡಿಯನ್ನು "ಶೇ.205" ರಷ್ಟು ಹೆಚ್ಚಿಸಲಾಗಿದೆ ಎಂದು ಬಿಎಐ ಹೇಳಿಕೊಂಡಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಬಿಎಐ, ಇತ್ತೀಚಿನ ತೆರಿಗೆ ಹೆಚ್ಚಳವನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಮತ್ತು ತೆರಿಗೆಗಳಲ್ಲಿ ಆಗಾಗ್ಗೆ ಏರಿಕೆ ಮಾಡುವುದನ್ನು ನಿಲ್ಲಿಸುವಂತೆ ಒತ್ತಾಯಿಸಿದೆ.

ಎರಡು ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ ಬಿಯರ್ ಮೇಲಿನ ಅಂಬಕಾರಿ ಸುಂಕವನ್ನು ನಾಲ್ಕು ಹೆಚ್ಚಳ ಮಾಡಲಾಗಿದ್ದು, ಈ ರೀತಿ ಬಹುತೇಕ ಎಲ್ಲಿಯೂ ಮಾಡಿಲ್ಲ. ಜುಲೈ 2023 ರಲ್ಲಿ, ಬಿಯರ್ ಮೇಲಿನ ಎಇಡಿಯನ್ನು ಶೇ.175 ರಿಂದ ಶೇ.185 ಕ್ಕೆ ಹೆಚ್ಚಿಸಲಾಯಿತು. ಫೆಬ್ರವರಿ 2024 ರಲ್ಲಿ ಇದನ್ನು ಶೇ. 195 ಕ್ಕೆ ಹೆಚ್ಚಿಸಲಾಯಿತು. ನಂತರ ಜನವರಿ 2025 ರಲ್ಲಿ ರಾಜ್ಯದಲ್ಲಿ ಮಾರಾಟವಾಗುವ ಬಹುಪಾಲು ಬಿಯರ್ ಮೇಲೆ ಪ್ರತಿ ಬಲ್ಕ್ ಲೀಟರ್‌ಗೆ 10 ರೂ.ಗಳಷ್ಟು ಅಬಕಾರಿ ಸುಂಕವನ್ನು ಹೆಚ್ಚಿಸಲಾಯಿತು ಮತ್ತು ಈಗ ಮತ್ತೆ AED ಅನ್ನು ಶೇ. 205 ಕ್ಕೆ ಹೆಚ್ಚಿಸಲಾಗುತ್ತಿದೆ" ಎಂದು ಬಿಎಐ ಮಹಾನಿರ್ದೇಶಕ ವಿನೋದ್ ಗಿರಿ ಅವರು ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಸುಂಕ ಹೆಚ್ಚಳದಿಂದಾಗಿ ಬಿಯರ್ ಬೆಲೆಗಳು ಪ್ರತಿ ಬಾಟಲಿಗೆ 160 ರೂ.ಗಳಿಂದ ಸುಮಾರು 200 ರೂ.ಗಳಿಗೆ ಏರಿಕೆಯಾಗಿದೆ ಎಂದು ಗಿರಿ ಹೇಳಿದ್ದಾರೆ.

"2022-23 ರಲ್ಲಿ, ಬಿಯರ್ ಉದ್ಯಮದ ಬೆಳವಣಿಗೆ ಶೇ. 46 ರಷ್ಟಿತ್ತು, ಇದು 2024-25 ರಲ್ಲಿ ಕೇವಲ ಶೇ. 1ರಷ್ಟು ಮಾತ್ರ ಹೆಚ್ಚಾಗಿದೆ. ಇದು ಆತಂಕಕಾರಿ. "ಇತ್ತೀಚಿನ ತೆರಿಗೆ ಹೆಚ್ಚಳವು ಬಿಯರ್ ಮಾರಾಟವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ ಎಂಬುದು ಸ್ಪಷ್ಟವಾಗಿದೆ" ಎಂದು ಗಿರಿ ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕವು 11 ಬ್ರೂವರೀಸ್‌(ಬಿಯರ್ ತಯಾರಕರು)ಗಳನ್ನು ಹೊಂದಿದ್ದು, ಸುಮಾರು 7,000 ಜನರಿಗೆ ಉದ್ಯೋಗ ಕಲ್ಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT