ಕೊಲೆಗೀಡಾದ ಸುಹಾಸ್ ಶೆಟ್ಟಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ  
ರಾಜ್ಯ

ಸುಹಾಸ್ ಶೆಟ್ಟಿ ಹತ್ಯೆ: ಆರೋಪಿಗಳ ಗುರುತು ಪತ್ತೆ; ಇಂದು ದಕ್ಷಿಣ ಕನ್ನಡ ಬಂದ್, ಶಾಲಾ-ಕಾಲೇಜುಗಳಿಗೆ ರಜೆ

ಸುಹಾಸ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅಂತ್ಯಕ್ರಿಯೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತರೀತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್‌ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಪರಿಸ್ಥತಿ ಸೂಕ್ಷ್ಮವಾಗಿರುವುದರಿಂದ ದಕ್ಷಿಣ ಕನ್ನಡ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಅವರು ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸುಹಾಸ್ ಹತ್ಯೆ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ನಾವು ಭದ್ರತೆಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಿದ್ದೇವೆ. ಸುಹಾಸ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅಂತ್ಯಕ್ರಿಯೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತರೀತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.

ಆರೋಪಿಗಳ ಗುರುತು

ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ಗುರುತು ಸಿಕ್ಕಿದ್ದು ಅವರನ್ನು ವಶಕ್ಕೆ ಪಡೆಯಲು ನಮ್ಮ ಪೊಲೀಸ್ ತಂಡ ಕೆಲಸ ಮಾಡುತ್ತಿದೆ ಎಂದು ಹಿತೇಂದ್ರ ಹೇಳಿದರು.

ಮಂಗಳೂರಿನಲ್ಲಿ ನಿಷೇಧಾಜ್ಞೆ

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಬಿಎನ್​ಎಸ್ ಕಲಂ 163 ಅಡಿಯಲ್ಲಿ ಮೇ 2 ರ ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್‌ ಅಗರ್ವಾಲ್ ಆದೇಶದಲ್ಲಿ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ದಕ್ಷಿಣ ಕನ್ನಡ ಬಂದ್

ಈ ಮಧ್ಯೆ ಪರಿಸ್ಥಿತಿ ಸೂಕ್ಷ್ಮವಾಗಿರುವುದರಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಳ್ಳಲಿದೆ. ಅಲ್ಲದೆ, ಮಂಗಳೂರಿನಿಂದ ಬಂಟ್ವಾಳದ ಕಾರಿಂಜದ ಪುಳಿಮಜಲು (ಸುಹಾಸ್ ಶೆಟ್ಟಿ ನಿವಾಸ) ತನಕ ಜಾಥಾ ಮೂಲಕ ಮೃತದೇಹದ ಸಾಗಾಟಕ್ಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಶಾಲಾ ಕಾಲೇಜುಗಳಿಗೆ ರಜೆ

ಯಾವುದೇ ಕ್ಷಣದಲ್ಲಿ ಗಲಾಟೆಯೇಳುವ ಸಾಧ್ಯತೆಯಿರುವುದರಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದ್ದು, ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

SCROLL FOR NEXT