ಮೃತ ಸುಹಾಸ್ ಶೆಟ್ಟಿ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು 
ರಾಜ್ಯ

ಸುಹಾಸ್ ಶೆಟ್ಟಿ ಕೊಲೆಗೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೇ ಕಾರಣ, ರಾಜ್ಯಪಾಲರು ಮಧ್ಯಪ್ರವೇಶಿಸಲಿ: BJP ಆಗ್ರಹ

ಹಿಂದೂ ವಿರೋಧಿ ‌ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರ ಅತಿಯಾದ ಓಲೈಕೆಯ ಕಾರಣದಿಂದಲೇ ಮತಾಂಧ ಬ್ರದರ್ಸ್‌ಗಳು ಕಾನೂನು ಕೈಗೆತ್ತಿಕೊಂಡು ಹಿಂದೂಗಳನ್ನು ಹತ್ತಿಕ್ಕುತ್ತಿದ್ದಾರೆ.

ಬೆಂಗಳೂರು: ಕಳೆದ 22 ತಿಂಗಳ ಕಾಂಗ್ರೆಸ್ ಆಡಳಿತದಲ್ಲಿ ಮತಾಂಧ ಜಿಹಾದಿ ಬ್ರದರ್ಸ್‌ಗಳು ನಿರಂತರವಾಗಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡುತ್ತಿದ್ದಾರೆ. ಸಹೋದರ ಸುಹಾಸ್ ಶೆಟ್ಟಿ ಕೊಲೆಗೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೇ ಕಾರಣ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಕಳೆದ 22 ತಿಂಗಳ ಕಾಂಗ್ರೆಸ್ ಆಡಳಿತದಲ್ಲಿ ಮತಾಂಧ ಜಿಹಾದಿ ಬ್ರದರ್ಸ್‌ಗಳು ನಿರಂತರವಾಗಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡುತ್ತಿದ್ದಾರೆ. ಹಿಂದೂ ವಿರೋಧಿ ‌ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರ ಅತಿಯಾದ ಓಲೈಕೆಯ ಕಾರಣದಿಂದಲೇ ಮತಾಂಧ ಬ್ರದರ್ಸ್‌ಗಳು ಕಾನೂನು ಕೈಗೆತ್ತಿಕೊಂಡು ಹಿಂದೂಗಳನ್ನು ಹತ್ತಿಕ್ಕುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಮೊದಲ ಅವಧಿಯಲ್ಲಿ ಪರೇಶ್ ಮೇಸ್ತಾ, ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ರುದ್ರೇಶ್ ಅವರಂತಹ ಹಿಂದೂ ಕಾರ್ಯಕರ್ತರ ಕೊಲೆ ನಡೆದಿತ್ತು. ಇವೆಲ್ಲ ಕಾಂಗ್ರೆಸ್ ಪಕ್ಷದ ಅತಿಯಾದ ತುಷ್ಟಿಕರಣದ ನೇರ ಪ್ರಭಾವದಿಂದ ಆಗಿರುವ ದಾರುಣ ಹತ್ಯೆಗಳು. ಈಗ ಸಹೋದರ ಸುಹಾಸ್ ಶೆಟ್ಟಿ ಕೊಲೆಗೂ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೆ ಕಾರಣ. ಕರ್ನಾಟಕವನ್ನು ಪಾ'ಕೈ'ಸ್ತಾನ ಮಾಡಲು ಹೊರಟಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳು ತಕ್ಕ ಪಾಠ ಕಲಿಸುವ ದಿನ ದೂರವಿಲ್ಲ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಆಪೋಶನ ಮಾಡಿಕೊಂಡಿರುವ ಗೂಂಡಾಗಳು, ಸಮಾಜಘಾತುಕ ಶಕ್ತಿಗಳು ಕೊಲೆ, ಸುಲಿಗೆ, ಅತ್ಯಾಚಾರ ಹಾಗೂ ದೌರ್ಜನ್ಯಗಳಲ್ಲಿ ನಿರತವಾಗಿವೆ. ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಅವರ ಭೀಕರ ಕೊಲೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಮತೀಯವಾದಿ ಹಿಂದೂ ವಿರೋಧಿ ರಕ್ಕಸರು ನಡು ರಸ್ತೆಯಲ್ಲೇ ಅಟ್ಟಹಾಸಗೈದು ಕೊಲೆಗೈಯುತ್ತಿರುವ ದೃಶ್ಯ ನಾವು ಯಾವ ನೆಲದಲ್ಲಿ ವಾಸಿಸುತ್ತಿದ್ದೇವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ, ಈ ಅಮಾನುಷ ಘಟನೆಯನ್ನು ತೀವ್ರವಾಗಿ ಖಂಡಿಸುವೆ ಎಂದು ಹೇಳಿದ್ದಾರೆ.

ಸುಹಾಸ್ ಬರ್ಬರ ಕೊಲೆಗೀಡಾಗಿರುವ ಘಟನೆಯ ಹಿನ್ನೆಲೆ ಪೂರ್ವನಿಯೋಜಿತ ಎನ್ನುವುದು ಸುಸ್ಪಷ್ಟ. ಈ ಹಿನ್ನೆಲೆಯಲ್ಲಿ ಇದು ಗುಪ್ತಚರ ಇಲಾಖೆಯ ವೈಫಲ್ಯವೋ? ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತವರ ಹೊಣೆಗೇಡಿತನ ಕಾರಣವೋ? ಎಂಬ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ.

ಕಾಶ್ಮೀರದಲ್ಲಿ ಹಿಂದೂಗಳ ಮಾರಣ ಹೋಮದ ಸುದ್ದಿ ಇನ್ನೂ ಹಸಿಯಾಗಿರುವಾಗಲೇ, ಹಿಂದೂ ಕಾರ್ಯಕರ್ತನನ್ನು ಕೊಚ್ಚಿಕೊಂದಿರುವ ಮಂಗಳೂರು ಘಟನೆಯನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣುತ್ತಿದೆ. ಮೇಲಿಂದ ಮೇಲೆ ಕರ್ನಾಟಕದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು ರಾಜ್ಯದ ಜನತೆ ತೀವ್ರ ಆತಂಕಿತರಾಗಿದ್ದಾರೆ.

ಕಾನೂನು ಸುವ್ಯವಸ್ಥೆಯನ್ನು ಕೊಲೆಗಡುಕರು, ದುಷ್ಟರ ಕೈಗೆ ಒಪ್ಪಿಸಿರುವಂತೆ ಕಾಣುತ್ತಿರುವ ಈ ಕಾಂಗ್ರೆಸ್ ಸರ್ಕಾರದ ಮುಷ್ಟಿಯಿಂದ ರಾಜ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸುವಂತೆ ಒತ್ತಾಯಿಸುವೆ. ಮೃತ ಕಾರ್ಯಕರ್ತನ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಕಾರ್ಯಕರ್ತ ಸುಹಾಸ್ ಅವರ ಕುಟುಂಬ ವರ್ಗದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವೆ ಎಂದು ತಿಳಿಸಿದ್ದಾರೆ.

ಮಂಗಳೂರು ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಅವರು ಪ್ರತಿಕ್ರಿಯಿಸಿ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮತಾಂಧರ ದ್ವೇಷಕ್ಕೆ ಬಲಿಯಾಗಿದ್ದು, ಮಂಗಳೂರಿನಲ್ಲಿ ಮತ್ತೇ ಮೂಲಭೂತವಾದಿಗಳ ಅಟ್ಟಹಾಸಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಗ್ರೀನ್ ಸಿಗ್ನಲ್ ನೀಡಿರುವುದು ಸ್ಪಷ್ಟ. ಸುಹಾಸ್ ಆತ್ಮಕ್ಕೆ ಸದ್ಗತಿ ಕೋರುತ್ತಾ, ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮತ್ತೊಬ್ಬ ನಮ್ಮ ಹಿಂದೂ ಕಾರ್ಯಕರ್ತ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಅವರು ಪ್ರತಿಕ್ರಿಯಿಸಿ, ಮಂಗಳೂರಿನಲ್ಲಿ ನಡೆದ ಕೋಮು ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಕೊಲೆಯ ಘಟನೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿ ಕಾನೂನು ಮತ್ತು ಸುವ್ಯವಸ್ಥೆ ದಿನೇ ದಿನೇ ದುರ್ಬಲಗೊಳ್ಳುತ್ತಿದೆ ಎಂದು ತೋರಿಸುತ್ತದೆ. ರಾಜ್ಯದ ಸುರಕ್ಷತೆ ಅಪಾಯದಲ್ಲಿರುವುದು ತುಂಬಾ ದುರದೃಷ್ಟಕರ. ಕೋಮು ಹಿಂಸಾಚಾರಕ್ಕೆ ಕಾಂಗ್ರೆಸ್ ಸರ್ಕಾರವೇ ಪ್ರೋತ್ಸಾಹ ನೀಡುತ್ತಿದೆಯೇ ಅಥವಾ ಅವರನ್ನು ನಿರ್ಲಕ್ಷಿಸುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT