ಮಂಗಳೂರು ಪೊಲೀಸ್ (ಸಂಗ್ರಹ ಚಿತ್ರ) 
ರಾಜ್ಯ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ, ನಿಷೇಧಾಜ್ಞೆ ಜಾರಿ

2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್‌ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಲಾಗಿದೆ.

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023, ಸೆಕ್ಷನ್ 163, ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡಲು ಸಂಬಂಧಿಸಿದೆ. ಇದು ಸಾರ್ವಜನಿಕ ತೊಂದರೆ ಅಥವಾ ಅಪಾಯಕಾರಿ ಸಂದರ್ಭಗಳನ್ನು ತಡೆಗಟ್ಟಲು ಆದೇಶಗಳನ್ನು ಜಾರಿಗೊಳಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ಗಳಿಗೆ ನೀಡುತ್ತದೆ. ಈ ವಿಭಾಗವು ಹಿಂದಿನ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) 1973ರ ಸೆಕ್ಷನ್ 144ರ ಹೊಸ ರೂಪವಾಗಿದೆ.

ಹಿಂದುತ್ವಪರ ಕಾರ್ಯಕರ್ತ, ರೌಡಿ ಶೀಟರ್‌ ಸುಹಾಸ್‌ ಶೆಟ್ಟಿಯನ್ನು ದುಷ್ಕರ್ಮಿಗಳ ತಂಡವು ಬಜಪೆಯ ಕಿನ್ನಿಪದವಿನಲ್ಲಿ ತಲವಾರಿನಿಂದ ಕೊಚ್ಚಿ ಗುರುವಾರ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬಜಪೆಯ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು. ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಯಾದ ಬೆನ್ನಲ್ಲೇ ಸುರತ್ಕಲ್‌ನಲ್ಲಿ 2022ರ ಜುಲೈ 28ರಂದು ನಡೆದಿದ್ದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್‌ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಕಳೆದ ವರ್ಷ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ತಿಳಿದುಬಂದಿದೆ.

‘ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್‌, ಪ್ರಜ್ವಲ್‌, ಅನ್ವಿತ್‌, ಲತೀಶ್‌ ಹಾಗೂ ಶಶಾಂಕ್‌ ಜೊತೆ ತೆರಳುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳ ತಂಡ ಸ್ವಿಫ್ಟ್‌ ಕಾರು ಹಾಗೂ ಪಿಕಪ್ ವಾಹನದಲ್ಲಿ ಹಿಂಬಾಲಿಸಿತ್ತು.

ಬಜಪೆ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ರಾತ್ರಿ 8.27ಕ್ಕೆ ಕಾರನ್ನು ಏಕಾಏಕಿ ಅಡ್ಡಗಟ್ಟಿ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಕೊನೆಯುಸಿರೆಳೆದಿದ್ದ ಎಂದು ವರದಿಗಳು ತಿಳಿಸಿವೆ.

ಇನ್ನು ಘಟನೆಯಲ್ಲಿ ಸುಹಾಸ್‌ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದು, ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT