ಪವಿತ್ರ 
ರಾಜ್ಯ

ಮೈಸೂರು: ಡಿ.ಕೆ ಸುರೇಶ್ ಪತ್ನಿ ಎಂದು ಹೇಳಿ ವಿಡಿಯೊ ಮಾಡಿದ್ದ ಸರ್ಕಾರಿ ಶಾಲೆ ಶಿಕ್ಷಕಿ ಬಂಧನ

ತನ್ನ ಚಿತ್ರಗಳನ್ನು ಎಡಿಟ್ ಮಾಡಿ ಸುರೇಶ್ ಚಿತ್ರದೊಂದಿಗೆ ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು. ವಿಡಿಯೊ ಕೂಡ ಹರಿಬಿಟ್ಟಿದ್ದಳು.

ರಾಮನಗರ: ತಾನು ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ರಾಮನಗರ ಸಿಇಎನ್ ಠಾಣೆ ಪೊಲೀಸರು ಗುರುವಾರ ಮೈಸೂರಿನಲ್ಲಿ ಬಂಧಿಸಿದ್ದಾರೆ.

ಮೈಸೂರು ತಾಲ್ಲೂಕಿನ ಇಲವಾಲದ ಪವಿತ್ರ ಬಂಧಿತ ಶಿಕ್ಷಕಿ. ಸಮೀಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಪವಿತ್ರ ಕನಕಪುರ ತಾಲ್ಲೂಕಿನ ದೊಡ್ಡಆಲಹಳ್ಳಿ ಮೂಲದವರು. ಪತಿಯಿಂದ ವಿಚ್ಛೇದನ ಪಡೆದಿರುವ ಆಕೆ ಪ್ರತ್ಯೇಕವಾಗಿ ವಾಸವಾಗಿದ್ದರು. ಮಾನಸಿಕವಾಗಿಯೂ ಕುಗ್ಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತನ್ನ ಚಿತ್ರಗಳನ್ನು ಎಡಿಟ್ ಮಾಡಿ ಸುರೇಶ್ ಚಿತ್ರದೊಂದಿಗೆ ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು. ವಿಡಿಯೊ ಕೂಡ ಹರಿಬಿಟ್ಟಿದ್ದಳು. ಪವಿತ್ರ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಮೈಸೂರಿಗೆ ತೆರಳಿ ಬಂಧಿಸಲಾಯಿತು. ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು ಎಂದು ಮೂಲಗಳು ಹೇಳಿವೆ.

ಅಕ್ಕಪಕ್ಕದ ಮನೆಯವರಿಂದ ಪವಿತ್ರಾ ಅವರಿಗೆ ಕಿರಿಕಿರಿ ಹೆಚ್ಚಾಗಿತ್ತು ಎನ್ನಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಹಾಗೂ ಡಿಕೆ ಸುರೇಶ್‌ ಪತ್ನಿ ಎಂದರೆ ಜನ ಹೆದರುತ್ತಾರೆ ಎಂಬ ಕಾರಣಕ್ಕಾಗಿ ಈ ರೀತಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

Viral Video: 'ರೀಲ್ಸ್‌ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ, ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

SCROLL FOR NEXT