ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

SSLC ಪರೀಕ್ಷೆ: BBMP ಶಾಲೆಗಳಲ್ಲಿ ಶೇ. 55.78ರಷ್ಟು ಫಲಿತಾಂಶ; ಶೇ 95ಕ್ಕೂ ಹೆಚ್ಚು ಅಂಕ ಗಳಿಸಿದ 3 ವಿದ್ಯಾರ್ಥಿನಿಯರು

ಈ ಪೈಕಿ ಬಿಬಿಎಂಪಿಯ ಶಾಲೆಯ ಮೂವರು ವಿದ್ಯಾರ್ಥಿನಿಯರು ಶೇ.95ಕ್ಕಿಂತ ಹೆಚ್ಚಿನ ಅಂಕ ಪಡೆದುಕೊಂಡಿದ್ದು, ಒಟ್ಟಾರೆ 78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸಂಗ್ರಹ ಚಿತ್ರ
Manjula VN
Updated On : 3 May 2025, 10:25 am

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33 ಪ್ರೌಢ ಶಾಲೆಯ 2,257 ವಿದ್ಯಾರ್ಥಿಗಳು ಎಸ್ಎಸ್‌ಎಲ್‌'ಸಿ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದು, ಈ ಮೂಲಕ ಶೇ.55.78 ರಷ್ಟು ಫಲಿತಾಂಶ ಬಂದಿದೆ.

ಈ ಪೈಕಿ ಬಿಬಿಎಂಪಿಯ ಶಾಲೆಯ ಮೂವರು ವಿದ್ಯಾರ್ಥಿನಿಯರು ಶೇ.95ಕ್ಕಿಂತ ಹೆಚ್ಚಿನ ಅಂಕ ಪಡೆದುಕೊಂಡಿದ್ದು, ಒಟ್ಟಾರೆ 78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಬಿಬಿಎಂಪಿ ಬಸವನಗುಡಿ ಪ್ರೌಢಶಾಲೆ ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿದೆ. ಶಾಂತಿ ನಗರ ಪ್ರೌಢಶಾಲೆಯು ಶೇ.88.89ರಷ್ಟು, ಶ್ರೀರಾಮಪುರ ಪ್ರೌಢಶಾಲೆಯು ಶೇ.86.21ರಷ್ಟು ಫಲಿತಾಂಶ ಪಡೆದಿದೆ. ಆದರೆ, ಪರೀಕ್ಷೆಗೆ ಹಾಜರಾಗಿದ್ದ ಕಾಕ್ಸ್‌ಟೌನ್ ಪ್ರೌಢ ಶಾಲೆಯ 10 ವಿದ್ಯಾರ್ಥಿಗಳೂ ಅನುತ್ತೀರ್ಣಗೊಂಡಿದ್ದಾರೆ.

Advertisement

Advertisement

ಬಿಬಿಎಂಪಿ 33 ಪ್ರೌಢ ಶಾಲೆಗಳ ಪೈಕಿ 14 ಶಾಲೆಗಳಲ್ಲಿ ಶೇ.50ಕ್ಕಿಂತ ಹೆಚ್ಚಿನ ಫಲಿತಾಂಶ ಪಡೆದಿವೆ. 19 ಶಾಲೆಗಳು ಶೇ.50ಕ್ಕಿಂತ ಕಡಿಮೆ ಫಲಿತಾಂಶ ಪಡೆದುಕೊಂಡಿವೆ. ಹೇರೋಹಳ್ಳಿ ಪ್ರೌಢಶಾಲೆಯ ಬಿ. ಆರ್.ಶಾಲಿನಿ 614 (ಶೇ.98.24), ಶ್ರೀರಾಮಪುರ ಪ್ರೌಢಶಾಲೆಯ ಡಿ.ರಾಜೇಶ್ವರಿ 610 (ಶೇ 97.60) ಅಂಕ ಪಡೆದಿದ್ದಾರೆ.

78 ವಿದ್ಯಾರ್ಥಿಗಳಿಗೆ ತಲಾ ರೂ.25 ಸಾವಿರ: ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 78 ವಿದ್ಯಾರ್ಥಿಗಳಿಗೆ ಬಿಬಿಎಂಪಿಯಿಂದ ತಲಾ ರೂ.25 ಸಾವಿರ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

Also Read

Karnataka SSLC Results-1 2025: ಶೇ.66.14 ವಿದ್ಯಾರ್ಥಿಗಳು ತೇರ್ಗಡೆ; 22 ಮಂದಿ ರಾಜ್ಯಕ್ಕೆ ಪ್ರಥಮ; ದಕ್ಷಿಣ ಕನ್ನಡ ಮೊದಲ ಸ್ಥಾನ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments