ಸುನೀಲ್ ಕುಮಾರ್ 
ರಾಜ್ಯ

ಮಂಗಳೂರು: ಹಿಂದೂತ್ವದ ಧ್ವನಿ ಅಡಗಿಸಲು ಕೋಮು ವಿರೋಧಿ ಕಾರ್ಯಪಡೆ ರಚನೆ- ಸುನೀಲ್ ಕುಮಾರ್

ದಕ್ಷಿಣ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಲ್ಲಿ ಹಿಂಸಾಚಾರ ತಡೆಯುವ ಉದ್ದೇಶದಿಂದ ಸರ್ಕಾರ ಕೋಮು ವಿರೋಧಿ ಕಾರ್ಯಪಡೆ ರಚಿಸುತ್ತಿಲ್ಲ.

ಮಂಗಳೂರು: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರಕಾರ ಕೆಲವರೊಂದಿಗೆ ಸಭೆ ನಡೆಸಿದ್ದು, ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಶನಿವಾರ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಲ್ಲಿ ಹಿಂಸಾಚಾರ ತಡೆಯುವ ಉದ್ದೇಶದಿಂದ ಸರ್ಕಾರ ಕೋಮು ವಿರೋಧಿ ಕಾರ್ಯಪಡೆ ರಚಿಸುತ್ತಿಲ್ಲ. ಬದಲಿಗೆ ಹಿಂದುತ್ವ ಪರ ಧ್ವನಿಗಳನ್ನು ಹತ್ತಿಕ್ಕುವ ಉದ್ದೇಶದಿಂದ ಕೂಡಿದೆ ಎಂದು ವಾಗ್ದಾಳಿ ನಡೆಸಿದರು.

ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಮುನ್ನ ಗೃಹ ಸಚಿವ ಜಿ ಪರಮೇಶ್ವರ್ ಅವರು ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಕೆಲವು ಮುಖಂಡರು ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅವರ ನಡವಳಿಕೆಯು ಈಗ ಆಡಳಿತದ ಮೇಲೆ ಸವಾರಿ ಮಾಡಲು ಪ್ರಯತ್ನಿಸುತ್ತಿದೆ ಎಂಬುದನ್ನು ಸೂಚಿಸುತ್ತದೆ ಎಂದು ಅವರು ಆರೋಪಿಸಿದರು.

ರಾಜ್ಯ ಗೃಹ ಇಲಾಖೆಯನ್ನು ಕರಾವಳಿಯ ಜಿಹಾದಿಗಳ ಪಾದದಡಿಯಲ್ಲಿ ಇಡಲಾಗುತ್ತಿದೆಯೇ ಎಂದು ಪ್ರಶ್ನಿಸಿದ ಸುನೀಲ್ ಕುಮಾರ್, ಕೊಲೆ ಆರೋಪಿಗಳ ಬಗ್ಗೆ ಸಹಾನುಭೂತಿ ಹೊಂದಿರುವವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ.

ಕೋಮು ವಿರೋಧಿ ಪಡೆ ರಚಿಸುವ ಉದ್ದೇಶ ಸ್ಪಷ್ಟವಾಗಿದೆ. ಹಿಂದುತ್ವದ ಧ್ವನಿ ಅಡಗಿಸಲು ಸರ್ಕಾರವು ಪೊಲೀಸರನ್ನು ಬಳಸಿಕೊಳ್ಳುತ್ತದೆ. ಶಾಂತಿಯನ್ನು ಉತ್ತೇಜಿಸುವ ಬದಲು, ಹಿಂದಿನ ಪಿಎಫ್‌ಐ ಅಂಶಗಳ ಹಿತಾಸಕ್ತಿಗಳನ್ನು ಕಾಪಾಡುವುದು ಸರ್ಕಾರದ ಆದ್ಯತೆಯಾಗಿದೆ" ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ 2022 ರಲ್ಲಿ ಹತ್ಯೆಗೀಡಾದ ಮೊಹಮ್ಮದ್ ಫಾಜಿಲ್ ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಸುನೀಲ್ ಕುಮಾರ್,

ಫಾಜಿಲ್ ಸಹೋದರ ಆದಿಲ್, ಸುಹಾಸ್ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರು ಬಹಿರಂಗಪಡಿಸಿದ್ದಾರೆ. ಒಂದು ವೇಳೆ ಅದು ನಿಜವಾದಲ್ಲಿ ಸ್ಪೀಕರ್ ಸ್ಥಾನಕ್ಕೆ ಖಾದರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್