ಸುಹಾಸ್ ಶೆಟ್ಟಿ  
ರಾಜ್ಯ

ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಸಹಜ ಸ್ಥಿತಿಯತ್ತ ಮಂಗಳೂರು: ಮೇ 6ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಪ್ರಕ್ಷುಬ್ಧ ಸ್ಥಿತಿಯಲ್ಲಿದ್ದ ಮಂಗಳೂರು ಇಂದು ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಇಂದು ಬೆಳಗ್ಗೆಯಿಂದ ಬಸ್, ಆಟೋರಿಕ್ಷಾ ಸಂಚಾರ ಆರಂಭವಾಗಿದೆ.

ಮಂಗಳೂರು: ಹಿಂದುತ್ವ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ನಂತರ ಉದ್ವಿಗ್ನತೆ ಭುಗಿಲೆದ್ದ ನಂತರ, ಇಂದು ಶನಿವಾರ ಮಂಗಳೂರಿನಲ್ಲಿ ಪರಿಸ್ಥಿತಿ ಶಾಂತವಾಗಿದೆ.

ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ರೌಡಿಶೀಟರ್ ಮತ್ತು ಹಿಂದುತ್ವ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ.ನಿನ್ನೆ ನಿಷೇಧಾಜ್ಞೆ ನಡುವೆ ದಕ್ಷಿಣ ಕನ್ನಡ ಬಂದ್ ಘೋಷಿಸಲಾಗಿತ್ತು.

ಇಂದು ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ, ನಗರದ ಹೆಚ್ಚಿನ ಭಾಗಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜೀವನ ಸಾಮಾನ್ಯವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಯ ನಂತರ, ವಿಎಚ್‌ಪಿ ಮಂಗಳೂರು ನಗರದಲ್ಲಿ ಬಂದ್‌ಗೆ ಕರೆ ನೀಡಿದ್ದು, ಅಂಗಡಿ-ಮುಂಗಟ್ಟು ಮುಚ್ಚಿದೆ. ಪಂಪ್‌ವೆಲ್ ಮತ್ತು ಕಂಕನಾಡಿ ಪ್ರದೇಶಗಳ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದ ನಂತರ ಮತ್ತು ಕೆಲವು ಹಲ್ಲೆ ಪ್ರಕರಣಗಳು ದಾಖಲಾಗಿದ್ದರಿಂದ ಉಪನಗರ ಪ್ರದೇಶಗಳಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಗೃಹ ಸಚಿವ ಜಿ ಪರಮೇಶ್ವರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರಿಗೆ ಧಾವಿಸಿ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮತ್ತು ಉಪ ಆಯುಕ್ತ ಮುಲ್ಲೈ ಮುಹಿಲನ್ ಅವರೊಂದಿಗೆ ಉನ್ನತ ಮಟ್ಟದ ಚರ್ಚೆ ನಡೆಸಿದರು.

ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿ ಶಾಂತವಾಗಿರಲು ಮನವಿ ಮಾಡಿದರು, ಹಿಂಸಾಚಾರ ಮತ್ತು ಅಡಚಣೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದರು. ಮಂಗಳೂರು ಉಪನಗರ ಪ್ರದೇಶಗಳಲ್ಲಿ ಬಸ್ ಸೇವೆಯನ್ನು ಇನ್ನೂ ಸ್ಥಗಿತಗೊಳಿಸಲಾಗಿದೆ.

8 ಆರೋಪಿಗಳು ಬಲೆಗೆ

ಸುಹಾಸ್ ಶೆಟ್ಟಿ ಕೊಲೆ ಕೇಸ್‌ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ.

ಇಂದು ಗೃಹ ಸಚಿವ ಪರಮೇಶ್ವರ್ ಭೇಟಿ

ಪ್ರಕ್ಷುಬ್ಧ ಸ್ಥಿತಿಯಲ್ಲಿರುವ ಮಂಗಳೂರಿಗೆ ಇಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಭೇಟಿ ನೀಡಲಿದ್ದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಬಗ್ಗೆ ಮಾಧ್ಯಮಗಳ ಮುಂದೆ ಸಂಪೂರ್ಣ ಮಾಹಿತಿ ನೀಡುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT