ಸಾಂದರ್ಭಿಕ ಚಿತ್ರ  
ರಾಜ್ಯ

ಇಂದು ದೇಶಾದ್ಯಂತ ನೀಟ್ ಪರೀಕ್ಷೆ: ಕಿವಿಯೋಲೆ, ಸರ, ಬಳೆ, ಹೈ ಹೀಲ್ಸ್ ಧರಿಸುವಂತಿಲ್ಲ!

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ.

ಬೆಂಗಳೂರು: 2025-26ನೇ ಸಾಲಿನ ವೈದ್ಯಕೀಯ ಪ್ರವೇಶಕ್ಕೆ ಇಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್‌ಟಿಎ ವತಿಯಿಂದ ನೀಟ್ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ.

ದೇಶಾದ್ಯಂತ ಏಕಕಾಲಕ್ಕೆ ನಡೆಯುವ ಈ ಪರೀಕ್ಷೆಗೆ ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲ್ಲಿದೆ. ರಾಜ್ಯದ 1.49 ಲಕ್ಷ ವಿದ್ಯಾರ್ಥಿಗಳು ನೀಟ್​ ಪರೀಕ್ಷೆ ಬರೆಯಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.

ಇಂದು ನಡೆಯುವ ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್‌ ಕಾರ್ಡ್ ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಹಾಜರಾಗಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ.

ನೀಟ್ ಪರೀಕ್ಷೆಯ ಮಾರ್ಗಸೂಚಿಗಳು ಏನು?

ನೀಟ್ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್‌ಟಿಎ ಕೆಲವೊಂದು ವಸ್ತ್ರಸಂಹಿತೆಯನ್ನ ನೀಡಿದೆ. ನೀಟ್ ಪರೀಕ್ಷೆಗೆ ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್, ನತ್ತು, ಹೈ ಹಿಲ್ ಚಪ್ಪಲಿ ನಿಷೇಧವಿದೆ. ಯಾವುದೇ ಲೋಹದ ಉಪಕರಣ ಧರಿಸಲು ಅವಕಾಶವಿಲ್ಲ. ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ ದೊಡ್ಡ ಬಟನ್ ಗಳಿರುವ ಶರ್ಟ್, ಪ್ಯಾಂಟ್, ಶೂ, ಸಾಕ್ಸ್ ಧರಿಸುವಂತಿಲ್ಲ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಲು ಅಥವಾ ಧರಿಸಲು ಕೂಡ ಅವಕಾಶವಿಲ್ಲ.

ಇತ್ತೀಚೆಗೆ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳಿಗೆ ಬೀದರ್ ಮತ್ತು ಶಿವಮೊಗ್ಗದಲ್ಲಿ ಜನಿವಾರ ತೆಗೆಸಿ ತೀವ್ರ ವಿವಾದವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT