ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಕ್ಯಾಮ್ಸ್. 
ರಾಜ್ಯ

SSLC ಪರೀಕ್ಷಾ ವ್ಯವಸ್ಥೆ ಪುನಾರಚನೆಗೆ KAMS ಆಗ್ರಹ

ಮನವಿ ಪತ್ರದಲ್ಲಿ ಉತ್ತೀರ್ಣಕ್ಕೆ ಬೇಕಾದ ಕನಿಷ್ಠ ಶೇಕಡಾವಾರು ಅಂಕಗಳನ್ನು ಆಂತರಿಕ ಮತ್ತು ಬಾಹ್ಯ ಮೌಲ್ಯಮಾಪನದ ಸಂಯೋಜಿತ ಮಾದರಿಯಲ್ಲಿ 33ಕ್ಕೆ ಇಳಿಸಬೇಕು ಎಂದು ಕ್ಯಾಮ್ಸ್ ಒತ್ತಾಯಿಸಿದೆ.

ಬೆಂಗಳೂರು: ಸಿಬಿಎಸ್‌ಇ, ಐಸಿಎಸ್ ಮಾದರಿ ರಾಜ್ಯ ಪಠ್ಯಕ್ರಮದಲ್ಲೂ 10ನೇ ತರಗತಿ ಪರೀಕ್ಷಾ ವ್ಯವಸ್ಥೆ ಪುನಾರಚಿಸಬೇಕೆಂದು ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್) ಆಗ್ರಹಿಸಿದೆ.

ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಸದಸ್ಯರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಶನಿವಾರ ಮನವಿ ಪತ್ರವನ್ನು ಸಲ್ಲಿಸಿದರು. ಮೇ,7 ರಂದು ಮನವಿ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತವಾಗಿ ಸಲ್ಲಿಸಲು ಮುಂದಾಗಿದ್ದಾರೆ.

ಮನವಿ ಪತ್ರದಲ್ಲಿ ಉತ್ತೀರ್ಣಕ್ಕೆ ಬೇಕಾದ ಕನಿಷ್ಠ ಶೇಕಡಾವಾರು ಅಂಕಗಳನ್ನು ಆಂತರಿಕ ಮತ್ತು ಬಾಹ್ಯ ಮೌಲ್ಯಮಾಪನದ ಸಂಯೋಜಿತ ಮಾದರಿಯಲ್ಲಿ 33ಕ್ಕೆ ಇಳಿಸಬೇಕು ಎಂದು ಕ್ಯಾಮ್ಸ್ ಒತ್ತಾಯಿಸಿದೆ.

ರಾಜ್ಯ ಪಠ್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ತಪ್ಪಿಸಲು ಸರ್ಕಾರ 2025-26ನೇ ಸಾಲಿನಿಂದಲೇ ಎಸ್ಸೆಸ್ಸೆಲ್ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು. ಇದರಿಂದ ಕಫಲಿತಾಂಶ ಹೆಚ್ಚುತ್ತದೆ. ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ 10ನೇ ತರಗತಿ ಉತ್ತೀರ್ಣಕ್ಕೆ ವಿಷಯವಾರು 33 ಅಂಕ ಪಡೆಯಬೇಕು. ಇಷ್ಟೂ ಅಂಕಗಳು ಲಿಖಿತ ಪರೀಕ್ಷೆಯಿಂದಲೇ ಬರಬೇಕಿಲ್ಲ. ಆಂತರಿಕ ಮೌಲ್ಯಮಾಪನದಲ್ಲಿ 20ಕ್ಕೆ 20 ಅಂಕ ಪಡೆದರೆ ಲಿಖಿತ ಪರೀಕ್ಷೆಯಲ್ಲಿ 13 ಪಡೆದರೂ ಸಾಕು. ಆದರೆ, ರಾಜ್ಯ ಪಠ್ಯಕ್ರಮದಲ್ಲಿ ಶೇ.35 ಅಂಕವನ್ನು ಲಿಖಿತ ಪರೀಕ್ಷೆಯಲ್ಲೇ ಗಳಿಸಬೇಕಿದೆ ಉದಾ: ಗಣಿತದಲ್ಲಿ 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಪಾಸಾಗಲು ಕನಿಷ್ಠ 28(ಶೇ.35) ಅಂಕ ಪಡೆಯಲೇಬೇಕು. ಆಂತರಿಕ ಮೌಲ್ಯಮಾಪನದಲ್ಲಿ 20ಕ್ಕೆ 20 ಅಂಕ ಪಡೆದರೂ ಪರಿಗಣಿಸುವುದಿಲ್ಲ. ಇದರಿಂದ ಎಸ್ಸೆಸ್ಸೆಲ್ಸಿ ನಂತರದ ಶಿಕ್ಷಣ ಪಡೆಯುವಾಗ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ.

ಈ ಅನ್ಯಾಯ ತಪ್ಪಿಸಲು ತೇರ್ಗಡೆ ಅಂಕಗಳನ್ನು 33ಕ್ಕೆ ಇಳಿಸುವ ಜೊತೆಗೆ 1ನೇ ತರಗತಿಯಿಂದಲೇ ನಿರಂತರವಾಗಿ ಮಕ್ಕಳ ಕಲಿಕಾ ಮಟ್ಟ ಅಳೆಯುವ ಫಾರ್ಮೇಟಿವ್‌ ಮೌಲ್ಯಮಾಪನ ಜಾರಿಗೊಳಿಸಬೇಕು. ಆರ್‌ಟಿಇ ಕಾಯ್ದೆ ತಿದ್ದುಪಡಿ 2019ರ ಸೆಕ್ಷನ್‌ 16ರ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು. ಗಣಿತ ಮತ್ತು ವಿಜ್ಞಾನದಲ್ಲಿ ಎರಡು ಮಟ್ಟದ (ಬೇಸಿಕ್‌/ಸ್ಟ್ಯಾಂಡರ್ಡ್‌) ಪರೀಕ್ಷಾ ಆಯ್ಕೆಗಳನ್ನು ಪರಿಚಯಿಸಬೇಕು. ಉತ್ತಮವಾಗಿ ಓದುವ ವಿದ್ಯಾರ್ಥಿಗೆ ಕಠಿಣವಾದ ಪ್ರಶ್ನೆ ಪತ್ರಿಕೆ, ಓದಿನಲ್ಲಿ ಹಿಂದಿರುವವರಿಗೆ ಸಾಧಾರಣ ಅಥವಾ ಸುಲಭ ಪ್ರಶ್ನೆ ಪತ್ರಿಕೆ ನೀಡುವ ಪದ್ಧತಿಯನ್ನು ಪರಿಚಯಿಸಬೇಕೆಂದು ಆಗ್ರಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT