ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಯುವಂತೆ ಒತ್ತಾಯಿಸಿದ ಇಬ್ಬರು ಸಿಬ್ಬಂದಿ ಬಂಧನ

ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ.

ಕಲಬುರಗಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ಒತ್ತಾಯಿಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ಅವರು ಇಂದು ತಿಳಿಸಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಸಿಬ್ಬಂದಿ ವಿರುದ್ಧ ಭಾನುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ ಎಂದು ಶರಣಪ್ಪ ಅವರು ಹೇಳಿದ್ದಾರೆ.

ಬಂಧಿತ ಆರೋಪಿಗಳನ್ನು ಶರಣಗೌಡ ಮತ್ತು ಗಣೇಶ್ ಎಂದು ಗುರುತಿಸಲಾಗಿದೆ. ಅವರ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸರು ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಕಾಯ್ದೆಯ ಸೆಕ್ಷನ್ 298 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಶರಣಪ್ಪ ಅವರು ತಿಳಿಸಿದ್ದಾರೆ.

ಬಂಧಿತ ಇಬ್ಬರು ಆರೋಪಿಗಳು ಖಾಸಗಿ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಭಾನುವಾರ ನೀಟ್ ಪರೀಕ್ಷೆ ಬರೆಯಲು ನಗರದ ಸೆಂಟ್ ಮೇರಿ ಶಾಲೆಗೆ ಬಂದಿದ್ದ ಬಸವಕಲ್ಯಾಣದ ಶ್ರೀಪಾದ ಪಾಟೀಲ್ ಎಂಬ ವಿದ್ಯಾರ್ಥಿಯನ್ನು ತಪಾಸಣಾ ಸಿಬ್ಬಂದಿ ತಡೆದು, ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಸೂಚನೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಖಂಡಿಸಿ ಬ್ರಾಹ್ಮಣ ಸಮುದಾಯದ ಸದಸ್ಯರು ನಿನ್ನೆ ಪ್ರತಿಭಟನೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT