ಹೆಚ್ ಡಿ ದೇವೇಗೌಡ 
ರಾಜ್ಯ

ಉಗ್ರರನ್ನು ಸದೆಬಡಿಯಲು ಪ್ರಧಾನಿ ಮೋದಿಗೆ ಜೆಡಿಎಸ್ ಬೆಂಬಲ: ಹೆಚ್.ಡಿ ದೇವೇಗೌಡ

ಹಾಸನ ತಾಲೂಕು ದ್ಯಾಪಲಾಪುರದಲ್ಲಿ ದೇಗುಲ ಉದ್ಘಾಟಿಸಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಕಗ್ಗೊಲೆ ಮಾಡಿದ ಉಗ್ರರ ವಿರುದ್ಧ ಪ್ರಧಾನಿ ದೃಢ ನಿರ್ಧಾರ ಕೈಗೊಂಡಿದ್ದಾರೆ

ಹಾಸನ: ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಪ್ರತೀಕಾರವಾಗಿ ಪ್ರಧಾನಿ ನರೇಂದ್ರ ಮೋದಿ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಸೋಮವಾರ ಹೇಳಿದ್ದಾರೆ.

ಹಾಸನ ತಾಲೂಕು ದ್ಯಾಪಲಾಪುರದಲ್ಲಿ ದೇಗುಲ ಉದ್ಘಾಟಿಸಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಕಗ್ಗೊಲೆ ಮಾಡಿದ ಉಗ್ರರ ವಿರುದ್ಧ ಪ್ರಧಾನಿ ದೃಢ ನಿರ್ಧಾರ ಕೈಗೊಂಡಿದ್ದಾರೆ. ಕಾಶ್ಮೀರದಲ್ಲಿ ಉಪಟಳ ನೀಡುತ್ತಿರುವ ಉಗ್ರರು ಎಲ್ಲೇ ಅಡಗಿದ್ದರೂ ಹೊರಗೆಳೆದು ಶಿಕ್ಷಿಸುವರೆಗೂ ಬಿಡುವುದಿಲ್ಲ ಎಂದು ಪ್ರಧಾನಿ ಘೋಷಿಸಿದ್ದಾರೆ.

ಯಾವುದೇ ಕ್ರಮ ಕೈಗೊಳ್ಳಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಉಗ್ರರನ್ನು ಸದೆಬಡಿಯಲು ಪ್ರಧಾನಿಗೆ ನಮ್ಮ ಬೆಂಬಲವಿದೆ ಎಂದರು.

ಪಾಕಿಸ್ತಾನದಿಂದ ಆಮದಾಗುವ ಮತ್ತು ಪಾಕಿಸ್ತಾನಕ್ಕೆ ಭಾರತದಿಂದ ರಫ್ತಾಗುವ ವಸ್ತುಗಳ ಮೇಲೆ ನಿರ್ಬಂಧ ಹೇರುವ ಕಠಿಣ ಕ್ರಮ ಕೈಗೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. 26 ಪ್ರವಾಸಿಗರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ದಾಳಿಯ ನಂತರ ಸಿಂಧೂ ನದಿ ನೀರು ಒಪ್ಪಂದ ರದ್ದತಿ ಸೇರಿದಂತೆ ಪಾಕಿಸ್ತಾನದ ವಿರುದ್ಧ ಹಲವಾರು ಕ್ರಮಗಳನ್ನು ಭಾರತ ತೆಗೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT