ಬಂಧಿತ ಆರೋಪಿ ಶ್ರೀಕಾಂತ್. 
ರಾಜ್ಯ

ಬೆಂಗಳೂರು: Eco World tech park ಬಳಿ ಮಹಿಳೆಗೆ ಲೈಂಗಿಕ ಕಿರುಕುಳ; ಕಾಮುಕ ಬಂಧನ

ಆರೋಪಿಯನ್ನು ದೇವರಬೀಸನಹಳ್ಳಿ ನಿವಾಸಿ ಶ್ರೀಕಾಂತ್ (32) ಎಂದು ಗುರುತಿಸಲಾಗಿದೆ, ಈತ ಎಂಬಿಎ ಪದವೀಧರನಾಗಿದ್ದು, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆಂದು ತಿಳಿದುಬಂದಿದೆ.

ಬೆಂಗಳೂರು: ದೇವರಬೀಸನಹಳ್ಳಿಯ ಇಕೋ ವರ್ಲ್ಡ್ ಟೆಕ್ ಪಾರ್ಕ್‌ನ ಮುಖ್ಯ ದ್ವಾರದ ಬಳಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾರತ್ತಹಳ್ಳಿ ಪೊಲೀಸರು ಖಾಸಗಿ ಕಂಪನಿಯ ಉದ್ಯೋಗಿಯನ್ನು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಯನ್ನು ದೇವರಬೀಸನಹಳ್ಳಿ ನಿವಾಸಿ ಶ್ರೀಕಾಂತ್ (32) ಎಂದು ಗುರುತಿಸಲಾಗಿದೆ, ಈತ ಎಂಬಿಎ ಪದವೀಧರನಾಗಿದ್ದು, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆಂದು ತಿಳಿದುಬಂದಿದೆ.

ಏಪ್ರಿಲ್ 30 ರಂದು ಭೋಗನಹಳ್ಳಿ ನಿವಾಸಿ 26 ವರ್ಷದ ಮಹಿಳೆಯೊಬ್ಬರು ಟೆಕ್ ಪಾರ್ಕ್‌ನ ಮುಖ್ಯ ದ್ವಾರದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿತ್ತು.

ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಶ್ರೀಕಾಂತ್ ಹಿಂದಿನಿಂದ ಬಂದು ಮಹಿಳೆಗೆ ಬೆನ್ನಿಗೆ ಕೆಳಗೆ ಹೊಡೆದಿದ್ದಾನೆ. ನಂತರ ಮುಂದೆ ಹೋಗಿ ಮತ್ತೆ ಯೂಟರ್ನ್ ತೆಗೆದುಕೊಂಡು ಮತ್ತೊಮ್ಮೆ ಮಹಿಳೆಗೆ ಕಿರುಕುಳ ನೀಡಿ, ಪರಾರಿಯಾಗಿದ್ದಾನೆ. ಈ ವೇಳೆ ಸ್ಥಳೀಯರಾರೂ ನೆರವಿಗೆ ಬರಲಿಲ್ಲ ಎಂದು ದೂರಿನಲ್ಲಿ ಮಹಿಳೆ ಹೇಳಿದ್ದರು. ದೂರ ಹಿನ್ನೆಲೆಯಲ್ಲಿ ಮಾರತಹಳ್ಳಿ ಪೊಲೀಸರು ಆರೋಪಿ ಬಂಧಿಸಲು ವಿಶೇಷ ತಂಡಗಳನ್ನು ರಚಿಸಿದ್ದರು. ಇದರಂತೆ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಾಗಿ ಹುಡುಕಾಟ ನಡೆಸಿದ್ದ ಅಧಿಕಾರಿಗಳು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

habitual offender ಕುರಿತು ನಿರ್ಧರಿಸಲು ತನಿಖೆ ನಡೆಸಲಾಗುತ್ತಿದೆ ಎಂದು ವೈಟ್‌ಫೀಲ್ಡ್ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ; ಆದರೆ ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

SCROLL FOR NEXT