ರಾಜ್ಯ

ಮಂಡ್ಯ ಶಿಕ್ಷಕಿ ದೀಪಿಕಾ ಹತ್ಯೆ: ಮಗಳನ್ನು ಹತ್ಯೆಗೈದಿದ್ದ ಆರೋಪಿಯ ತಂದೆಯನ್ನು ಕೊಂದು ಪ್ರತೀಕಾರ!

ಶಿಕ್ಷಕಿ ದೀಪಿಕಾಳನ್ನು ಮೇಲುಕೋಟೆಯ ಬೆಟ್ಟದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮಗಳನ್ನು ಕಳೆದುಕೊಂಡ ತಂದೆಯ ಆಕ್ರೋಶ ಕುದಿಯುತ್ತಲೇ ಇತ್ತು.

ಮಂಡ್ಯ: ಶಿಕ್ಷಕಿ ದೀಪಿಕಾಳನ್ನು ಮೇಲುಕೋಟೆಯ ಬೆಟ್ಟದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮಗಳನ್ನು ಕಳೆದುಕೊಂಡ ತಂದೆಯ ಆಕ್ರೋಶ ಕುದಿಯುತ್ತಲೇ ಇತ್ತು. ಅದಕ್ಕೆ ಒಂದು ವರ್ಷದ ಬಳಿಕ ಪ್ರತೀಕಾರ ಹೇಳಿದ್ದು ತನ್ನ ಮಗಳನ್ನು ಕೊಲೆ ಮಾಡಿದ್ದ ಆರೋಪಿ ನಿತೀಶ್ ಎಂಬಾತನ ತಂದೆಯನ್ನು ದೀಪಿಕಾಳ ತಂದೆ ಹತ್ಯೆ ಮಾಡಿದ್ದಾರೆ.

2024ರ ಜನವರಿ 22ರಂದು ದೀಪಿಕಾ ಮೇಲುಕೋಟೆ ಬೆಟ್ಟದಲ್ಲಿ ಶವವಾಗಿ ಪತ್ತೆಯಾಗಿದ್ದಳು. ತೀವ್ರ ವಿಚಾರಣೆ ನಡೆಸಿದ್ದ ಪೊಲೀಸರು ನಿತೀಶ್ ಎಂಬಾತನನ್ನು ಬಂಧಿಸಿದ್ದರು. ಮಗಳನ್ನು ಕಳೆದುಕೊಂಡ ನೋವಿನಲ್ಲಿದ್ದ ದೀಪಿಕಾಳ ತಂದೆ ವೆಂಕಟೇಶ್ ಆರೋಪಿ ನಿತೀಶ್ ತಂದೆ ನರಸಿಂಹೇಗೌಡನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ನನ್ನ ಮಗಳನ್ನ ಸಾಯಿಸಿ ನಿನ್ನ ಮಗಳಿಗೆ ಮದುವೆ ಮಾಡುತ್ತಿದ್ದಿಯಾ ಎಂದು ಕೊಲೆ ಮಾಡಿ ಎಸ್ಕೆಪ್ ಆಗಿದ್ದಾನೆ. ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೆಂಕಟೇಶ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಘಟನೆ ಏನು?

ಎರಡು ವರ್ಷಗಳಿಂದ ಶಿಕ್ಷಿಕ ದೀಪಿಕಾ ಮತ್ತು ನಿತೀಶ್ ನಡುವೆ ಸಂಬಂಧ ಇತ್ತು. ಈ ವಿಷಯ ತಿಳಿದು ನಿತೀಶ್‌ಗೆ ದೀಪಿಕಾ ಗಂಡ ಹಾಗೂ ಕುಟುಂಬಸ್ಥರು ವಾರ್ನಿಂಗ್ ಕೂಡ ಕೊಟ್ಟಿದ್ದರು. ಕುಟುಂಬಸ್ಥರ ವಾರ್ನಿಂಗ್ ಬಳಿಕ ಇಬ್ಬರು ದೂರವಾಗಿದ್ದರು. ಇದರಿಂದ ನಿತೀಶ್ ಮನನೊಂದಿದ್ದನು. ಬಳಿಕ 2024 ಜನವರಿ 19ರಂದು ತನ್ನ ಹುಟ್ಟುಹಬ್ಬದ ನೆಪದಲ್ಲಿ ಮೇಲುಕೋಟೆಯ ಬೆಟ್ಟಕ್ಕೆ ದೀಪಿಕಾಳನ್ನು ನಿತೀಶ್ ಕರೆಸಿಕೊಂಡಿದ್ದನು. ಅಲ್ಲಿ ಇಬ್ಬರ ನಡುವೆ ಜಗಳ ಆರಂಭವಾಗಿತ್ತು. ನಂತರ ಕೋಪಗೊಂಡ ನಿತೀಶ್ ದೀಪಿಕಾಳನ್ನು ಹತ್ಯೆ ಮಾಡಿದ್ದನು.

ದೀಪಿಕಾ ಸಾಮಾಜಿಕ ಮಾಧ್ಯಮ ರೀಲ್‌ಗಳನ್ನು ಮಾಡುವುದನ್ನು ಇಷ್ಟಪಡುತ್ತಿದ್ದರು ಮತ್ತು ಅವರ ಪ್ರದೇಶದಲ್ಲಿ ಚಿರಪರಿಚಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT