ಸುದ್ದಿ ಮುಖ್ಯಾಂಶಗಳು online desk
ರಾಜ್ಯ

News headlines 07-05-2025 | ಪಾಕ್ ವಿರುದ್ಧ Operation Sindoor, ಸಿದ್ದರಾಮಯ್ಯ ಮೆಚ್ಚುಗೆ!, ನಾಡೋಜ ಮಹೇಶ್ ಜೋಶಿಗೆ ಜೀವ ಬೆದರಿಕೆ, ಭದ್ರತೆಗೆ ಸೂಚನೆ; ಐಐಟಿ ಧಾರವಾಡ ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ

ಪಾಕ್ ವಿರುದ್ಧ ಭಾರತದ OperationSindoor ಕಾರ್ಯಾಚರಣೆ 9 ಭಯೋತ್ಪಾದಕ ಶಿಬಿರ ನಾಶ 80 ಉಗ್ರರ ಸಾವು!

ಭಾರತ ಪಾಕಿಸ್ತಾನದ ಮೇಲೆ ಮತ್ತೊಂದು ನಿರ್ದಿಷ್ಟ ದಾಳಿ ನಡೆಸಿದ್ದು, ಪಾಕ್, ಪಿಒಕೆಯಲ್ಲಿರುವ 9 ಉಗ್ರ ನೆಲೆಗಳನ್ನು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಧ್ವಂಸಗೊಳಿಸಿದೆ. ಈ ಮೂಲಕ ಭಾರತ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರ ತೆಗೆದುಕೊಂಡಿದೆ. ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಭಾರತೀಯ ಸೇನಾಧಿಕಾರಿಗಳು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದು ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರನಸುಕಿನ ಜಾವ 1.05 ರಿಂದ 1.30ರ ನಡುವೆ ಪ್ರಾರಂಭಿಸಿದವು. 9 ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು. ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗದಂತೆ ಮತ್ತು ಯಾವುದೇ ನಾಗರಿಕರ ಜೀವಹಾನಿಯಾಗದಂತೆ ಸ್ಥಳಗಳನ್ನು ಆಯ್ಕೆ ಮಾಡಲಾಯಿತು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಿತ್ರ ರಾಷ್ಟ್ರಗಳಿಗೆ ಭಾರತದ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.

OperationSindoor ಕಾರ್ಯಾಚರಣೆಗೆ Siddaramaiah ಮೆಚ್ಚುಗೆ

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ್' ಕೈಗೊಂಡಿದ್ದು ಅಭಿನಂದನಾರ್ಹ ಎಂದು ಹೇಳಿದ್ದಾರೆ. ಹಣೆಗೆ ಕುಂಕುಮ ಇಟ್ಟುಕೊಂಡು ಪತ್ರಿಕಾಗೋಷ್ಠಿಗೆ ಬಂದಿದ್ದ ಸಿಎಂ ಸಿದ್ದರಾಮಯ್ಯ, ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಜೊತೆಗೆ ನಾವು ನಿಲ್ಲುತ್ತೇವೆ ಎಂದು ಹೇಳಿದರು. ಈ ನಡುವೆ ಕಾಂಗ್ರೆಸ್ ನ ಸಮಾಜಿಕ ಜಾಲತಾಣದ ವಿಭಾಗ ಎಡವಟ್ಟು ಮಾಡಿಕೊಂಡಿದ್ದು, ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಜನಾಕ್ರೋಶದ ಬೆನ್ನಲ್ಲೇ ಕಾಂಗ್ರೆಸ್ ತನ್ನ ಟ್ವೀಟ್ನ್ನು ಡಿಲೀಟ್ ಮಾಡಿದೆ. ಭಾರತೀಯ ಸೇನೆ ಪಾಕ್ ವಿರುದ್ಧ ನಡೆಸಿದ Operation Sindoor ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ವಿವಿಧೆಡೆ ವಿಮಾನ ಸಂಚಾರ ರದ್ದುಗೊಳಿಸಿದೆ. ಬೆಂಗಳೂರಿನಿಂದ ಹಲವು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ಸಹ ರದ್ದು ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಗುಜರಾತ್, ರಾಜಸ್ಥಾನದ ಜೋಧಪುರ್, ಉತ್ತರ ಪ್ರದೇಶದ ಅಯೋಧ್ಯೆ, ಲಖನೌ ಮತ್ತು ಘಾಜಿಯಾಬಾದ್ಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ.

ಬೆಂಗಳೂರು ಸೇರಿ ದೇಶಾದ್ಯಂತ ನಡೆದ mock drill

ಭಾರತ-ಪಾಕ್ ನಡುವೆ ಯುದ್ಧ ವಾತಾವರಣ ಹಿನ್ನೆಲೆ ದೇಶದಾದ್ಯಂತ ಇಂದು ನಾಗರಿಕ ರಕ್ಷಣಾ ಮಾಕ್ಡ್ರಿಲ್ ನಡೆಸಲಾಗಿದೆ. ಅದರಂತೆ ಬೆಂಗಳೂರಿನ ಹಲಸೂರು ಕೆರೆ ಸೇರಿದಂತೆ ಬೆಂಗಳೂರಿನ 35 ಸ್ಥಳಗಳಲ್ಲಿ, ರಾಜ್ಯದ 3 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆದಿದೆ. ಮಾಕ್ ಡ್ರಿಲ್ ಅಂಗವಾಗಿ ಎರಡು ನಿಮಿಷಗಳ ಕಾಲ ಸೈರನ್ ಮೊಳಗಿದ್ದು, ಯುದ್ದದ ಸನ್ನಿವೇಶದಲ್ಲಿ ಹೇಗೆ ರಕ್ಷಣೆ ಮಾಡಿಕೊಳ್ಳಬೇಕು, ಯಾವ ರೀತಿಯ ಎಚ್ಚರಿಕೆ ವಹಿಸಬೇಕೆಂದು ಅಗ್ನಿಶಾಮಕ ಮುಖ್ಯಸ್ಥರು ಜನರಿಗೆ ಅರಿವು ಮೂಡಿಸಿದ್ದಾರೆ.

IITDharwad ಸೇರಿ 5 IITಗಳ ಶೈಕ್ಷಣಿಕ ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರದ ಒಪ್ಪಿಗೆ

ರಾಜ್ಯದ ಧಾರವಾಡ ಐಐಟಿ ಸೇರಿದಂತೆ ದೇಶದ ಐದು ಐಐಟಿಗಳಲ್ಲಿ 11,828.79 ಕೋಟಿ ರೂ. ವೆಚ್ಚದಲ್ಲಿ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಜ್ಯದ ಧಾರವಾಡ ಐಐಟಿ ಹಾಗೂ ಆಂಧ್ರಪ್ರದೇಶ ತಿರುಪತಿ ಐಐಟಿ, ಛತ್ತೀಸ್‌ಗಢದ ಭಿಲಾಯಿ ಐಐಟಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ ಮತ್ತು ಕೇರಳದ ಪಾಲಕ್ಕಾಡ್‌ಗಳಲ್ಲಿ ಸ್ಥಾಪಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ(ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಅನುಮೋದನೆ ನೀಡಿತು ಎಂದು ಹೇಳಿದ್ದಾರೆ.

ಕ.ಸಾ.ಪ ಅಧ್ಯಕ್ಷ ಮಹೇಶ್ ಜೋಶಿಗೆ ಜೀವ ಬೆದರಿಕೆ, ಭದ್ರತೆ ನೀಡಲು ಹೈಕೋರ್ಟ್ ಸೂಚನೆ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರಿಗೆ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ಪೊಲೀಸ್ ರಕ್ಷಣೆ ಹಾಗೂ ಖಾಸಗಿ ಗನ್ ಮ್ಯಾನ್ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಾಲಯದ ಮುಂದೆ ಇರಿಸಲಾದ ಬೆದರಿಕೆ ವಿಶ್ಲೇಷಣಾ ವರದಿಯನ್ನು ಪರಿಶೀಲಿಸಿದ ನಂತರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಇತ್ತೀಚೆಗೆ ಈ ಆದೇಶವನ್ನು ಹೊರಡಿಸಿದ್ದಾರೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಂತರ, ತಮಗೆ ಜೀವ ಬೆದರಿಕೆ ಬರುತ್ತಿದೆ ಎಂದು ಮಹೇಶ್ ಜೋಶಿ ದೂರು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT