ನಮ್ಮ ಮೆಟ್ರೋ ಟಿಕೆಟ್ ಮೆಷಿನ್ 
ರಾಜ್ಯ

Namma Metro: ಟಿಕೆಟ್ ಖರೀದಿ ಇನ್ನೂ ಸುಲಭ; self-service ticket machine ಅಳವಡಿಸಿದ BMRCL

ಬೆಂಗಳೂರು ಮೆಟ್ರೋ ರೈಲು ನಿಗಮವು ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಅಳವಡಿಸಿರುವ ಈ ಸ್ವಯಂ ಸೇವಾ ಟಿಕೆಟ್ ನೀಡುವ ಯಂತ್ರಗಳು 30 ಸೆಕೆಂಡುಗಳಲ್ಲಿ ಟಿಕೆಟ್​ಗಳನ್ನು ಒದಗಿಸುತ್ತವೆ.

ಬೆಂಗಳೂರು: ಮೆಟ್ರೋ ರೈಲು ಪ್ರಯಾಣಿಕರಿಗೆ BMRCL ಸಿಹಿಸುದ್ದಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮವು ಹೊಸ ಕ್ಯೂ.ಆರ್​ ಟಿಕೆಟ್ ಯಂತ್ರಗಳನ್ನು ಪರಿಚಯಿಸಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮವು ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಅಳವಡಿಸಿರುವ ಈ ಸ್ವಯಂ ಸೇವಾ ಟಿಕೆಟ್ ನೀಡುವ ಯಂತ್ರಗಳು 30 ಸೆಕೆಂಡುಗಳಲ್ಲಿ ಟಿಕೆಟ್​ಗಳನ್ನು ಒದಗಿಸುತ್ತವೆ. ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಇಂತಹ 10 ಯಂತ್ರಗಳನ್ನು ಸ್ಥಾಪಿಸಲಾಗಿದೆ ಎಂದು ಬಿಎಂಆರ್​ಸಿಎಲ್​​ ತಿಳಿಸಿದೆ.

ಜನದಟ್ಟಣೆ ನಿಯಂತ್ರಣಕ್ಕೆ ಈ ಕ್ರಮ

ಮೆಟ್ರೋ ರೈಲು ನಿಲ್ದಾಣಗಳಲ್ಲಿ ಸಾಮಾನ್ಯವಾಗಿ ಜನದಟ್ಟಣೆ ಉಂಟಾಗುತ್ತದೆ. ಟಿಕೆಟ್ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತದೆ. ಈ ಸರತಿ ಸಾಲು ಜನದಟ್ಟಣೆ ತಪ್ಪಿಸಲು ಬಿಎಂಆರ್ ಸಿಎಲ್ ಈ ಯಂತ್ರಗಳನ್ನು ಅಳವಡಿಸಿದೆ. ಈ ಯಂತ್ರಗಳ ಬಳಕೆ ಮಾಡುವ ಮೂಲಕ ಪ್ರಯಾಣಿಕರು ಇನ್ನು ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ.

ಕೆಲವೇ ಕ್ಲಿಕ್ ಗಳಲ್ಲಿ ಟಿಕೆಟ್

ಈ ಯಂತ್ರಗಳಿಂದ ಮೂರರಿಂದ ನಾಲ್ಕು ಕ್ಲಿಕ್‌ನಲ್ಲಿ ವೇಗವಾಗಿ ಮತ್ತು ಸುಲಭವಾಗಿ ಟಿಕೆಟ್ ಪಡೆಯಬಹುದು. ವೇಗವಾಗಿ ಮತ್ತು ಸುಲಭವಾಗಿ ಟಿಕೆಟ್ ಪಡೆಯಲು ಮೆಟ್ರೋ ನಿಲ್ದಾಣದಲ್ಲಿ ಸ್ವಯಂ ಸೇವಾ ಕ್ಯೂ.ಆರ್ ಟಿಕೆಟ್ ಯಂತ್ರಗಳ ವ್ಯವಸ್ಥೆ ಮಾಡಲಾಗಿದೆ. ಆ ಮೂಲಕ ಪ್ರಯಾಣಿಕರು 30 ಸೆಕೆಂಡುಗಳಿಗಿಂತ ಕಡಿಮೆ ಅವಧಿಯಲ್ಲಿ ಟಿಕೆಟ್ ಪಡೆಯಬಹುದಾಗಿ ಎಂದು ಬಿಎಂಆರ್​ಸಿಎಲ್ (BMRCL)​ ತಿಳಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರು ಬೆಂಗಳೂರು ಮೆಟ್ರೋ ರೈಲು ನಿಗಮ, ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಉತ್ತಮಪಡಿಸಲು ಮತ್ತು ಡಿಜಿಟಲ್ ನವೀನತೆಗಳನ್ನು ಅಳವಡಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಬಿಎಂಆರ್‌ಸಿಎಲ್ ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ 10 ನೂತನ ಸ್ವಯಂ ಸೇವಾ ಟಿಕೆಟ್ ಯಂತ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.

‘ಪ್ರಯಾಣಿಕರ ಅನುಭವವನ್ನು ಸುಧಾರಿಸಲು ನಾವು ತಂತ್ರಜ್ಞಾನವನ್ನು ಅಳವಡಿಸುತ್ತಿದ್ದೇವೆ. ಸ್ವಯಂ ಸೇವಾ ಟಿಕೆಟ್ ಯಂತ್ರಗಳ ಪರಿಚಯವು ನಮ್ಮ ಮೆಟ್ರೋ ಸೇವೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ, ಸುಗಮವಾಗಿ ಮತ್ತು ಆಧುನಿಕ ಪಾವತಿ ವಿಧಾನಗಳೊಂದಿಗೆ ಹೊಂದಿಕೊಳ್ಳುವಂತೆ ಮಾಡುವ ಮಹತ್ವದ ಹೆಜ್ಜೆಯಾಗಿದೆ. ಪ್ರಯಾಣಿಕರ ಅನುಕೂಲತೆ ಮತ್ತು ಸುಲಭ ಪ್ರವೇಶದತ್ತ ಇದು ನಮ್ಮ ಬದ್ಧತೆಯ ಪ್ರತಿಬಿಂಬವಾಗಿದೆ’ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ವಿಶೇಷತೆ ಏನು?

ಈ ಯಂತ್ರಗಳು QR-ಆಧಾರಿತ ಟಿಕೆಟ್‌ಗಳನ್ನು ತ್ವರಿತವಾಗಿ ಮತ್ತು ಸಂಪರ್ಕರಹಿತವಾಗಿ ವಿತರಿಸಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದ್ದು, ಇದು ಸಾಂಪ್ರದಾಯಿಕ ಏಕ ಪ್ರಯಾಣ ಟೋಕನ್‌ಗಳನ್ನು ಕ್ರಮೇಣ ಬದಲಾಯಿಸುತ್ತದೆ ಎಂದು ಮಾಹಿತಿ ನೀಡಿದೆ. ಈ ಕ್ಯೂಆರ್ ಟಿಕೆಟ್‌ಗಳನ್ನು ನಿಲ್ಯಾಣದ ಎಂಟ್ರಿ ಮತ್ತು ಎಕ್ಸಿಟ್ ಗೇಟ್‌ಗಳಲ್ಲಿ ಬಳಸಬಹುದಾಗಿದೆ. ಪ್ರಯಾಣ ಮುಗಿಸಿದ ನಂತರ, ಪ್ರಯಾಣಿಕರು ಟಿಕೆಟ್‌ಗಳನ್ನು ನಿಗದಿತ ಕಸದ ಬಾಕ್ಸುಗಳಲ್ಲಿ ಹಾಕುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ. ಇದು ಸ್ವಚ್ಛತೆ ಮತ್ತು ಪರಿಸರಸ್ನೇಹಿ ಕ್ರಮಗಳ ಭಾಗವಾಗಿದೆ.

ಟಿಕೆಟ್ ಪಡೆಯುವುದು ಹೇಗೆ?

1.ನಿಮ್ಮ ಗಮ್ಯಸ್ಥಾನ ಆಯ್ಕೆಮಾಡಿ: ಪ್ರಯಾಣಿಕರು ಡ್ರಾಪ್-ಡೌನ್ ಮೆನು ಅಥವಾ ನಕ್ಷೆಯನ್ನು ಉಪಯೋಗಿಸಿ ಗಮ್ಯಸ್ಥಾನವನ್ನು ಆಯ್ಕೆ ಮಾಡಬಹುದು. ನಂತರ ಪ್ರಯಾಣಿಕರ ಸಂಖ್ಯೆಯನ್ನು ನಮೂದಿಸಿ, ಫೇರ್ ಪರಿಶೀಲಿಸಬಹುದು.

2.ಪಾವತಿ ಮಾಡಿ: ಯಾವುದೇ ಯುಪಿಐ ಆಧಾರಿತ ಮೊಬೈಲ್ ಆ್ಯಪ್​ಗಳ ಮೂಲಕ ಪಾವತಿ ಮಾಡಬಹುದಾಗಿದೆ. ಪಾವತಿ ಯಶಸ್ವಿಯಾದ ನಂತರ ತಕ್ಷಣವೇ ಪೇಪರ್ ಕ್ಯೂಆರ್ ಟಿಕೆಟ್ ಪ್ರಕಟವಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT