ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾ, ಬೆಂಗಳೂರು 
ರಾಜ್ಯ

ಭಾರತ-ಪಾಕ್ ಉದ್ವಿಗ್ನತೆ: ಮೂರು ಗಂಟೆ ಮೊದಲೇ ವಿಮಾನ ನಿಲ್ದಾಣ ತಲುಪುವಂತೆ ಪ್ರಯಾಣಿಕರಿಗೆ ಸಲಹೆ

ಹೊಸ ಮಾರ್ಗಸೂಚಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ, ವಿಮಾನ ಹೊರಡುವ ಸಮಯಕ್ಕಿಂತ ಮೂರು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣವನ್ನು ತಲುಪುವಂತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಶುಕ್ರವಾರ ಪ್ರಯಾಣಿಕರಿಗೆ ಮನವಿ ಮಾಡಿದೆ.

ಭದ್ರತೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಲಹೆ ಮಾರ್ಗಸೂಚಿಯಲ್ಲಿ ಹೊಸ ಅಂಶವನ್ನು ಸೇರ್ಪಡೆ ಮಾಡಲಾಗಿದ್ದು, ತಪಾಸಣೆ ನಡೆಸುವ ನಿಟ್ಟಿನಲ್ಲಿ ಎಲ್ಲ ಪ್ರಯಾಣಿಕರು ವಿಮಾನ ಹೊರಡುವ ಮೂರು ಗಂಟೆಗೂ ಮುನ್ನವೇ ವಿಮಾನ ನಿಲ್ದಾಣಕ್ಕೆ ತಲುಪುವಂತೆ ಸೂಚಿಸಲಾಗಿದೆ.

ದೇಶದಾದ್ಯಂತ ಹೆಚ್ಚಿದ ಭದ್ರತಾ ದೃಷ್ಟಿಯಿಂದಾಗಿ ಎಲ್ಲ ವಿಮಾನ ನಿಲ್ದಾಣಗಳಲ್ಲಿ ವರ್ಧಿತ ಸ್ಕ್ರೀನಿಂಗ್ ಕ್ರಮಗಳು ಜಾರಿಯಲ್ಲಿವೆ. ಸುಗಮ ಚೆಕ್-ಇನ್, ಭದ್ರತೆ ಮತ್ತು ಬೋರ್ಡಿಂಗ್‌ಗಾಗಿ ಪ್ರಯಾಣಿಕರು ವಿಮಾನ ನಿರ್ಗಮಿಸುವ ಕನಿಷ್ಠ ಮೂರು ಗಂಟೆಗೂ ಮುನ್ನವೇ ನಿಲ್ದಾಣಕ್ಕೆ ಆಗಮಿಸಲು ಸೂಚಿಸಲಾಗಿದೆ' ಎಂದು ತಿಳಿಸಿದೆ.

ಹೊಸ ಮಾರ್ಗಸೂಚಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಎಲ್ಲ ವಿಮಾನಗಳಿಗೆ ದ್ವಿತೀಯ ಹಂತದ ಭದ್ರತಾ (ಸೆಕೆಂಡರಿ ಲ್ಯಾಡರ್ ಪಾಯಿಂಟ್) ತಪಾಸಣೆಯನ್ನು ಕಡ್ಡಾಯಗೊಳಿಸಿದೆ. ವಿಮಾನ ನಿಲ್ದಾಣಗಳ ಟರ್ಮಿನಲ್ ಕಟ್ಟಡಗಳಲ್ಲಿ ಸಂದರ್ಶಕರಿಗೆ ನಿಷೇಧ ಹೇರಲಾಗಿದೆ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!