ಡಿ.ಕೆ ಶಿವಕುಮಾರ್ 
ರಾಜ್ಯ

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿ.ಕೆ ಶಿವಕುಮಾರ್

ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಅಂದು ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು" ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ವಿನಂತಿ ಮಾಡಿದ್ದಾರೆ.

ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

"ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ" ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT