ಬಿಬಿಎಂಪಿ 
ರಾಜ್ಯ

ಅಸ್ತಿತ್ವ ಕಳೆದುಕೊಳ್ಳಲಿರುವ BBMP: ಮೇ 15ರಿಂದ ಗ್ರೇಟರ್‌ ಬೆಂಗಳೂರು ಜಾರಿ; ಹೊಸ ವ್ಯವಸ್ಥೆಗೆ ಮುನ್ನುಡಿ- ಸದ್ಯಕ್ಕಿಲ್ಲ ಚುನಾವಣೆ!

ಅಸ್ತಿತ್ವದಲ್ಲಿರುವ ಪ್ರದೇಶವನ್ನು ಮೂರು ಅಥವಾ ಹೆಚ್ಚಿನ ನಿಗಮಗಳಾಗಿ ವಿಭಜಿಸುವುದು ಮತ್ತು ವಾರ್ಡ್‌ಗಳ ಡಿಲಿಮಿಟೇಶನ್ ಮತ್ತು ಮೀಸಲಾತಿ ಸೇರಿದಂತೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ಇದರರ್ಥ ಬಿಬಿಎಂಪಿಗೆ ಚುನಾವಣೆಗಳು ಶೀಘ್ರದಲ್ಲೇ ನಡೆಯುವುದಿಲ್ಲ.

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇ 15ರಿಂದ ಅಸ್ತಿತ್ವ ಕಳೆದುಕೊಳ್ಳಲಿದ್ದು, ‘ಗ್ರೇಟರ್‌ ಬೆಂಗಳೂರು ಪ್ರದೇಶ’ ಎಂದು ಬದಲಾಗಲಿದೆ. ಮೇ 15 ರಂದು ಅಧಿಸೂಚನೆ ಹೊರಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದರಿಂದ, ಅದು ಈಗ ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಲಿದೆ.

ಅಸ್ತಿತ್ವದಲ್ಲಿರುವ ಪ್ರದೇಶವನ್ನು ಮೂರು ಅಥವಾ ಹೆಚ್ಚಿನ ನಿಗಮಗಳಾಗಿ ವಿಭಜಿಸುವುದು ಮತ್ತು ವಾರ್ಡ್‌ಗಳ ಡಿಲಿಮಿಟೇಶನ್ ಮತ್ತು ಮೀಸಲಾತಿ ಸೇರಿದಂತೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ಇದರರ್ಥ ಬಿಬಿಎಂಪಿಗೆ ಚುನಾವಣೆಗಳು ಶೀಘ್ರದಲ್ಲೇ ನಡೆಯುವುದಿಲ್ಲ ಎಂದು ಹೇಳಲಾಗುತ್ತಿದೆ.

ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ ರಾವ್ ಅವರನ್ನು ಬಿಬಿಎಂಪಿಯ ಮುಖ್ಯ ಆಯುಕ್ತರನ್ನಾಗಿ ಇತ್ತೀಚೆಗೆ ನೇಮಿಸಿರುವುದು ನಿಗಮವನ್ನು ವಿಭಜಿಸುವ ಯೋಜನೆಯ ಭಾಗವಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಸರ್ಕಾರ ಈಗ ಸಮಿತಿಯನ್ನು ರಚಿಸಲಿದೆ, ಇದು ವಾರ್ಡ್‌ಗಳ ಡಿಲಿಮಿಟೇಶನ್ ಬಗ್ಗೆ ಅಧ್ಯಯನ ಮಾಡುತ್ತದೆ

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ–2024 ಜಾರಿಯಾದ ಮೇಲೆ ಮುಖ್ಯಮಂತ್ರಿಯವರ ನೇತೃತ್ವದ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ (ಜಿಬಿಎ) 120 ದಿನಗಳಲ್ಲಿ ರಚನೆಯಾಗಬೇಕು. ಪ್ರಾಧಿಕಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಶಾಸಕರು– ಸಚಿವರು, ನಗರಾಭಿವೃದ್ಧಿ ಸಚಿವರು, ಪಾಲಿಕೆಗಳ ಮೇಯರ್‌ಗಳು, ಬಿಡಿಎ ಆಯುಕ್ತ, ಬೆಂಗಳೂರು ಜಲಮಂಡಳಿ ಅಧ್ಯಕ್ಷ, ಬಿಎಂಟಿಸಿ, ವ್ಯವಸ್ಥಾಪಕ ನಿರ್ದೇಶಕ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಸದಸ್ಯರಾಗಿರುತ್ತಾರೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

2007 ರಲ್ಲಿ ಬಿಬಿಎಂಪಿ ರಚಿಸಲಾಯಿತು ಮತ್ತು 2010 ರಲ್ಲಿ ಸ್ಥಳೀಯ ಚುನಾವಣೆಗಳು ನಡೆದವು. ಅದರ ನಂತರ BBMP ಕೌನ್ಸಿಲ್‌ನ ಎರಡು ಅವಧಿಗಳು ಮಾತ್ರ ನಡೆದಿವೆ. ಸೆಪ್ಟೆಂಬರ್ 2020 ರಿಂದ ಯಾವುದೇ ಚುನಾವಣೆಗಳು ನಡೆದಿಲ್ಲ ಮತ್ತು ರಾಜ್ಯದ ರಾಜಧಾನಿಯನ್ನು ಸರ್ಕಾರದಿಂದ ನೇಮಕಗೊಂಡ ಮುಖ್ಯ ಆಯುಕ್ತರು ಮತ್ತು BBMP ಆಡಳಿತಾಧಿಕಾರಿಗಳು ನಿರ್ವಹಿಸುತ್ತಿದ್ದಾರೆ.

ಹೊಸದಾಗಿ ರಚಿಸಲಾದ ನಿಗಮಗಳು ಕಟ್ಟಡಗಳು ಮತ್ತು ನಿವೇಶನಗಳ ಮೇಲೆ ತೆರಿಗೆ ಮತ್ತು ಸೇವಾ ಶುಲ್ಕ, ಮನರಂಜನಾ ತೆರಿಗೆ, ಜಾಹೀರಾತು ಶುಲ್ಕ, ವೃತ್ತಿಗಳು ಮತ್ತು ವ್ಯಾಪಾರಗಳ ಮೇಲಿನ ತೆರಿಗೆ ಮತ್ತು ಘನತ್ಯಾಜ್ಯ ನಿರ್ವಹಣೆ, ಮೂಲಸೌಕರ್ಯ, ನಗರ ಭೂ ಸಾರಿಗೆ ಮತ್ತು ಇತರವುಗಳ ಮೇಲಿನ ಸೆಸ್‌ಗಳನ್ನು ವಿಧಿಸುವ ಅಧಿಕಾರವನ್ನು ಹೊಂದಿರುತ್ತವೆ.

ಬಿಬಿಎಂಪಿಯನ್ನು ಜಿಬಿಎ ಎಂದು ಅಧಿಸೂಚಿಸುವವರೆಗೂ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ– 2024 ಜಾರಿಗೆ ಬರಲು ಸಾಧ್ಯವಿಲ್ಲ. ಈ ಕಾಯ್ದೆ ಅನುಷ್ಠಾನಕ್ಕೆ ತರಲು ಹಾಗೂ ಗ್ರೇಟರ್‌ ಬೆಂಗಳೂರು ಪ್ರದೇಶವನ್ನು ವಿಸ್ತರಿಸಲು ಅಧಿಸೂಚನೆ ಹೊರಡಿಸಲು ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಅನುಮೋದನೆ ದೊರೆತಿದೆ ಎಂದು ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT