ಸಾಂದರ್ಭಿಕ ಚಿತ್ರ  
ರಾಜ್ಯ

SSLC ಯಲ್ಲಿ ತೇರ್ಗಡೆ ದರ ಉತ್ತಮಪಡಿಸಲು ‘Mission NoDropOut’ ಉಪಕ್ರಮ

ಮಿಷನ್ ನೋಡ್ರಾಪೌಟ್ ಒಂದು ವಾಣಿಜ್ಯೇತರ ಅಭಿಯಾನವಾಗಿದ್ದು, ಮೇ 26 ರಿಂದ ಪ್ರಾರಂಭವಾಗುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ.

ಬೆಂಗಳೂರು: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣ ಶೇಕಡಾವಾರು ಪ್ರಮಾಣವನ್ನು ನಿಭಾಯಿಸಲು ಆಕ್ಟಿವ್ ಬೆಂಗಳೂರು ಫೌಂಡೇಶನ್ (ABF) 'ಮಿಷನ್ ನೋಡ್ರಾಪೌಟ್' ಉಪಕ್ರಮವನ್ನು ಪ್ರಾರಂಭಿಸಿದೆ. 2 ಬಿ ವರ್ಗದಂತಹ ಹಿಂದುಳಿದ ಹಿನ್ನೆಲೆಯ ವಿದ್ಯಾರ್ಥಿಗಳು ಶೇ. 33.86 ರ ವೈಫಲ್ಯ ದರದೊಂದಿಗೆ ಕಡಿಮೆ ಉತ್ತೀರ್ಣ ಶೇಕಡಾವಾರುಗಳನ್ನು ದಾಖಲಿಸಿದ್ದಾರೆ, ಪರಿಶಿಷ್ಟ ಪಂಗಡ (ST) ವಿದ್ಯಾರ್ಥಿಗಳಲ್ಲಿ 57.27 ಉತ್ತೀರ್ಣ ಪ್ರಮಾಣ ಮತ್ತು ಒಟ್ಟಾರೆಯಾಗಿ ಶೇಕಡಾ 58.4 ಉತ್ತೀರ್ಣ ಪ್ರಮಾಣ ಹೊಂದಿದ್ದಾರೆ.

ಮಿಷನ್ ನೋಡ್ರಾಪೌಟ್ ಒಂದು ವಾಣಿಜ್ಯೇತರ ಅಭಿಯಾನವಾಗಿದ್ದು, ಮೇ 26 ರಿಂದ ಪ್ರಾರಂಭವಾಗುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಪ್ರಸ್ತುತ, ಬೆಂಗಳೂರಿನಾದ್ಯಂತ 22 ತರಬೇತಿ ಕೇಂದ್ರಗಳು ಈ ಉಪಕ್ರಮದಲ್ಲಿ ಭಾಗವಹಿಸುತ್ತಿದ್ದು, ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪುತ್ತಿವೆ, ವಿಶೇಷವಾಗಿ ಬಡತನ ರೇಖೆಗಿಂತ ಕೆಳಗಿನ (BPL)ಕುಟುಂಬಗಳು, ನಗರ ಕೊಳೆಗೇರಿಗಳು, ಸರ್ಕಾರಿ ಶಾಲೆಗಳು ಮತ್ತು ಸಾಮಾಜಿಕ-ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವವರು. ಶಿಕ್ಷಕರು ಮತ್ತು ಶಾಲಾ ಆಡಳಿತಾಧಿಕಾರಿಗಳ ಸಹಾಯದಿಂದ ನಡೆಸಲಾಗುವ ದೈನಂದಿನ ತರಗತಿಗಳು ಕನ್ನಡ, ವಿಜ್ಞಾನ ಮತ್ತು ಗಣಿತದಂತಹ ವಿಷಯಗಳ ಮೇಲೆ ಕೇಂದ್ರೀಕರಿಸುತ್ತವೆ.

ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗಾಗಿ ನಾವು ಈ ಉಪಕ್ರಮವನ್ನು ಪ್ರಾರಂಭಿಸಿದ್ದೇವೆ, ಇಂಥವರು ಪರೀಕ್ಷೆಗಳಲ್ಲಿ ಅನುತ್ತೀರ್ಣರಾದರೆ ಶಿಕ್ಷಣ ಸ್ಥಗಿತಗೊಳ್ಳಬಹುದು ಎಂದು ಎಬಿಎಫ್‌ನ ಸ್ಥಾಪಕ ಸದಸ್ಯ ಸೈಯದ್ ತೌಸಿಫ್ ಮಜೂದ್ ಹೇಳುತ್ತಾರೆ. ಹೆಚ್ಚಿನ ಶಾಲೆಗಳು ಈ ಉಪಕ್ರಮಕ್ಕೆ ಸೇರಬೇಕೆಂದು ನಾವು ಒತ್ತಾಯಿಸುತ್ತೇವೆ, ಇಂತಹ ಕ್ರಮಗಳು ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಆಸಕ್ತರು 9364024365 ಸಂಖ್ಯೆಯನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

'ಜೀವ ಬಾಯಿಗೆ ಬಂದಿತ್ತು': ಆಗಸದಲ್ಲೇ ಗಿರಕಿ ಹೊಡೆದ ಡಿಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ, ಕೆಲಕಾಲ ಆತಂಕ! ಆಗಿದ್ದೇನು?

SCROLL FOR NEXT