ಸಂಗ್ರಹ ಚಿತ್ರ 
ರಾಜ್ಯ

ಭಾರತ-ಪಾಕ್ ಸೇನಾ ಸಂಘರ್ಷದ ನಡುವೆಯೇ Pakistan ಪರ ಪೋಸ್ಟ್: ವಿಜಯಪುರ ವಿದ್ಯಾರ್ಥಿನಿ ವಿರುದ್ಧ ಕೇಸ್ ದಾಖಲು!

ಪಾಕಿಸ್ತಾನದ ಪರ ಸರಣಿ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಆಕೆಯ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ವಿದ್ಯಾರ್ಥಿನಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ವಿಜಯಪುರ: ಅತ್ತ ಗಡಿ ಪ್ರದೇಶಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ನಡೆಯುತ್ತಿರುವಂತೆಯೇ ಇತ್ತ ಕರ್ನಾಟಕದ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಪರ ಪೋಸ್ಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾಳೆ.

ಹೌದು.. ವಿಜಯಪುರದ ಅಲ್ ಅಮೀನ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ವಿರುದ್ಧ ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪಾಕಿಸ್ತಾನದ ಪರ ಸರಣಿ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಆಕೆಯ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ವಿದ್ಯಾರ್ಥಿನಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಮಾಧ್ಯಮಗಳಲ್ಲೂ ವಿದ್ಯಾರ್ಥಿನಿ ನಡೆಗೆ ಅಸಮಾಧಾನ ಏರ್ಪಟ್ಟಿತ್ತು. ಈ ಬೆಳವಣಿಗೆ ಬೆನ್ನಲ್ಲೇ ವಿದ್ಯಾರ್ಥಿನಿ ತನ್ನ ವಿವಾದಿತ ಪೋಸ್ಟ್ ಅನ್ನು ತೆಗೆದುಹಾಕಿದ್ದಾಳೆ.

ಪೋಸ್ಟ್ ನಲ್ಲೇನಿತ್ತು?

ವಿದ್ಯಾರ್ಥಿನಿ ತಶೌಧ್ ಫಾರೂಕಿ ಶೇಖ್ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿವಾದಿತ ಪೋಸ್ಟ್ ಹಂಚಿಕೊಂಡಿದ್ದಾರೆ, "ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ (ಭಾರತೀಯ ಆಕ್ರಮಿತ ಜೆಕೆ) ಜನರು ಮಿಲಿಟರಿ, ಸರ್ಕಾರಿ ಸ್ಥಾಪನೆಗಳ ಬಳಿ ಹೋಗುವುದನ್ನು ತಪ್ಪಿಸಿ. ನೀವು ಗಡಿ ವ್ಯಾಪ್ತಿಯಲ್ಲಿ 200 ಕಿಮೀ ಹತ್ತಿರ ವಾಸಿಸುತ್ತಿದ್ದರೆ, ದಯವಿಟ್ಟು ಒಳನಾಡಿಗೆ ತೆರಳಿ. ಅಲ್ಲಾಹನು ಭಾರತದಿಂದ ನಮ್ಮೆಲ್ಲರನ್ನೂ ರಕ್ಷಿಸಲಿ, ಅಮೀನ್ #SOS. ಎಂದು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಳು.

ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರ ಪ್ರಕಾರ, ವಿದ್ಯಾರ್ಥಿನಿ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪರಿಚಿತ ಮೂಲಗಳಿಂದ ಪಡೆದ ಹಲವಾರು ವಿವಾದಾತ್ಮಕ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿನಿ ತನ್ನ ವೈದ್ಯಕೀಯ ಪದವಿ ಮುಗಿದ ನಂತರ ಇಂಟರ್ನ್‌ಶಿಪ್ ಮಾಡುತ್ತಿದ್ದು, ಮುಂಬೈ ನಿವಾಸಿಯಾಗಿದ್ದಾರೆ. ಆಕೆಯ ಎಲ್ಲಾ ಪೋಸ್ಟ್‌ಗಳು ವೈರಲ್ ಆಗದಂತೆ ತಡೆಯಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. "ನಾವು ತನಿಖೆ ನಡೆಸುತ್ತೇವೆ," ಎಂದು ಹೇಳಿದರು.

ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ವಿರುದ್ಧ ಬಿಎನ್ಎಸ್ ಸೆಕ್ಷನ್ 152 ಮತ್ತು 197 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪೋಸ್ಟ್ ಡಿಲೀಟ್, ಕ್ಷಮೆಯಾಚನೆ

ಏತನ್ಮಧ್ಯೆ, ತಶೌಧ್ ಸಾಮಾಜಿಕ ಮಾಧ್ಯಮದಲ್ಲಿ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ. ತನ್ನ ಹೇಳಿಕೆಯಿಂದ ನೋಯಿಸಲ್ಪಟ್ಟ ಎಲ್ಲರಿಗೂ ಕ್ಷಮೆಯಾಚಿಸುವುದಾಗಿ ವಿದ್ಯಾರ್ಥಿನಿ ಹೇಳಿದ್ದಾರೆ. "ಒಬ್ಬ ಭಾರತೀಯಳಾಗಿ, ನಾನು ದೇಶಭಕ್ತ ಮತ್ತು ನನ್ನ ಮಾತೃಭೂಮಿಯನ್ನು ಪ್ರೀತಿಸುತ್ತೇನೆ. ಅಂತಹ ಹೇಳಿಕೆಗಳನ್ನು ನೀಡಿದ್ದು ನನ್ನ ಕಡೆಯಿಂದ ಮೂರ್ಖತನ. ಇನ್ನು ಮುಂದೆ ನಾನು ಅಂತಹ ಹೇಳಿಕೆಗಳನ್ನು ಎಂದಿಗೂ ಮಾಡುವುದಿಲ್ಲ. ಜೈ ಹಿಂದ್," ಎಂದು ಇನ್ಸ್ಟಾಗ್ರಾಮ್ನಲ್ಲಿ ಮತ್ತೊಂದು ಪೋಸ್ಟ್ ಮಾಡಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT