ಪುಟ್ಟರಂಗ ಶೆಟ್ಟಿ ಮತ್ತು ಚಾಮರಾಜ್ 
ರಾಜ್ಯ

ಚಾಮರಾಜನಗರ ಶಾಸಕ ಪುಟ್ಟರಂಗ ಶೆಟ್ಟಿಗೆ ಪುತ್ರವಿಯೋಗ: ಹಿರಿಯ ಮಗ ಚಾಮರಾಜ್ ನಿಧನ

ಪಿ.ಚಾಮರಾಜ್(42) ಪುಟ್ಟರಂಗಶೆಟ್ಟಿ ಅವರ ಹಿರಿಯ ಮಗನಾಗಿದ್ದು ಇವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದರು.

ಚಾಮರಾಜನಗರ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಅವರ ಹಿರಿಯ ಪುತ್ರ ಚಾಮರಾಜ್ ಸೋಮವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪಿ.ಚಾಮರಾಜ್(42) ಪುಟ್ಟರಂಗಶೆಟ್ಟಿ ಅವರ ಹಿರಿಮಗನಾಗಿದ್ದು ಇವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದರು. ಮಧುಮೇಹದಿಂದ ಬಳಲುತ್ತಿದ್ದ ಚಾಮರಾಜ್ ಕಳೆದ ಒಂದೂವರೆ ತಿಂಗಳಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ಹಲವು ದಿನಗಳಿಂದ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಿಸದೇ ಪಿ. ಚಾಮರಾಜ್ ಅಸುನೀಗಿದ್ದಾರೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಮತ್ತು ವೆಂಕಟಮ್ಮ‌ ದಂಪತಿಯ ಹಿರಿ ಪುತ್ರನಾಗಿರುವ ಚಾಮರಾಜ್ ಓರ್ವ ಸಹೋದರ, ಇಬ್ಬರು ಸಹೋದರಿಯರು, ಪತ್ನಿ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸ್ವಗ್ರಾಮ ಉಪ್ಪಿನಮೋಳೆಗೆ ಪಾರ್ಥೀವ ಶರೀರ ತರಲಿದ್ದು, ಅಂತಿಮ‌ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಉಪ್ಪಿನಮೋಳೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!