ಸೋನು ನಿಗಮ್ 
ರಾಜ್ಯ

ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ರಿಮಿನಲ್ ಕೇಸ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಸೋನು ನಿಗಮ್

ಏಪ್ರಿಲ್ 25 ರಂದು ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ನೇರ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಂಗಳೂರು: ‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ನಡೆಯಿತು’ಎಂದು ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ರಜಾ ಪೀಠದ ಮುಂದೆ ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆ ಮುಂದೂಡಲಾಗಿದೆ.

ಏಪ್ರಿಲ್ 25 ರಂದು ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ನೇರ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ ಅವರು ಸೋನು ನಿಗಮ ವಿರುದ್ಧ ವಿಡಿಯೋ ಸಮೇತ ಪೊಲೀಸರಿಗೆ ದೂರು ನೀಡಿದ್ದರು.

ಕರ್ನಾಟಕ ರಕ್ಷಣಾ ವೇದಿಕೆ ಶುಕ್ರವಾರ ರಾತ್ರಿ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಸೆಕ್ಷನ್ 352(1), 352(2), ಮತ್ತು 353 ರ ಅಡಿಯಲ್ಲಿ ಸೋನು ನಿಗಮ್ ವಿರುದ್ಧ ಕೇಸ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

ಹಿಜ್ಬೊಲ್ಲಾ ಉಗ್ರ ಸಂಘಟನೆ ಮೇಲೇಳದಂತೆ ಇಸ್ರೇಲ್ ಭೀಕರ ದಾಳಿ: 80ಕ್ಕೂ ಹೆಚ್ಚು ಸ್ಥಳಗಳು ಧ್ವಂಸ

ಇದ್ದಕ್ಕಿದ್ದಂತೆ Beep ಶಬ್ದ: 'ರಂಗಸ್ಥಳಂ' ನಟನಿಂದ ಅನುಚಿತ ವರ್ತನೆ? ಕೊನೆಗೂ ನಟಿ Sreeleela ಸ್ಪಷ್ಟನೆ

ಪಶ್ಚಿಮ ಬಂಗಾಳ ಚುನಾವಣೆ: 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ದೀದಿ; ಭುಗಿಲೆದ್ದ ಅಸಮಾಧಾನ

SCROLL FOR NEXT