ರಸ್ತೆಗಳ ಗುಣಮಟ್ಟ ಪರಿಶೀಲಿಸುತ್ತಿರುವ ಡಿಕೆ.ಶಿವಕುಮಾರ್. 
ರಾಜ್ಯ

ವೈಟ್ ಟಾಪಿಂಗ್ ರಸ್ತೆಗಳು ಕನಿಷ್ಠ 30 ವರ್ಷ ಕಾಲ ಬಾಳಿಕೆ ಬರಬೇಕು: ಅಧಿಕಾರಿಗಳಿಗೆ DCM ಡಿ.ಕೆ ಶಿವಕುಮಾರ್ ಸೂಚನೆ

ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು. ಹೀಗಾಗಿ ನಾನು ಆಗಾಗ್ಗೆ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದೇನೆ. ಅಧಿಕಾರಿಗಳು ತೋರಿಸುವ ಜಾಗದಲ್ಲಿ ಪರಿಶೀಲನೆ ಮಾಡುವುದಿಲ್ಲ.

ಬೆಂಗಳೂರು: ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು ಎಂದು ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ.ಶಿವಕುಮಾರ್ ಅವರು ಸೋಮವಾರ ಸೂಚನೆ ನೀಡಿದರು,

ನಗರದ ವಿವಿಧ ಕಡೆಗಳಲ್ಲಿ ಸೋಮವಾರ ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಡಿಕೆ.ಶಿವಕುಮಾರ್ ಅವರು ಪರಿಶೀಲನೆ ಮಾಡಿದರು,

ಈ ವೇಳೆ ಮಾತನಾಡಿದ ಅವರು, ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು. ಹೀಗಾಗಿ ನಾನು ಆಗಾಗ್ಗೆ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದೇನೆ. ಅಧಿಕಾರಿಗಳು ತೋರಿಸುವ ಜಾಗದಲ್ಲಿ ಪರಿಶೀಲನೆ ಮಾಡುವುದಿಲ್ಲ, ನಾನು ಎಲ್ಲಿ ಹೇಳುತ್ತೇನೋ ಅಲ್ಲಿ ನಿಲ್ಲಿಸಿ ಪರಿಶೀಲನೆ ಮಾಡಲಾಗುವುದು. ಈಗ ಪರಿಶೀಲನೆ ಮಾಡಿದಾಗ ಅರ್ಧ ಅಡಿ ರಸ್ತೆ ಇದೆ. ಈ ರಸ್ತೆಯಲ್ಲಿ ನೀರು, ಕೇಬಲ್ ಗಳಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಎಲ್ಲಾ ಶಾಸಕರು ಅಗತ್ಯ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನ ಕಸ ವಿಲೇವಾರಿ ಮಾಫಿಯಾವಾಗಿದೆ ಎಂದು ಹೇಳಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿ, ಕಸ ವಿಲೇವಾರಿ ಟೆಂಡರ್ ಕರೆಯಲು ಇದ್ದ ತಡೆಯಾಜ್ಞೆಯನ್ನು ನ್ಯಾಯಾಲಯ ವಜಾಗೊಳಿಸಿದೆ. ನಾಲ್ಕು ತಿಂಗಳ ಒಳಗೆ ಟೆಂಡರ್ ಕರೆಯಬೇಕು ಎಂದು ನ್ಯಾಯಾಲಯ ಅವಕಾಶ ನೀಡಿದ್ದು, ನಾವು ಟೆಂಡರ್ ಕರೆದು ಕಸ ವಿಲೇವಾರಿ ಕೆಲಸ ಮಾಡುತ್ತೇವೆ.

ಕೆಲವರು ಒಂದೇ ಮನೆಯಲ್ಲಿ ಕೂತು ಟೆಂಡರ್ ಹಾಕಿರುವ ದಾಖಲೆಗಳು ನಮಗೆ ಸಿಕ್ಕಿವೆ. ಅವರು ವಿರೋಧ ಪಕ್ಷದವರ ಬಳಿ ಹೋಗಿ ದೂರು ನೀಡಿದ್ದರು. ಈಗಲೂ ಏನೇನೋ ತಂತ್ರ ಮಾಡುತ್ತಿದ್ದಾರೆ. ಅವರು ಸುಮ್ಮನೆ ಕೂತಿಲ್ಲ. ಆದರೆ ನಾವು ಶುದ್ಧ ಆಡಳಿತ ಕೊಟ್ಟು ಸ್ವಚ್ಛ ಬೆಂಗಳೂರು ನಿರ್ಮಾಣ ಮಾಡುತ್ತೇವೆ. ಒಂದೇ ದಿನ ಎಲ್ಲಾ ಬದಲಾವಣೆ, ಟನಲ್, ಫ್ಲೈಓವರ್​, ಅಂಡರ್ ಪಾಸ್ ಆಗುವುದಿಲ್ಲ. ಹಂತ ಹಂತವಾಗಿ ಕೆಲಸ ಮಾಡಲಾಗುವುದು ಎಂದರು.

ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿ, ಮಳೆಗಾಲದಲ್ಲಿ ಪರಿಸ್ಥಿತಿಯನ್ನು ನಿರ್ವಹಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಧಿಕಾರಿಗಳು ಮತ್ತು ನಾನು ಜಾಗರೂಕರಾಗಿದ್ದೇವೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT