ಗೃಹ ಸಚಿವ ಡಾ. ಜಿ. ಪರಮೇಶ್ವರ್ 
ರಾಜ್ಯ

ಕೋಮು ವಿರೋಧಿ ಕಾರ್ಯಪಡೆ ಇತರ ಜಿಲ್ಲೆಗಳಿಗೂ ವಿಸ್ತರಣೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ನೈತಿಕ ಪೊಲೀಸ್‌ಗಿರಿಯ ಘಟನೆಗಳನ್ನು ಸಹ ಕೋಮು ವಿರೋಧಿ ಕಾರ್ಯಪಡೆಗೆ ವಹಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ಮತ್ತು ಅಪರಾಧ ತಡೆಯುವ ಉದ್ದೇಶದಿಂದ ರಚಿಸಲಾಗುತ್ತಿರುವ ಕೋಮು ವಿರೋಧಿ ಕಾರ್ಯಪಡೆಯನ್ನು ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.

ನೈತಿಕ ಪೊಲೀಸ್‌ಗಿರಿಯ ಘಟನೆಗಳನ್ನು ಸಹ ಕೋಮು ವಿರೋಧಿ ಕಾರ್ಯಪಡೆಗೆ ವಹಿಸಲಾಗುವುದು ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮುಗಲಭೆಗಳನ್ನು ನಿವಾರಿಸಲು ಮತ್ತು ತಗ್ಗಿಸಲು ನಕ್ಸಲ್ ವಿರೋಧಿ ಪಡೆ (ಎಎನ್‌ಎಫ್) ಮಾದರಿಯಲ್ಲಿ ಕೋಮು ವಿರೋಧಿ ಕಾರ್ಯಪಡೆ ರಚಿಸಲಾಗುವುದು ಎಂದು ಪರಮೇಶ್ವರ್ ಈ ತಿಂಗಳ ಆರಂಭದಲ್ಲಿ ಘೋಷಿಸಿದ್ದರು.

ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಈ ಬಗ್ಗೆ ಪ್ರಸ್ತಾವನೆ ಕಳುಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿತ್ತು. ಅವರು ಪ್ರಸ್ತಾವನೆ ಕಳುಹಿಸಿರುವುದಾಗಿ ನನಗೆ ತಿಳಿಸಿದ್ದಾರೆ. ಅದನ್ನು ನಾವು ಪರಿಶೀಲಿಸಿ ಸರ್ಕಾರದ ಮಟ್ಟದಲ್ಲಿ ಅನುಮೋದಿಸುತ್ತೇವೆ. ಆರಂಭದಲ್ಲಿ ಇದನ್ನು ಎರಡು ಜಿಲ್ಲೆಗಳಿಗೆ ಘೋಷಿಸಿದ್ದೇನೆ, ಈಗ ನಾವು ಅದನ್ನು ಕೋಮು ಸಮಸ್ಯೆಗಳಿರುವ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವ ಸಾಧ್ಯತೆಯಿರುವುದಾಗಿ ತಿಳಿಸಿದರು.

ನೈತಿಕ ಪೊಲೀಸ್ ಗಿರಿ ಪ್ರಕರಣಗಳನ್ನು ಕಾರ್ಯಪಡೆಗೆ ವಹಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಕೇವಲ ಸಾಮಾಜಿಕ ಸಮಸ್ಯೆಗಳಾದರೆ ಪೊಲೀಸರು ಅವುಗಳನ್ನು ನೋಡಿಕೊಳ್ಳುತ್ತಾರೆ. ಒಂದು ವೇಳೆ ಅವುಗಳು ಕೋಮು ಸ್ವರೂಪದಲ್ಲಿದ್ದರೆ ಅಂತಹವುಗಳನ್ನು ಕೋಮು ವಿರೋಧಿ ಕಾರ್ಯಪಡೆಗೆ ವಹಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ