ಕೆಐಎ 
ರಾಜ್ಯ

ಬೆಂಗಳೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಬಸ್; ಓರ್ವ ಸಾವು, 33 KIA ಸಿಬ್ಬಂದಿಗಳಿಗೆ ಗಾಯ

ಬೇಗೂರು ಜಂಕ್ಷನ್‌ನಲ್ಲಿ ಎಡ ತಿರುವು ಪಡೆದಾಗ ಅಪಘಾತ ಸಂಭವಿಸಿದೆ. ವಾಹನವನ್ನು ವೇಗವಾಗಿ ಚಲಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಉರುಳಿ ಬಿದ್ದಿದೆ.

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) 33 ಮಂದಿ ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗೂರು ಸಿಐಎಸ್‌ಎಫ್ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಸಂತೋಷ್ ಯಾದವ್ (35) ಎಂದು ಗುರ್ತಿಸಲಾಗಿದೆ. ಊಟದ ಸಮಯ ಹಿನ್ನೆಲೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೆಐಎಯ ಸುಮಾರು 35 ಮಂದಿ ಸಿಬ್ಬಂದಿಯನ್ನು ಹೊತ್ತ ಖಾಸಗಿ ಬಸ್ ಯಲಹಂಕದ ಕಡಯರಪ್ಪನಹಳ್ಳಿಯ ಪೇಯಿಂಗ್ ಗೆಸ್ಟ್ ಕಡೆಗೆ ತೆರಳುತ್ತಿತ್ತು.

ಬೇಗೂರು ಜಂಕ್ಷನ್‌ನಲ್ಲಿ ಎಡ ತಿರುವು ಪಡೆದಾಗ ಅಪಘಾತ ಸಂಭವಿಸಿದೆ. ವಾಹನವನ್ನು ವೇಗವಾಗಿ ಚಲಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಉರುಳಿ ಬಿದ್ದಿದೆ, ಬಸ್ ನ್ನು ನಾಸಿರ್ ಅಹ್ಮದ್ ಎಂಬ ಚಾಲಕ ಚಲಾಯಿಸುತ್ತಿದ್ದ ಎನ್ನಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಈ ನಡುವೆ ತೀವ್ರವಾಗಿ ಗಾಯಗೊಂಡಿದ್ದ ಸಂತೋಷ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇತರರನ್ನು ಬಿಡುಗಡೆ ಮಾಡಲಾಗಿದೆ ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಅಡ್ಡ ಬರುವ Iran ಸಣ್ಣ ಬೋಟ್ ಗಳ ಗುಂಡಿಟ್ಟು ಉಡಾಯಿಸಿ': ಅಮೆರಿಕ ಸೇನೆಗೆ Donald Trump ಆದೇಶ!

ಸ್ವಾತಂತ್ರ್ಯದ ನಂತರ ತಮಿಳುನಾಡು, ಪ.ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ, ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!

Hassan: 'ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ': ಎಚ್ ಡಿಕೆ ಮುಂದೆಯೇ HD Revanna ಕಣ್ಣೀರಿನ ಶಪಥ

IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!

IPL 2026: MI ವಿರುದ್ಧ ಸ್ಫೋಟಕ ಬ್ಯಾಟಿಂಗ್, ಶತಕದ ಮೂಲಕ ಐತಿಹಾಸ ನಿರ್ಮಿಸಿದ Sanju Samson, ಎಲೈಟ್ ಗ್ರೂಪ್ ಸೇರ್ಪಡೆ

SCROLL FOR NEXT