ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 
ರಾಜ್ಯ

3 ತಿಂಗಳಲ್ಲಿ ಗುತ್ತಿಗೆದಾರರ 32,000 ಕೋಟಿ ರೂ ಬಾಕಿ ಬಿಲ್ ಪಾವತಿ: DCM ಡಿ.ಕೆ ಶಿವಕುಮಾರ್ ಭರವಸೆ

ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಡಿಸಿಎಂಗೆ ವಿವರಿಸಿದ್ದೇವೆ. ಸಣ್ಣ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಬಿಡುಗಡೆ ಮಾಡಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ.

ಬೆಂಗಳೂರು: ಸರ್ಕಾರದಿಂದ ಗುತ್ತಿಗೆದಾರರಿಗೆ ಬಾಕಿ ಇರುವ, 32,000 ಕೋಟಿ ರೂಪಾಯಿಯನ್ನು ಮುಂದಿನ ಎರಡು-ಮೂರು ತಿಂಗಳಲ್ಲಿ ಪಾವತಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಭರವಸೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ (KSCA) ಜೊತೆ ಮಂಗಳವಾರ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಿದರು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಮಂಜುನಾಥ್, ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಡಿಸಿಎಂಗೆ ವಿವರಿಸಿದ್ದೇವೆ. ಸಣ್ಣ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಬಿಡುಗಡೆ ಮಾಡಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಸಣ್ಣ ಗುತ್ತಿಗೆದಾರರಲ್ಲಿ ಹಿರಿತನದ ಆಧಾರದ ಮೇಲೆ ಬಾಕಿ ಪಾವತಿಸುವುದಾಗಿ ಡಿಸಿಎಂ ಭರವಸೆ ನೀಡಿದ್ದಾರೆ. ಬಿಲ್‌ಗಳನ್ನು ತೆರವುಗೊಳಿಸುವಾಗ ಅಧಿಕಾರಿಗಳು ಮಾಡುವ ತಪ್ಪುಗಳು ಸಿಎಂ ಅಥವಾ ಸಚಿವರಿಗೆ ತಿಳಿದಿಲ್ಲ. ನಾವು ಇದನ್ನು ಉಪಮುಖ್ಯಮಂತ್ರಿಗಳಿಗೆ ವಿವರಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಬಾಕಿ ಬಿಲ್‌ಗಳನ್ನು ತೆರವುಗೊಳಿಸುವುದಾಗಿ ಶಿವಕುಮಾರ್ ಅವರು ಭರವಸೆ ನೀಡಿದ್ದಾರೆಂದು ತಿಳಿಸಿದರು.

ಈ ಸಭೆ ಫಲಪ್ರದವಾಗಿದೆ. ಯಾವುದೇ ಸಮಸ್ಯೆ ಇದ್ದರೆ ತಮ್ಮನ್ನು ಸಂಪರ್ಕಿಸುವಂತೆ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಅಧಿಕಾರಿಗಳು ಮಾಡಿದ ತಪ್ಪುಗಳು ಶಿವಕುಮಾರ್ ಅವರಿಗೆ ತಿಳಿದಿದೆ. ಇದನ್ನು ಸರಿಪಡಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಸಣ್ಣ ಗುತ್ತಿಗೆದಾರರಿಗೆ ಪರಿಹಾರ ಸಿಗಬೇಕೆಂದು ನಾವು ಬಯಸುತ್ತೇವೆಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್