ಪಿ.ಸಿ. ಮೋಹನ್ 
ರಾಜ್ಯ

ಪಾಕಿಸ್ತಾನಕ್ಕೆ ಬೆಂಬಲ: ಟರ್ಕಿ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಿ; ರಾಜ್ಯ ಸರ್ಕಾರಕ್ಕೆ ಪಿ.ಸಿ ಮೋಹನ್ ಆಗ್ರಹ

ಬೆಂಗಳೂರಿನಲ್ಲಿ 124-ಕಿಮೀ ಎತ್ತರದ ಕಾರಿಡಾರ್‌ಗಳು ಮತ್ತು 46-ಕಿಮೀ ಸುರಂಗಗಳ ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ಬಿಬಿಎಂಪಿ ಟರ್ಕಿ ಮೂಲದ ಆಲ್ಟಿನೋಕ್ ಕನ್ಸಲ್ಟಿಂಗ್‌ಗೆ ರೂ.4.7 ಕೋಟಿ ಪಾವತಿಸಿತ್ತು.

ಬೆಂಗಳೂರು: ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಟರ್ಕಿ ಬೆಂಬಲ ನೀಡಿರುವುದು ಸಾಬೀತಾಗಿದ್ದು, ಇದರ ಬೆನ್ನಲ್ಲೇ ಎಲ್ಲೆಡೆ ಟರ್ಕಿ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಬೆಂಗಳೂರಿನ ಪ್ರಸ್ತಾವಿತ ಸುರಂಗ ರಸ್ತೆ ಯೋಜನೆಗೆ ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸುವ ಜವಾಬ್ದಾರಿಯನ್ನು ಟರ್ಕಿ ಮೂಲದ ಆಲ್ಟಿನೋಕ್ ಕನ್ಸಲ್ಟಿಂಗ್ ಎಂಜಿನಿಯರಿಂಗ್ ಸಂಸ್ಥೆಗೆ ವಹಿಸಲಾಗಿದ್ದು, ಈ ಸಂಸ್ಥೆಯನ್ನು ನಿಷೇಧಿಸವಂತೆ ಬೆಂಗಳೂರು ಕೇಂದ್ರದ ಬಿಜೆಪಿ ಸಂಸದ ಪಿಸಿ ಮೋಹನ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿರುವ ಅವರು, ಟರ್ಕಿ ಶತ್ರು ರಾಷ್ಟ್ರವಾಗಿರುವ ಪಾಕಿಸ್ತಾನವನ್ನು ಬೆಂಬಲಿಸಿದೆ, ಆದ್ದರಿಂದ ಸರ್ಕಾರ ಟರ್ಕಿ ಸಂಸ್ಥೆಗಳನ್ನು ನಿಷೇಧಿಸಬೇಕು,. ಅವರೊಂದಿಗೆ ಯಾವುದೇ ವ್ಯವಹಾರ ನಡೆಸಬಾರದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ 124-ಕಿಮೀ ಎತ್ತರದ ಕಾರಿಡಾರ್‌ಗಳು ಮತ್ತು 46-ಕಿಮೀ ಸುರಂಗಗಳ ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ಬಿಬಿಎಂಪಿ ಟರ್ಕಿ ಮೂಲದ ಆಲ್ಟಿನೋಕ್ ಕನ್ಸಲ್ಟಿಂಗ್‌ಗೆ ರೂ.4.7 ಕೋಟಿ ಪಾವತಿಸಿತ್ತು. ಸಂಸ್ಥೆಯ ಕಾರ್ಯ ಅವರ ದೇಶದ ಸೋಂಗಾರ್ ಡ್ರೋನ್ ಗಳಂತೆಯೇ ವಿಫಲವಾಗಿತ್ತು. ಹೀಗಾಗಿ ಬಿಬಿಎಂಪಿ ಟರ್ಕಿ ಸಂಸ್ಥೆಗೆ ವಹಿಸಲಾಗಿದ್ದ ಕೆಲಸವನ್ನು ಹಿಂಪಡೆದುಕೊಂಡಿದೆ.

ನಾಸಿಕ್ ಹಾಗೂ ಮಲೆಗಾಂವ್ ನಲ್ಲಿಯೂ ಇದೇ ರೀತಿಯ ಮಾಡಲಾಗಿತ್ತು. ಇದು ಪುರಸಭೆಯ ವರ್ಚಸ್ಸಿಗೆ ಹಾನಿ ಮಾಡಿದ್ದ ಹಿನ್ನೆಲೆಯಲ್ಲಿ ಬಿಬಿಎಂಪಿ ಸಂಸ್ಥೆಗೆ 5 ಲಕ್ಷ ರೂ. ದಂಡ ವಿಧಿಸಿದೆ. ಟರ್ಕಿಯ ಈ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!