ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು-ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಪರಿಶೀಲಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಗುರುವಾರ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಬೆಂಗಳೂರು: ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು-ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಎಂಬುದನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಈ ವೇಳೆ ಗ್ರಾಮ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಂವಿಧಾನದ (73)(74)ರ ಅನ್ವಯ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿಲ್ಲ. ಮಹಿಳಾ , ಹಿಂದುಳಿದವರಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಎಂಬ ಬಗ್ಗೆ ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷರು ಗಮನ ಹರಿಸಬೇಕು. ಇದಕ್ಕಾಗಿ ನಿಯಮಿತವಾಗಿ ರಾಜ್ಯ ಪ್ರವಾಸ ಮಾಡಬೇಕು ಎಂದು ನಿರ್ದೇಶಿಸಿದರು.

ಗ್ರಾಮಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿಪಡಿಸಲಾಗಿದೆ. ಬಳಿಕ ವಿಸ್ತರಣೆಯಾಗಿರುವ ಪ್ರದೇಶವನ್ನು ಗ್ರಾಮಠಾಣಾ ಗಡಿಗೆ ಸೇರಿಸದ ಹಿನ್ನೆಲೆಯಲ್ಲಿ ವಿಸ್ತರಣೆಯಾಗಿರುವ ಪ್ರದೇಶವನ್ನು ಪುನರ್ ಸಮೀಕ್ಷೆ ನಡೆಸಿ ನಿಗದಿ ಮಾಡಬೇಕು. ಗಡಿ ಗುರುತಿಸುವಿಕೆ ಸಮೀಕ್ಷೆ ಬೇಗ ಪೂರ್ಣಗೊಳಿಸಬೇಕು. ಅನುಮತಿಗಾಗಿ ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ವತಿಯಿಂದ ಪ್ರಸ್ತಾವನೆ ಕಳುಹಿಸಿ ಎಂದು ಸೂಚನೆ ನೀಡಿದರು.

ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರಿ ಜಮೀನು ಕೊರತೆ ಉಂಟಾಗುತ್ತಿದೆ. ಭೂಸ್ವಾಧೀನ ಮಾಡಿಕೊಂಡು ಮೂಲ ಸೌಕರ್ಯ ಮಾಡಲು ಹಣಕಾಸು ವೆಚ್ಚ ಹೆಚ್ಚಾಗುತ್ತಿದೆ. ಹೀಗಾಗಿ ಅಗತ್ಯಭೂಮಿ ಗುರುತಿಸಿ ಭೂ ಬ್ಯಾಂಕ್ ಸ್ಥಾಪನೆ ಮಾಡಬೇಕು ಎಂದು ಸೂಚಿಸಿದರು.

ನಾನು ವಿಕೇಂದ್ರೀಕರಣದ ಪರ. ಅಧಿಕಾರ ಒಂದೇ ಕಡೆ ಕೇಂದ್ರೀಕರಣ ಆಗುವುದು ಒಪ್ಪುವುದಿಲ್ಲ. ಹೀಗಾಗಿ ಅಧಿಕಾರ ಗ್ರಾಮ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು. ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು ಬಜೆಟ್ ಮಂಡನೆಗೆ ಪೂರ್ವದಲ್ಲಿ ಸಭೆ ಕರೆದು ಚರ್ಚಿಸಬೇಕು. ಕಾನೂನು ಪ್ರಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ನೀತಿ ಯೋಜನೆ ಸಮಿತಿಗಳ ಆಯ್ಕೆ ಕಾಲಕಾಲಕ್ಕೆ ಆಗುವ ಕುರಿತು ಹಾಗೂ ಸಭೆಗಳು ನಿಯಮಿತವಾಗಿ ನಡೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಯಬೇಕು. ಡೀಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗು ವುದು ಎಂದರು.

ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಸಹಾಯ ಒದಗಿಸಲು ಹಣಕಾಸು ಆಯೋಗದ ಅಧ್ಯಕ್ಷರಾದ .ನಾರಾಯಣ ಸ್ವಾಮಿ ವರದಿ ನೀಡಿದ್ದು, ಜಾರಿಗೆ ಕ್ರಮಕೈಗೊಳ್ಳುತ್ತೇವೆ.ಇನ್ನು ಸಂವಿಧಾನದ 73ನೇ ತಿದ್ದುಪಡಿ ಅನ್ವಯ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಜವಾಬ್ದಾರಿ ನಕ್ಷೆ ಸಿದ್ಧಪಡಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಅದರಂತೆ ಗ್ರಾಮೀಣಾಭಿವೃದ್ಧಿ ಇಲಾಖೆ 13 ಇಲಾಖೆಗಳಿಗೆ ಸಂಬಂಧಿಸಿ ಜವಾಬ್ದಾರಿ ನಕ್ಷೆ ಸಿದ್ಧಪಡಿಸಿದ್ದು, 2ನೇ ಹಂತದಲ್ಲಿ ಬಾಕಿ ಇರುವ ಉಳಿದ 16 ಇಲಾಖೆಗಳ ಕಾರ್ಯಚಟುವಟಿಕೆಗಳ ಜವಾಬ್ದಾರಿ ನಕ್ಷೆಯನ್ನು 2025ರ ಆಗಸ್ಟ್ 15ರ ಒಳಗೆ ಪೂರ್ಣಗೊಳಿಸಿ ಎಂದು ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT