ಸಿಎಂ ಸಿದ್ದರಾಮಯ್ಯ 
ರಾಜ್ಯ

ಗ್ರೇಟರ್ ಬೆಂಗಳೂರು ಅಡಿ 3 ಪಾಲಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಕಾಯ್ದೆ ಜಾರಿಯಾಗಲಿದೆ. ಇನ್ನು ಮುಂದೆ ಬೆಂಗಳೂರು–ಗ್ರೇಟರ್ ಬೆಂಗಳೂರು ಆಗಲಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಮೇ 15 ರಿಂದ ಜಾರಿಗೆ ಬಂದಿದೆ. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ, ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಕಾಯ್ದೆ ಜಾರಿಯಾಗಲಿದೆ. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಅಂದರೆ ನಾನು ಪ್ರಾಧಿಕಾರದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ಉಂಟಾಗಿದ್ದು, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ನಡುವೆ ಸರ್ಕಾರವನ್ನು ಟೀಕಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಬೆಂಗಳೂರನ್ನು 'ಗ್ರೇಟರ್ ಟು ಕ್ವಾರ್ಟರ್' ಬೆಂಗಳೂರಾಗಿ ಪರಿವರ್ತಿಸುತ್ತಿದೆ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರು ಏಕೀಕೃತ ಬೆಂಗಳೂರನ್ನು ನಿರ್ಮಿಸಿದರೆ, ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಅದನ್ನು ಮೂರು ಭಾಗಗಳಾಗಿ ವಿಂಗಡಿಸುತ್ತಿದೆ. ಬಿಬಿಎಂಪಿಗೆ ವಿಲೀನಗೊಂಡ 110 ಹಳ್ಳಿಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಾಗಿದೆ. ಕೆಂಪೇಗೌಡರ ದೃಷ್ಟಿಕೋನಕ್ಕೆ ದ್ರೋಹ ಬಗೆದ ಕೆಲವು ಭೂಮಾಲೀಕರಿಗೆ ಅನುಕೂಲವಾಗುವಂತೆ ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನ ವಿಭಜನೆಯು ಆದಾಯವನ್ನು ತಂದುಕೊಡುವುದಿಲ್ಲ, ಏಕೆಂದರೆ ಐಟಿ-ಬಿಟಿ ಕೇಂದ್ರಗಳು ಒಂದು ಪ್ರದೇಶದಲ್ಲಿ ಕೇಂದ್ರೀಕೃತವಾಗಿರುತ್ತವೆ, ಇತರರಿಗೆ ಆದಾಯವಿಲ್ಲ. ಮೂರು ಪುರಸಭೆಗಳನ್ನು ರಚಿಸಿದರೆ, ಕನ್ನಡಿಗರು ಮೇಯರ್ ಆಗುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ. ಮುಖ್ಯಮಂತ್ರಿ ಪಾಲಿಕೆಯಿಂದ ಆಯ್ಕೆಯಾಗುವುದಿಲ್ಲ ಎಂದಾದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅವರನ್ನು ಹೇಗೆ ಅಧ್ಯಕ್ಷರನ್ನಾಗಿ ಮಾಡುತ್ತಾರೆ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಕೆ ಸಭೆಯಲ್ಲಿ ಬಂದು ಕೂರಲು ಸಾಧ್ಯವಿಲ್ಲ. ಬೆಂಗಳೂರು ಭಾಗ ಆಗಬಾರದು ಎಂಬುದು ಬಿಜೆಪಿಯ ಅಭಿಪ್ರಾಯ. ಮುಂದೆ ನಮ್ಮ ಸರಕಾರ ಬಂದರೆ ಬೆಂಗಳೂರನ್ನು ಒಂದು ಮಾಡುವ ಕೆಲಸ ಮಾಡುತ್ತೇವೆ. ಗ್ರೇಟರ್ ಬೆಂಗಳೂರಿಗೆ ವಿರುದ್ಧವಾಗಿ ಕಾನೂನು ಹೋರಾಟ ಮಾಡಲಿದ್ದೇವೆ.

ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಲಾಭಕ್ಕೆ ಎಲ್ಲವನ್ನೂ ಮಾಡುತ್ತಿದ್ದಾರೆ. ಬಿಡಿಎ ಬಡಾವಣೆಗಳು ಇನ್ನೂ ಖಾಲಿ ಇದ್ದು, ಅಲ್ಲಿಗೆ ನೀರು, ವಿದ್ಯುತ್ ಕೊಡಲು ಆಗುತ್ತಿಲ್ಲ. ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಈ ಯೋಜನೆ ಮಾಡಿದ್ದಾರೆ. ನಗರದಲ್ಲಿ ಎಲ್ಲ ಕಡೆ ಕಸದ ರಾಶಿ ಇದೆ, ಮೇಕೆದಾಟು ಯೋಜನೆ ಜಾರಿ ಮಾಡಿಲ್ಲ, ನಗರದ ಆಡಳಿತ ನಡೆಸಲು ಆಗುತ್ತಿಲ್ಲ. ಇಂತಹ ವಿಫಲತೆಯನ್ನು ಒಪ್ಪಿಕೊಳ್ಳದೆ ಇಂತಹ ಯೋಜನೆ ತಂದಿದ್ದಾರೆ ಎಂದು ಅವರು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT