ರಾಜ್ಯ

Bengaluru Weather: ನಗರದಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆ? ಯಲ್ಲೋ ಅಲರ್ಟ್, RCB vs KKR ಪಂದ್ಯದ ಗತಿಯೇನು?

ಭಾರತೀಯ ಹವಾಮಾನ ಇಲಾಖೆಯು ಮೇ 20ರವರೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಬೆಂಗಳೂರಿಗೆ ಬಿಸಿಲಿನ ತಾಪ ಕಡಿಮೆಯಾಗಬಹುದು. ಕರ್ನಾಟಕದ ರಾಜಧಾನಿಗೆ ಹವಾಮಾನ ಸಂಸ್ಥೆ ಯಲ್ಲೋ ಅಲರ್ಟ್ ಘೋಷಿಸಿದೆ.

ಭಾರತೀಯ ಹವಾಮಾನ ಇಲಾಖೆಯು ಮೇ 20ರವರೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಬೆಂಗಳೂರಿಗೆ ಬಿಸಿಲಿನ ತಾಪ ಕಡಿಮೆಯಾಗಬಹುದು. ಕರ್ನಾಟಕದ ರಾಜಧಾನಿಗೆ ಹವಾಮಾನ ಸಂಸ್ಥೆ ಯಲ್ಲೋ ಅಲರ್ಟ್ ಘೋಷಿಸಿದೆ.

ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮೂಲಕ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇತ್ತೀಚಿನ ನವೀಕರಣದ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಾದ್ಯಂತ ಹಲವು ಪ್ರದೇಶಗಳಲ್ಲಿ ಇದೇ ವೇಗದ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

IMD ಸಾಪ್ತಾಹಿಕ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ RCB vs KKR ಐಪಿಎಲ್ ಪಂದ್ಯದ ಮೇಲೆ ಮಳೆಯ ಕಾರ್ಮೋಡ ಆವರಿಸಿದೆ. ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೇ ಆರ್ ಸಿಬಿ ತಂಡಕ್ಕೆ ಹೆಚ್ಚಿನ ಪರಿಣಾಮ ಬೀರಲ್ಲ. ಆದರೆ ಕೆಕೆಆರ್ ತಂಡ ಪ್ಲೇ ಆಫ್ ನಿಂದ ಹೊರಹೋಗಲಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿದ್ದರೆ, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್‌ನಲ್ಲಿರುತ್ತದೆ.

ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ. ಮೇ 17ರಿಂದ ಮೇ 20ರವರೆಗೆ, ನಗರದಲ್ಲಿ ಪ್ರತಿದಿನ ಒಂದು ಅಥವಾ ಎರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT