ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಗುದ್ದಿಸಿ ಸಾಫ್ಟ್ ವೇರ್ ಎಂಜಿನೀಯರ್ ಕೊಲೆ; Video

29 ವರ್ಷದ ಟೆಕ್ಕಿ ಸಂಜಯ್ ಕೊಲೆಯಾದ ದುರ್ದೈವಿ. ಆರ್ ಆರ್ ನಗರದ ಪ್ರತೀಕ್ ಎಂಬಾತ ಕಾರು ಗುದ್ದಿಸಿ ಕೊಲೆ ಮಾಡಿದ್ದಾನೆ. ಕನಕಪುರ ರಸ್ತೆಯ ವಸಂತಪುರ ಕ್ರಾಸ್‌ನಲ್ಲಿ ಘಟನೆ ನಡೆದಿದೆ.

ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಕಿರಿಕ್ ತೆಗೆದು ಕಾರು ಗುದ್ದಿಸಿ ಸಾಫ್ಟ್‌ವೇರ್‌ ಉದ್ಯೋಗಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

29 ವರ್ಷದ ಟೆಕ್ಕಿ ಸಂಜಯ್ ಕೊಲೆಯಾದ ದುರ್ದೈವಿ. ಆರ್ ಆರ್ ನಗರದ ಪ್ರತೀಕ್ ಎಂಬಾತ ಕಾರು ಗುದ್ದಿಸಿ ಕೊಲೆ ಮಾಡಿದ್ದಾನೆ. ಕನಕಪುರ ರಸ್ತೆಯ ವಸಂತಪುರ ಕ್ರಾಸ್‌ನಲ್ಲಿ ಘಟನೆ ನಡೆದಿದೆ.

ಸಾಫ್ಟ್ ವೇರ್ ಉದ್ಯೋಗಿಗಳಾಗಿದ್ದ ಸಂಜಯ್, ಕಾರ್ತಿಕ್ ಸಿಗರೇಟ್ ಸೇದಲು ಕಚೇರಿಯಿಂದ ಹೊರಬಂದಿದ್ದರು. ಇಲ್ಲಿನ ರಸ್ತೆ ಬದಿಯ ಸೈಕಲ್‌ನಲ್ಲಿ ಸಿಗರೇಟ್ ತೆಗೆದುಕೊಂಡಿದ್ದರು. ಅಲ್ಲೇ ನಿಂತು ಇಬ್ಬರು ಟೆಕ್ಕಿಗಳು ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಕಾರಿನಿಂದ ಇಳಿಯದೇ, ಸಂಜಯ್‌ಗೆ ಸಿಗರೇಟ್ ತಂದುಕೊಡುವಂತೆ ಹೇಳಿದ್ದ. ಇದರಿಂದ ಕೋಪಗೊಂಡ ಸಂಜಯ್ ಮತ್ತು ಕಾರ್ತಿಕ್ ಕಾರಿನಲ್ಲಿದ್ದ ಪ್ರತೀಕ್ ನಡುವೆ ಗಲಾಟೆ ನಡೆದಿತ್ತು. ಪ್ರತೀಕ್ ಆರ್ ಆರ್ ನಗರ ನಿವಾಸಿಯಾಗಿದ್ದ.

ಗಲಾಟೆ ಜೋರಾಗಿ ಅಂಗಡಿಯವರು ಬಿಡಿಸಿ ಕಳುಹಿಸಿದ್ದರು. ಕೋಪಗೊಂಡ ಪ್ರತೀಕ್ ಕಾರಿನಲ್ಲಿ ಮುಂದೆ ಹೋಗಿ ರಸ್ತೆ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದ. ಸಿಗರೇಟ್ ಸೇದಿ ಇಬ್ಬರೂ ಬೈಕ್‌ನಲ್ಲಿ ಮುಂದೆ ಬರುತ್ತಿದ್ದಂತೆ. ವೇಗವಾಗಿ ಬಂದು ಇಬ್ಬರು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ, ಸಂಜಯ್ ಸ್ಥಳದಲ್ಲೇ ಸಾವನ್ನಪ್ಪಿ ಕಾರ್ತಿಕ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭದಲ್ಲಿ ಇದು ಅಪಘಾತ ಎಂದು ತಿಳಿದಿದ್ದ ಪೊಲೀಸರಿಗೆ ಸ್ಥಳದಲ್ಲಿದ್ದ ಸಿಸಿಟಿವಿ ಪರಿಶೀಲನೆ ವೇಳೆ ಅಸಲಿ ವಿಚಾರ ಬಯಲಿಗೆ ಬಂದಿದೆ. ಸುಬ್ರಮಣ್ಯಪುರ ಪೊಲೀಸರಿಂದ ಆರೋಪಿ ಪ್ರತೀಕ್ ಬಂಧನವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!