ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ 
ರಾಜ್ಯ

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಪದಾಧಿಕಾರಿಗಳೊಂದಿಗಿನ ಸಭೆಯಲ್ಲಿ ಸಚಿವರು ಈ ವಿಚಾರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂಬರುವ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಶನಿವಾರ ತಿಳಿಸಿದ್ದಾರೆ.

ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಪದಾಧಿಕಾರಿಗಳೊಂದಿಗಿನ ಸಭೆಯಲ್ಲಿ ಸಚಿವರು ಈ ವಿಚಾರ ಸ್ಪಷ್ಟಪಡಿಸಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಖಾಸಗಿ ಕಾಲೇಜುಗಳು ಶೇ. 10 ರಿಂದ 15 ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ಕಳೆದ ವರ್ಷ ಶೇ. 10 ರಷ್ಟು ಹೆಚ್ಚಳಕ್ಕೆ ಸರ್ಕಾರ ಅವಕಾಶ ನೀಡಿತ್ತು. ಈ ವರ್ಷ ಯಾವುದೇ ಶುಲ್ಕ ಹೆಚ್ಚಳಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

ಕಳೆದ ವರ್ಷದ ಶೇ. 10 ರಷ್ಟು ಹೆಚ್ಚಳ ಮಾಡಿರುವುದನ್ನು ಗಮನಿಸಿದ ಸಚಿವರು, ಈ ವರ್ಷ ಯಾವುದೇ ಶುಲ್ಕ ಹೆಚ್ಚಳ ಇರುವುದಿಲ್ಲ ಎಂದು ಒತ್ತಿ ಹೇಳಿದರು ಮತ್ತು ಈ ನಿರ್ಧಾರವನ್ನು ಅಧಿಕೃತಗೊಳಿಸುವ ಆದೇಶಕ್ಕೆ ಶೀಘ್ರದಲ್ಲೇ ಸಹಿ ಹಾಕಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್