ಸಚಿವ ಜಮೀರ್ ಅಹ್ಮದ್ ಖಾನ್ 
ರಾಜ್ಯ

ಹೊಸಪೇಟೆಯಲ್ಲಿ ಮೇ 20ರಂದು 2ನೇ ಸಿದ್ದರಾಮೋತ್ಸವ: ಸಚಿವ ಜಮೀರ್ ಅಹ್ಮದ್ ಖಾನ್

ಮೇ 20ರಂದು ನಡೆಯುವ ಸಮರ್ಪಣಾ ಸಂಕಲ್ಪ ಸಮಾವೇಶವು ಎರಡನೇ ಸಿದ್ದರಾಮೋತ್ಸವವಾಗಿ ಹೊರಹೊಮ್ಮೊಲಿದೆ.

ಹೊಸಪೇಟೆ : ರಾಜ್ಯ ಸರಕಾರದ ಎರಡು ವರ್ಷಗಳ ಸಾಧನೆಗಳನ್ನು ಬಿಂಬಿಸುವ 'ಸಮರ್ಪಣೆ ಸಂಕಲ್ಪ ಸಮಾವೇಶ' ಹೊಸಪೇಟೆಯಲ್ಲಿ ಮೇ 20 ರಂದು ನಡೆಯಲಿದೆ. ಜಿಲ್ಲಾಡಳಿತವು ಕಾರ್ಯಕ್ರಮದ ಯಶಸ್ಸಿಗೆ ಭರದ ಸಿದ್ಧತೆ ನಡೆಸುತ್ತಿದ್ದು, ಸಾರಿಗೆ, ಊಟ, ಮತ್ತು ವಸತಿ ವ್ಯವಸ್ಥೆಗಳನ್ನು ಒಳಗೊಂಡಂತೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು ನಡೆಯುವ ಸಮರ್ಪಣಾ ಸಂಕಲ್ಪ ಸಮಾವೇಶವು ಎರಡನೇ ಸಿದ್ದರಾಮೋತ್ಸವವಾಗಿ ಹೊರಹೊಮ್ಮೊಲಿದೆ. ಮೊದಲನೇ ಸಿದ್ದರಾಮೋತ್ಸವ ದಾವಣಗೆರೆಯಲ್ಲಿ ಈಗಾಗಲೇ ಜರುಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ಸಮಾವೇಶಕ್ಕೆ ರಾಜ್ಯ ಸಾರಿಗೆ ಸಂಸ್ಥೆಯ 3,700 ಬಸ್‌ಗಳನ್ನು ಕಾಯ್ದಿರಿಸಲಾಗಿದೆ. ಪ್ರತ್ಯೇಕವಾಗಿ ನಾನು 2,000 ಬಸ್‌ಗಳನ್ನು ಕಾಯ್ದಿರಿಸಿದ್ದೇನೆ. ಹಲವು ಶಾಸಕರು ಶಾಲಾ, ಕಾಲೇಜು ಬಸ್‌ಗಳನ್ನೂ ಬಳಸುತ್ತಾರೆ. ಹೀಗಾಗಿ 3 ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

1.50 ಲಕ್ಷ ಕುರ್ಚಿಗಳನ್ನು ಹಾಕಿ, 2 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುವುದು. ಬೆಳಿಗ್ಗೆ 9 ರಿಂದ ಒಟ್ಟು 500 ಕೌಂಟರ್‌ಗಳಲ್ಲಿ ಊಟ ಬಡಿಸಲಾಗುವುದು. ತುರ್ತು ಅಗತ್ಯಕ್ಕೆ 50 ಸಾವಿರ ಊಟದ ಪ್ಯಾಕೆಟ್ ಸಿದ್ಧಪಡಿಸಲಾಗುವುದು. 5 ಲಕ್ಷ ನೀರಿನ ಪ್ಯಾಕೆಟ್‌ ತರಿಸಲಾಗುವುದು. ಹೊಸಪೇಟೆ ಸುತ್ತಮುತ್ತ 200 ಎಕರೆ ಪ್ರದೇಶದಲ್ಲಿ 10 ಸಾವಿರಕ್ಕೂ ಹೆಚ್ಚು ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗುವುದು ಎಂದರು.

140x60 ಅಡಿ ವಿಸ್ತೀರ್ಣದ ವೇದಿಕೆ ನಿರ್ಮಾಣವಾಗಲಿದ್ದು, ಮಧ್ಯಭಾಗದ ಪ್ರಧಾನ ವೇದಿಕೆಯಲ್ಲಿ 300 ಮಂದಿ ಆಸೀನರಾಗುವರು. ಎಡ, ಬಲ ಬದಿಯ ಎರಡು ಸಮಾನಾಂತರ ವೇದಿಕೆಗಳಲ್ಲಿ ತಲಾ 50 ಮಂದಿ ಕೂರುವ ವ್ಯವಸ್ಥೆ ಮಾಡಲಾಗುವುದು. ಕಾರ್ಯಕ್ರಮ ಬೆಳಿಗ್ಗೆ 10ಕ್ಕೆ ಆರಂಭವಾಗಿ, ಮಧ್ಯಾಹ್ನ 2ರ ವೇಳೆಗೆ ಮುಕ್ತಾಯವಾಗಲಿದೆ ಎಂದರು.

ಭಾರೀ ಬಿಸಿಲು ಇರುವುದರಿಂದ ನೆರಳಿನ ವ್ಯವಸ್ಥೆ ಕಲ್ಪಿಸಲು ಸುಸಜ್ಜಿತ ಜರ್ಮನ್‌ ಟೆಂಟ್‌ ನಿರ್ಮಿಸಲಾಗುತ್ತಿದೆ. ಬೆಂಗಳೂರಿನ ಉಡುಪಾಸ್‌ ಸಂಸ್ಥೆಯವರು ವೇದಿಕೆ ನಿರ್ಮಿಸುತ್ತಿದ್ದಾರೆ. ಪ್ರಧಾನ ವೇದಿಕೆ ಜತೆಗೆ ಇನ್ನೂ ಎರಡು ಕಿರು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT