ಕೇಂದ್ರ ಸಚಿವ ವಿ. ಸೋಮಣ್ಣ 
ರಾಜ್ಯ

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನ: ಕೇಂದ್ರ ಸಚಿವ ಸೋಮಣ್ಣ

ಕೊಂಕಣ ರೈಲ್ವೆಗಳನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವಂತೆ ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಕೆಲಸಗಳಾಗುತ್ತಿವೆ.

ಚಿತ್ರದುರ್ಗ: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶನಿವಾರ ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವನಾದ ಕೂಡಲೇ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಮಂಗಳೂರಿನಲ್ಲಿ ಸಭೆ ನಡೆಸಿದ್ದೆ. ಕೊಂಕಣ ರೈಲ್ವೆಗಳನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವಂತೆ ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಕೆಲಸಗಳಾಗುತ್ತಿವೆ ಎಂದು ಹೇಳಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮನವಿ ಕುರಿತು ಮಾತನಾಡಿ, ಮಹಾರಾಷ್ಟ್ರ ಮತ್ತು ಕರ್ನಾಟಕ ಸರ್ಕಾರಗಳು NOC ನೀಡಬೇಕು. ನಂತರ ನಾವು ವಿಲೀನ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಬಹುದು ಎಂದು ತಿಳಿಸಿದರು.

ವಿಲೀನ ಕಾರ್ಯ ಸಾಮಾನ್ಯವಾಗಿ ರಾಜ್ಯದಲ್ಲಿ ಮತ್ತು ವಿಶೇಷವಾಗಿ ಕರಾವಳಿಯಲ್ಲಿ ಅಭಿವೃದ್ಧಿಗೆ ನಾಂದಿ ಹಾಡುತ್ತದೆ. ಕೊಂಕಣ ರೈಲ್ವೆ ನಿಗಮದ ಕಾರ್ಯಾಚರಣೆಗೆ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ಕಠಿಣ ಪರಿಶ್ರಮ ಕಾರಣವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!