ಆನೆ (ಸಂಗ್ರಹ ಚಿತ್ರ) online desk
ರಾಜ್ಯ

ಮೇ 21ರಂದು ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳ ಹಸ್ತಾಂತರ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತರಬೇತಿ ಪಡೆದ ಆನೆಗಳನ್ನು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಹಸ್ತಾಂತರಿಸಲಿದ್ದಾರೆ.

ಬೆಂಗಳೂರು: ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸಲು ಹಾಗೂ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಯಲ್ಲಿ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸುವ ಸಲುವಾಗಿ ರಾಜ್ಯ ಸರ್ಕಾರ ಮೇ 21 ರಂದು ವಿಧಾನಸೌಧದ ಮುಂದೆ ತರಬೇತಿ ಪಡೆದ ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಲಿದೆ ಎಂದು ಸಚಿವ ಈಶ್ವರ್ ಬಿ ಖಂಡ್ರೆ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತರಬೇತಿ ಪಡೆದ ಆನೆಗಳನ್ನು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಹಸ್ತಾಂತರಿಸಲಿದ್ದಾರೆ ಎಂದು ಹೇಳಿದರು.

ಆಂಧ್ರಪ್ರದೇಶದಲ್ಲಿ ಆನೆ–ಮಾನವ ಸಂಘರ್ಷ ತಡೆ ಮತ್ತು ಪುಂಡಾನೆಗಳ ಸೆರೆ ಕಾರ್ಯಾಚರಣೆಗಳಲ್ಲಿ ಬಳಸಲು ಕುಮ್ಕಿ ಆನೆಗಳನ್ನು ಒದಗಿಸುವಂತೆ ಮತ್ತು ಮಾವುತರಿಗೆ ತರಬೇತಿ ನೀಡುವಂತೆ, ಅಲ್ಲಿನ ಅರಣ್ಯ ಸಚಿವ ಪವನ್‌ ಕಲ್ಯಾಣ್‌ ಅವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರ ಭಾಗವಾಗಿ ಪಳಗಿಸಿದ ಕುಮ್ಕಿ ಆನೆಗಳನ್ನು ನೀಡುತ್ತಿದ್ದೇವೆಂದು ತಿಳಿಸಿದರು.

2024ರ ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ, ಆನೆ–ಮಾನವ ಸಂಘರ್ಷ ಕುರಿತ ಅಂತರರಾಷ್ಟ್ರೀಯ ಸಮ್ಮೇಳನ ನಡೆದಿತ್ತು. ಆನೆ–ಮಾನವ ಸಂಘರ್ಷ ತಡೆ ಸಂಬಂಧ ಚಾಲ್ತಿಯಲ್ಲಿರುವ ಉತ್ತಮ ರೂಢಿಗಳ ವಿನಿಮಯಕ್ಕೆ ಕರ್ನಾಟಕ, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದ್ದವು. ಅದರ ಭಾಗವಾಗಿಯೇ ಆಂಧ್ರಪ್ರದೇಶಕ್ಕೆ ಆನೆಗಳನ್ನು ಹಸ್ತಾಂತರಿಸಲಾಗುತ್ತಿದೆ ಎಂದಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ರಾಜ್ಯದ ಕೋಲಾರ ಜಿಲ್ಲೆ ವ್ಯಾಪ್ತಿಯಲ್ಲೂ ಆನೆ- ಮಾನವ ಸಂಘರ್ಷ ಹೆಚ್ಚುತ್ತಿದೆ. ಆಂಧ್ರಪ್ರದೇಶದಲ್ಲಿ ಪುಂಡಾನೆಗಳನ್ನು ಸೆರೆಹಿಡಿದರೆ, ಅಲ್ಲಿಂದ ಕೋಲಾರಕ್ಕೆ ಅವು ಬರುವುದು ನಿಲ್ಲಲಿದೆ. ಈ ನಿಟ್ಟಿನಲ್ಲಿ ಕುಮ್ಕಿ ಆನೆಗಳ ಹಸ್ತಾಂತರದಿಂದ ರಾಜ್ಯಕ್ಕೂ ಅನುಕೂಲವಾಗಲಿದೆ ಎಂದು ಹೇಳಿದರು.

ಇದೇ ವೇಳೆ ಈ ಹಸ್ತಾಂತರದಲ್ಲಿ ದಸರಾ ಆನೆಗಳಿಲ್ಲ. ಕರ್ನಾಟಕದ ಪ್ರತಿಷ್ಠಿತ ದಸರಾ ಮಹೋತ್ಸವಕ್ಕೆ ಸಂಬಂಧಿಸಿದ ಯಾವುದೇ ಕುಮ್ಕಿ ಆನೆಗಳನ್ನು ಅಥವಾ ಮುಂಬರುವ ಆಚರಣೆಗಳಿಗೆ ಗುರುತಿಸಲಾದ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸುತ್ತಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT