ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಸವಾರರ ಅಜಾಗರೂಕತೆ 
ರಾಜ್ಯ

ಒಂದೇ ಗಾಡಿಯಲ್ಲಿ 4 ಜನ ಪ್ರಯಾಣ, ಅಡ್ಡಾದಿಡ್ಡಿ ವಾಹನ ಚಾಲನೆ; Video Viral

ಒಂದೇ ದ್ವಿಚಕ್ರವಾಹನದಲ್ಲಿ ನಾಲ್ಕು ಮಂದಿ ಯುವಕರ ತಂಡ ಚಾಲನೆ ಮಾಡಿದ್ದು, ಹೆಲ್ಮೆಟೂ ಕೂಡ ಧರಿಸದೇ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಓಡಿಸಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವಂತೆಯೇ ಇತ್ತ ಒಂದೇ ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ಪ್ರಯಾಣಿಸಿದ್ದು ಮಾತ್ರವಲ್ಲದೇ ರಸ್ತೆಯಲ್ಲಿ ಇತರೆ ವಾಹನಗಳ ಸವಾರಿಗೆ ಅಡ್ಡಿಪಡಿಸಿದ ವಿಡಿಯೊವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಎಕ್ಸ್ ನಲ್ಲಿ @3rdEyeDude ಈ ವಿಡಿಯೋವನ್ನು ಅಪ್ಲೋಡ್ ಮಾಡಿದ್ದು, ಒಂದೇ ದ್ವಿಚಕ್ರವಾಹನದಲ್ಲಿ ನಾಲ್ಕು ಮಂದಿ ಯುವಕರ ತಂಡ ಚಾಲನೆ ಮಾಡಿದ್ದು, ಹೆಲ್ಮೆಟೂ ಕೂಡ ಧರಿಸದೇ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಓಡಿಸಿದ್ದಾರೆ.

ಈ ವಿಡಿಯೋವನ್ನು ಕಾರಿನ ಚಾಲಕರೊಬ್ಬರು ತಮ್ಮ ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ಇದೀಗ ವೈರಲ್ ಆಗಿದೆ.

KA 04 JA 3916 ಸಂಖ್ಯೆಯ ದ್ವಿಚಕ್ರವಾಹನದಲ್ಲಿ ಒಟ್ಟು ನಾಲ್ಕು ಮಂದಿ ಪ್ರಯಾಣಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕಾರಿನ ಚಾಲಕ ಹಾರ್ನ್ ಮಾಡಿದರೆ ಅದಕ್ಕೂ ಜಗ್ಗದೇ ಮತ್ತೆ ವೇಗವಾಗಿ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಹೋಗುತ್ತಿರುವುದು ಸೆರೆಯಾಗಿದೆ.

ಇನ್ನು ವಾಹನ ಸವಾರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಇತರೆ ಬಳಕೆದಾರರು ಆಗ್ರಹಿಸಿದ್ದು, ಹೆಚ್ಚಿನ ಸಂಚಾರ ಅಪಘಾತಗಳು ದ್ವಿಚಕ್ರ ವಾಹನಗಳ ಸವಾರರ ಅಜಾಗರೂಕ ಚಾಲನೆಯಿಂದಲೇ ಸಂಭವಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಮತ್ತೋರ್ವ ಬಳಕೆದಾರರು, ಇಂತಹ ಅಜಾಗರೂಕ ಚಾಲನೆಗಳಿಗೆ ಕೇವಲ 500 ರೂಪಾಯಿ ದಂಡ ಪರಿಹಾರವಲ್ಲ. ಅವರು ವಾಹನವನ್ನು ವಶಕ್ಕೆ ತೆಗೆದುಕೊಂಡು ಹೋಗಿ ಚಾಲನಾ ಪರವಾನಗಿಯನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT