ಬೆಂಗಳೂರು: ಅತಿಯಾದ ಕೆಲಸದ ಒತ್ತಡ ಮತ್ತು ಮ್ಯಾನೇಜರ್ ನೀಡುತ್ತಿದ್ದ ಕೆಲಸದ ಒತ್ತಡದಿಂದ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ
ಯುವಕ ನಿಖಿಲ್ ಸೋಮವಂಶಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈತನ ಮೃತದೇಹ ಮೇ 8ರಂದು ಅಗರ ಕೆರೆಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ಕಂಪನಿಯ ಕಠಿಣ ಕೆಲಸದ
ವಾತಾವರಣ ಮತ್ತು ಕಿರುಕುಳ ನೀಡುತ್ತಿದ್ದ ಮ್ಯಾನೇಜರ್ ಎಂದು ಆರೋಪಿಸಲಾಗಿತ್ತು. ಆದರೆ ಟೆಕ್ಕಿ ಆತ್ಮಹತ್ಯೆಗೆ ಕೆಲಸದ ಒತ್ತಡವೇ ಕಾರಣ ಎಂದು ಹೇಳಲಾಗದು ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ ಮೂಲದ ನಿಖಿಲ್ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸಿಸುತ್ತಿದ್ದರು. ಐಐಎಸ್ಸಿ ಪದವೀಧರರಾದ ಸೋಮವಂಶಿ ಕೋರಮಂಗಲದ ಎಐ ಸಂಸ್ಥೆಯಲ್ಲಿ ಮೆಷಿನ್ ಲರ್ನಿಂಗ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.
ನಿಖಿಲ್ ಆತ್ಮಹತ್ಯೆಗೆ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಿಖಿಲ್ ಆತ್ಮಹತ್ಯೆ ಮಾಡಿಕೊಂಡ ಕೆಲವು ದಿನಗಳ ನಂತರ, ಅವರ ಸಹೋದ್ಯೋಗಿಗಳು ಸಾಮಾಜಿಕ ಮಾಧ್ಯಮದಲ್ಲಿ ಕೆಲಸದ ಒತ್ತಡವೇ ಅವರು ಈ ಕಠಿಣ ಕ್ರಮ ಕೈಗೊಳ್ಳಲು ಕಾರಣ ಎಂದು ಪೋಸ್ಟ್ ಮಾಡಿದ್ದಾರೆ. ಕೆಲವರು ನಿಖಿಲ್ ಅವರ ಮ್ಯಾನೇಜರ್ ಅವರ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿದ್ದಾರೆ. ಆದರೆ, ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆಗೆ ಕೆಲಸಕ್ಕೆ ಸಂಬಂಧಿಸಿದ ಒತ್ತಡ ಕಾರಣ ಎಂದು ಹೇಳಲು ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.