100ಕೆಜಿ ಅಖಂಡ ಬೆಳ್ಳಿ ದೀಪ ಅರ್ಪಿಸಿದ ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ 
ರಾಜ್ಯ

ತಿರುಪತಿ ತಿಮ್ಮಪ್ಪನಿಗೆ 100 ಕೆಜಿ ಅಖಂಡ ಬೆಳ್ಳಿ ದೀಪ ಅರ್ಪಿಸಿದ ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ

ಭಕ್ತಿ ಮತ್ತು ರಾಜ ಪರಂಪರೆಯ ಸಂಕೇತವಾಗಿ ಮೈಸೂರು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ತಿರುಮಲ ದೇವಸ್ಥಾನದಲ್ಲಿ ವೆಂಕಟೇಶ್ವರನಿಗೆ ಎರಡು ದೊಡ್ಡ ಬೆಳ್ಳಿ ದೀಪಗಳನ್ನು ದಾನ ಮಾಡಿದರು.

ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ತಿರುಮಲ ತಿರುಪತಿ ದೇವಸ್ಥಾನಕ್ಕೆ 100 ಕೆಜಿ ತೂಕದ ಅಖಂಡ ಬೆಳ್ಳಿ ದೀಪಗಳನ್ನು ಅರ್ಪಿಸಿ 300 ವರ್ಷಗಳ ಸಂಪ್ರದಾಯವನ್ನು ಪುನರುಜ್ಜೀವನಗೊಳಿಸಿದ್ದಾರೆ.

ಆಳೆತ್ತರದ ಬೆಳ್ಳಿ ದೀಪಗಳು ಇನ್ನುಮುಂದೆ ತಿರುಮಲ ದೇವಸ್ಥಾನಕ್ಕೆ ಬೆಳಗಲಿವೆ. ಭಕ್ತಿ ಮತ್ತು ರಾಜ ಪರಂಪರೆಯ ಸಂಕೇತವಾಗಿ ಮೈಸೂರು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ತಿರುಮಲ ದೇವಸ್ಥಾನದಲ್ಲಿ ವೆಂಕಟೇಶ್ವರನಿಗೆ ಎರಡು ದೊಡ್ಡ ಬೆಳ್ಳಿ ದೀಪಗಳನ್ನು ದಾನ ಮಾಡಿದರು.

ರಂಗನಾಯಕಕುಲ ಮಂಟಪದಲ್ಲಿ ನಡೆದ ಅಧಿಕೃತ ಹಸ್ತಾಂತರ ಸಮಾರಂಭದಲ್ಲಿ ದೇವಾಲಯ ಆಡಳಿತದ ಪರವಾಗಿ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಅವರು ಈ ಕಾಣಿಕೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೂ ಉಪಸ್ಥಿತರಿದ್ದರು.

ಸರಿಸುಮಾರು 100 ಕೆಜಿ ತೂಕವಿರುವ ಈ ಬೆಳ್ಳಿ ದೀಪಗಳನ್ನು ಶಾಶ್ವತ ದೀಪಗಳಾಗಿ ಬಳಸಲಾಗುತ್ತದೆ. ಹಗಲು-ರಾತ್ರಿ ದೇವಾಲಯದ ಗರ್ಭಗುಡಿಯಲ್ಲಿ ಬೆಳಗುತ್ತಿರುವ ಅಖಂಡ ದೀಪಗಳನ್ನು ದೈವಿಕತೆಯ ಶಾಶ್ವತ ಉಪಸ್ಥಿತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!