ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಬೆಂಗಳೂರು ಮಳೆ ಅವಾಂತರ: ಸಂತ್ರಸ್ತರಿಗೆ ತಕ್ಷಣ ಪರಿಹಾರ; ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಮಳೆಯಿಂದ ಉಂಟಾದ ನೆರೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ.

ಬೆಂಗಳೂರು: ಮಳೆಗಾಲ ಸಂದರ್ಭದಲ್ಲಿ ನಗರದಲ್ಲಿ ಅವಾಂತರ ಸೃಷ್ಟಿಯಾಗುತ್ತಿದ್ದು, ರಾಜಕಾಲುವೆ ಒತ್ತುವರಿಯಿಂದಾಗಿಯೇ ಹೆಚ್ಚಿನ ಸಮಸ್ಯೆಗಳು ಉಂಟಾಗುತ್ತಿವೆ. ಹೀಗಾಗಿ ಎಷ್ಟೇ ಪ್ರಭಾವಿಗಳು ರಾಜಕಾಲುವೆ ಒತ್ತುವರಿಯನ್ನು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಳೆಯಿಂದ ಹಾನಿಗೆ ಒಳಗಾದ ವಿವಿಧ ಪ್ರದೇಶಗಳಿಗೆ ಮುಖ್ಯಮಂತ್ರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಳೆಯಿಂದ ಉಂಟಾದ ನೆರೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ ರಾಜಕಾಲುವೆಯಲ್ಲಿ ಲೈನಿಂಗ್ ಕೆಲಸ ಮುಗಿದಿದೆ ಎಂದರು.

ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದೆ. ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ ರಾಜಕಾಲುವೆಯಲ್ಲಿ ಲೈನಿಂಗ್ ಕೆಲಸ ಮುಗಿದಿದೆ. 125 ಕಿಮೀ ರಾಜಕಾಲುವೆ ಕಾಮಗಾರಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು. ಇನ್ನುಳಿದ 173 ಕಿಮೀ ರಾಜಕಾಲುವೆ ಅಭಿವೃದ್ಧಿಗೆ ವಿಶ್ವ ಬ್ಯಾಂಕ್‌ನಿಂದ 2 ಸಾವಿರ ಕೋಟಿ ರೂ. ಸಾಲ ಪಡೆದು ಕಾಮಗಾರಿ ಕೈಗೊಂಡಿದ್ದೇವೆ. ಇದರ ಟೆಂಡರ್ ಮುಗಿದಿದ್ದು, ಮೂರು ವರ್ಷಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದ್ದೇನೆ.

ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿರುವ ಎಲ್ಲಾ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲಾಗುವುದು. ಹಾನಿ ಕುರಿತು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚನೆ ನೀಡಿದ್ದೇನೆ. ತಗ್ಗು ಪ್ರದೇಶಗಳಲ್ಲಿ ಬೇಸ್‌ಮೆಂಟ್ ಗಳಲ್ಲಿ ನಿರ್ಮಾಣಕ್ಕೆ ಇನ್ನು ಮುಂದೆ ಅನುಮತಿ ನೀಡದಂತೆ ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದ್ದೇನೆ. 166 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ತಗ್ಗು ಪ್ರದೇಶಗಳೆಂದು ಗುರುತಿಸಿ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದೆ.

ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಹೆಚ್‌ಬಿಆರ್ ಬಡಾವಣೆಯ ಐದನೇ ಹಂತದ ರಾಜಕಾಲುವೆ ಸಮಸ್ಯೆಯಿದ್ದು, ಅಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಗೆ ಅಲ್ಲಿ ತಡೆಗೋಡೆ ನಿರ್ಮಾಣವಾಗುತ್ತಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಿದ್ದೇನೆ. ಚರಂಡಿಗೆ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನ

ಸಾಯಿ ಲೇಔಟ್‌ಗೆ ಭೇಟಿ ನೀಡಿದ್ದು, ಅದು ರಾಜಕಾಲುವೆಗಿಂತ ತಗ್ಗು ಪ್ರದೇಶದಲ್ಲಿದೆ. ರೈಲ್ವೆ ಸೇತುವೆ ಬಳಿ ವೆಂಟ್ ಕಿರಿದಾಗಿದ್ದು, ಅದನ್ನು ಅಗಲಗೊಳಿಸಿದರೆ ಮಾತ್ರ ಸಮಸ್ಯೆ ಪರಿಹಾರ ಸಾಧ್ಯ. ಅನೇಕ ವರ್ಷದಿಂದ ಈ ಸಮಸ್ಯೆಯಿದೆ. ವೆಂಟ್‌ಗಳ ನಿರ್ಮಾಣ ಮತ್ತು ಅಗಲಗೊಳಿಸಲು ಈಗಾಗಲೇ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ ನೀಡಿದ್ದೇನೆ. ಬಿಬಿಎಂಪಿ ಇದಕ್ಕಾಗಿ ಒಟ್ಟು ರೂ.13 ಕೋಟಿ ಬಿಡುಗಡೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ ರೂ.6 ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, ರೂ.3 ಕೋಟಿ ಪಾವತಿಸಲಾಗಿದೆ.

ಮಹಾದೇವಪುರದ ಪಣತ್ತೂರು ಗಾರ್ಡನ್‌ನಲ್ಲಿ ನೀರು ಸರಾಗವಾಗಿ ಹರಿದು ಹೋಗದೆ ಪ್ರತಿ ವರ್ಷ ಸಮಸ್ಯೆ ಆಗುತ್ತಿದೆ. ರೈಲ್ವೇ ಲೈನ್ ಕೆಳಗಡೆ ಅಗಲ ಬಹಳ ಕಡಿಮೆಯಿದೆ. ಇದನ್ನು ವಿಸ್ತರಿಸಲು ಹಾಗೂ ರಸ್ತೆ ಅಗಲೀಕರಣ ಕಾರ್ಯ ಈಗಾಗಲೇ ನಡೆಯುತ್ತಿದ್ದು, ಶೇ.20ರಷ್ಟು ಕಾಮಗಾರಿ ಬಾಕಿಯಿದೆ. ಇಲ್ಲಿ ಟ್ರೆಂಚ್ಲೆಸ್ ತಾಂತ್ರಿಕತೆ ಬಳಸಿ ಕೆಲಸ ಮಾಡುತ್ತಿದ್ದು, 45ದಿನಗಳ ಒಳಗಾಗಿ ಉಳಿದಿರುವ ಎಲ್ಲಾ ಕಾಮಗಾರಿ ಮುಗಿಸಲು ಸೂಚನೆ ನೀಡಿದ್ದೇನೆ.

ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ನಾಲ್ಕು ಕಡೆಗಳಿಂದ ನೀರು ಬರುತ್ತಿದ್ದು, ಅಲ್ಲಿಂದ ಎಲ್ಲಾ ನೀರು ಹೆಚ್ಎಸ್ಆರ್ ಲೇಔಟ್ ಕಡೆ ಹರಿದು ಬರುತ್ತದೆ. ಮೆಟ್ರೋ, ಬಿಬಿಎಂಪಿ ಮತ್ತು ರಾಷ್ಟ್ರೀಯ ಹೆದ್ದಾರಿ ಸಮನ್ವಯದಿಂದ ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ. ಈ ಮೂರು ವಿಭಾಗಗಳು ಈ ಕುರಿತು ಯೋಜನೆ ರೂಪಿಸಲು ಸೂಚನೆ ನೀಡಿದ್ದೇನೆ. ಗುರಪ್ಪನಪಾಳ್ಯದಲ್ಲಿ ತಡೆಗೋಡೆ ಕುಸಿದು ಬಿದ್ದು, ಮನೆಗಳಿಗೆ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿರುವ ಎಲ್ಲಾ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲಾಗುವುದು. ಹಾನಿ ಕುರಿತು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚನೆ ನೀಡಿದ್ದೇನೆ.

ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್‌ಗಳಲ್ಲಿ ನಿರ್ಮಾಣಕ್ಕೆ ಇನ್ನು ಮುಂದೆ ಅನುಮತಿ ನೀಡದಂತೆ ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದ್ದೇನೆ. 166 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ತಗ್ಗು ಪ್ರದೇಶಗಳೆಂದು ಗುರುತಿಸಿ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದೆ.

ಬಿಟಿಎಂ ಲೇಔಟ್‌ನಲ್ಲಿ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಎರಡು ಕುಟುಂಬಗಳಿಗೆ ಬಿಬಿಎಂಪಿ ನೀಡಿದ 5 ಲಕ್ಷ ರೂ. ಪರಿಹಾರದ ಜೊತೆಗೆ, ಮೃತಪಟ್ಟವರಿಗೆ ಮಾನವೀಯ ಆಧಾರದ ಮೇಲೆ ತಲಾ 5 ಲಕ್ಷ ರೂ. ನೀಡಬೇಕೆಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಗೆ ಸೂಚಿಸಲಾಗಿದೆ. ಇದರಂತೆ ಕೋರಮಂಗಲದಲ್ಲಿ ಮರ ಬಿದ್ದು ಮೃತಪಟ್ಟ ಮೂಡಲ ಗಿರಿಯಪ್ಪ ಅವರ ಕುಟುಂಬಕ್ಕೂ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT