ಹಾನಗಲ್ ಅತ್ಯಾಚಾರ ಆರೋಪಿಗಳ ವಿಜಯೋತ್ಸವ 
ರಾಜ್ಯ

Hanagal gang-rape: ಕಾರು, ಡಿಜೆ ಸೌಂಡ್...; ವಿಜಯೋತ್ಸವ ಮಾಡಿದ್ದ ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ 'ಅಂದರ್'; ಜಾಮೀನು ರದ್ದು!; Video Viral

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ದೊರೆತ ಬೆನ್ನಿಗೆ, ಐದು ಕಾರುಗಳಲ್ಲಿ 20ಕ್ಕೂ ಹೆಚ್ಚು ಹಿಂಬಾಲಕರೊಂದಿಗೆ ವಿಜಯೋತ್ಸವ ರೀತಿಯಲ್ಲಿ ಮೆರವಣಿಗೆ ನಡೆಸಿದ್ದರು.

ಹಾವೇರಿ: ಜಾಮೀನು ಸಿಕ್ಕ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಕಾರುಗಳಲ್ಲಿ ರೋಡ್ ಶೋ ಮಾಡಿ ವಿಜಯೋತ್ಸವ ಮಾಡಿದ್ದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಏಳು ಆರೋಪಿಗಳನ್ನು ಪೊಲೀಸರು ಮತ್ತೆ ಜೈಲಿಗೆ ಅಟ್ಟಿದ್ದಾರೆ.

ಹೌದು.. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ದೊರೆತ ಬೆನ್ನಿಗೆ, ಐದು ಕಾರುಗಳಲ್ಲಿ 20ಕ್ಕೂ ಹೆಚ್ಚು ಹಿಂಬಾಲಕರೊಂದಿಗೆ ವಿಜಯೋತ್ಸವ ರೀತಿಯಲ್ಲಿ ಮೆರವಣಿಗೆ ನಡೆಸಿದ್ದರು.

ಮೂರು ದಿನಗಳ ಹಿಂದೆ, ಹಾವೇರಿ ಸಬ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಾದ ಅಫ್ತಾದ್‌ಚಂದನ ಕಟ್ಟಿ, ಮದರ್‌ಸಾಬ್ ಮಂಡಕ್ಕಿ, ಸಮಿವುಲ್ಲ ಲಾಲನವರ್, ಮೊಹ್ಮದ್ ಸಾದಿಕ್ ಅಗಸಿನಿ, ಶೋಯಿಬ್‌ ಮುಲ್ಲ, ತೌಸಿಫ್‌ಚೋಟಿ ಮತ್ತು ರಿಯಾಜ್‌ಸೆವಿಕೇರಿ ಇವರುಗಳು ಕಾರುಗಳಲ್ಲಿ, ಬೈಕ್‌ಗಳಲ್ಲಿ ಕುಳಿತು ವಿಜಯೋತ್ಸವದ ರೀತಿಯಲ್ಲಿ ಮೆರವಣಿಗೆ ನಡೆಸಿರುವ ವೀಡಿಯೊಗಳು ವೈರಲ್ ಆಗಿದ್ದವು.

ಆರೋಪಿಗಳ ಈ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ವಿಜಯೋತ್ಸವ ನಡೆಸಿದ್ದ ಆರೋಪಿಗಳಿಗೆ ಶಾಕ್ ನೀಡಿದ್ದು, ಎಲ್ಲ 7 ಆರೋಪಿಗಳನ್ನು ಬಂಧಿಸಿ ಮತ್ತದೇ ಹಾವೇರಿ ಜೈಲಿಗೆ ಅಟ್ಟಿದ್ದಾರೆ.

ವಿಜಯೋತ್ಸವ ತಂದ ಸಂಕಷ್ಟ

ಇನ್ನು ಜಾಮೀನು ಸಿಕ್ಕ ಬೆನ್ನಲ್ಲೇ ಜೈಲಿನಿಂದ ಬಿಡುಗಡೆಯಾಗಿದ್ದ 7 ಆರೋಪಿಗಳು ರೋಡ್ ಶೋ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದ್ದರು. ಅವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಸಬ್ ಜೈಲಿನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಅವರ ಊರು ಅಕ್ಕಿಹಾಳೂರಿಗೆ ಮೆರವಣಿಗೆ ಏರ್ಪಡಿಸಿದ್ದರು. 10 ಕಾರುಗಳು, 30 ಬೈಕ್ ಗಳು, ಡಿಜೆ ಸಂಗೀತದೊಂದಿಗೆ ದಾರಿಯುದ್ದಕ್ಕೂ ವಿಕ್ಟರಿ ಚಿನ್ಹೆ ತೋರಿಸುತ್ತಾ ಆರೋಪಿಗಳು ರೋಡ್ ಶೋ ಮಾಡಿದ್ದರು. ಅವರ ವಿಜಯೋತ್ಸವದ ವೀಡಿಯೊವನ್ನು ಸಹ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು.

ವಿಜಯೋತ್ಸವ ವೈರಲ್, ಜಾಮೀನು ಕ್ಯಾನ್ಸಲ್

ಇನ್ನು ಸಾಮೂಹಿಕ ಅತ್ಯಾಚಾರ ಆರೋಪಿಗಳ ವಿಜಯೋತ್ಸವದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಈ ವಿಚಾರ ಅರಿತ ನ್ಯಾಯಾಲಯ ಪ್ರಕರಣದ ಎಲ್ಲ 7 ಆರೋಪಿಗಳ ಜಾಮೀನು ಅನ್ನು ರದ್ದು ಪಡಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಹಾವೇರಿ ಪೊಲೀಸರು ಎಲ್ಲ 7 ಆರೋಪಿಗಳನ್ನು ಮತ್ತೆ ಬಂಧಿಸಿ ಸಬ್ ಜೈಲಿಗೆ ಕಳುಹಿಸಿದ್ದಾರೆ.

ಜಾಮೀನು ನಿಯಮ ಉಲ್ಲಂಘನೆ

ಜಾಮೀನು ನೀಡಿಕೆ ನಿಯಮಗಳನ್ನು ಆರೋಪಿಗಳು ಉಲ್ಲಂಘಿಸಿದ ಹಿನ್ನಲೆಯಲ್ಲಿ ನ್ಯಾಯಾಲಯ ಜಾಮೀನು ರದ್ದು ಪಡಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಂಶು ಕುಮಾರ್ ಎಸ್ ತಿಳಿಸಿದ್ದಾರೆ.

'ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಇತ್ತೀಚೆಗೆ ಜಾಮೀನು ಪಡೆದ ಏಳು ಆರೋಪಿಗಳನ್ನು ಜಾಮೀನು ನಿಯಮಗಳನ್ನು ಉಲ್ಲಂಘಿಸಿದ ನಂತರ ಪೊಲೀಸ್ ಇಲಾಖೆ ಬಂಧಿಸಿದೆ. ಆರೋಪಿಗಳು ಹಾನಗಲ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್‌ಗಳಾಗಿದ್ದು, ಜಾಮೀನು ಪಡೆದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು' ಎಂದಿದ್ದಾರೆ.

'ಕಾನೂನುಬಾಹಿರ ಮೆರವಣಿಗೆಯ ವಿರುದ್ಧ ಐಪಿಸಿ ಸೆಕ್ಷನ್ 189(2), 191(2), 281, 351(2), 351(3) ಮತ್ತು 190 ಬಿಎನ್‌ಎಸ್-2023 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಾನಗಲ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೊ ವೈರಲ್ ಆದ ನಂತರ ಪೊಲೀಸರು ವೀಡಿಯೊಗಳನ್ನು ಪರಿಶೀಲಿಸಿದ್ದು, ಎಲ್ಲಾ ಆರೋಪಿಗಳನ್ನು ಮೆರವಣಿಗೆಯಲ್ಲಿ ಇದ್ದರು ಎಂದು ದೃಢಪಡಿಸಿದರು' ಎಂದು ಅವರು ಹೇಳಿದರು.

ಏನಿದು ಪ್ರಕರಣ?

ಹಾವೇರಿಯಲ್ಲಿ 2024ರ ಜನವರಿ 8 ರಂದು ಖಾಸಗಿ ಹೋಟೆಲ್‌ನಲ್ಲಿ ದಂಪತಿಗಳು ತಂಗಿದ್ದರು. ಆಗ 26 ವರ್ಷದ ಮಹಿಳೆಯನ್ನು ಹೋಟೆಲ್‌ನಿಂದ ಎಳೆದೊಯ್ದು ಆರೋಪಿಗಳು ಹತ್ತಿರದ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸಂತಸ್ತೆ ನೀಡಿದ ದೂರಿನಂತೆ ಪೊಲೀಸರು ಈ ಪ್ರಕರಣದಲ್ಲಿ 19 ಜನರನ್ನು ಬಂಧಿಸಿದ್ದರು.

ಅವರಲ್ಲಿ ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ 7 ಪ್ರಮುಖ ಆರೋಪಿಗಳು ಕೂಡ ಇದರಲ್ಲಿ ಸೇರಿದ್ದಾರೆ. ಈ ಪೈಕಿ 10 ತಿಂಗಳ ಹಿಂದೆಯೇ 12 ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಆದರೆ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಗಳನ್ನು ಹಲವು ಬಾರಿ ನ್ಯಾಯಾಲಯ ತಿರಸ್ಕರಿಸಿತ್ತು.

ಈಗ ಉಳಿದ 7 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. 3 ದಿನಗಳ ಹಿಂದೆ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಹಾವೇರಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು.

ಸಂತ್ರಸ್ಥೆಯಿಂದ ಗುರುತು ಪತ್ತೆ ವಿಫಲ ಹಿನ್ನಲೆಯಲ್ಲಿ ಜಾಮೀನು

ಈ ಪ್ರಕರಣದಲ್ಲಿ ಸಂತ್ರಸ್ಥ ಮಹಿಳೆ ಈ 7 ಆರೋಪಿಗಳನ್ನು ಗುರುತಿಸಲು ವಿಫಲವಾದ ಹಿನ್ನೆಲೆಯಲ್ಲಿ ಮತ್ತು ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ್ದ ಹೇಳಿಕೆಗಳನ್ನು ಉಳಿಸಿಕೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. A1 ಆರೋಪಿ ಅಫ್ತಾದ್ ಚಂದನಕಟ್ಟಿ, A2 ಮದರ್ ಸಾಬ್ ಮಂಡಕ್ಕಿ, A3 ಸಮಿವುಲ್ಲಾ ಲಾಲನವರ, A4 ಮಹಮದ್ ಸಾದಿಕ್ ಅಗಸಿಮನಿ, A8 ಶೊಯಿಬ್ ಮುಲ್ಲಾ, A11 ತೌಸಿಪ್ ಚೋಟಿ, A12 ರಿಯಾಜ್ ಸಾವಿಕೇರಿಗೆ ಜಾಮೀನು ಮಂಜೂರು ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT