ಕೆಎಸ್‌ಡಿಎಲ್‌ 
ರಾಜ್ಯ

ಸಂಸ್ಧೆಯಲ್ಲಿ ವೇತನ ತಾರತಮ್ಯ, ಭ್ರಷ್ಟಾಚಾರ ತಾರಕಕ್ಕೆ: KSDL ಕಾರ್ಮಿಕರ ಆರೋಪ, CID ತನಿಖೆಗೆ ಆಗ್ರಹ

ನಮ್ಮ ನಾಡಿನ ಹೆಮ್ಮೆಯ ಸೋಪ್ ಬ್ರ್ಯಾಂಡ್ ಆಗಿರುವ ಮೈಸೂರು ಸ್ಯಾಂಡಲ್ ಸೋಪ್ ಅನ್ನು ಜಾಗತಿಕ ಮಟ್ಟದ ಒಂದು ಬ್ರ್ಯಾಂಡ್ ಆಗಿ ಮಾಡುವ ಇಚ್ಛಾಶಕ್ತಿಯನ್ನು ಹೊಂದಲಾಗಿದೆ.

ಬೆಂಗಳೂರು: ಸಂಸ್ಧೆಯಲ್ಲಿ ವೇತನ ತಾರತಮ್ಯ ನಡೆಯುತ್ತಿದ್ದು, ಭ್ರಷ್ಟಾಚಾರ ತಾರಕಕ್ಕೇರಿದೆ ಎಂದು ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್‌)ದ ಮಾರ್ಕೆಟಿಂಗ್ ಸಿಬ್ಬಂದಿ ಮತ್ತು ಕಾರ್ಮಿಕರ ಸಂಘವು ಆರೋಪ ಮಾಡಿದ್ದು, ಸಿಐಡಿ ತನಿಖೆ ನಡೆಸುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.

ಗುರುವಾರ ಸುದ್ದಿಗಾರರೊಂದಿಗೆ ಮಾತುನಾಡಿದ ಸಂಘದ ಅಧ್ಯಕ್ಷ ಜಿ.ಆರ್. ಶಿವಶಂಕರ್ ಅವರು, 25 ವರ್ಷಗಳಿಗೂ ಹೆಚ್ಚು ಕಾಲ ಕಂಪನಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅನೇಕ ಗುತ್ತಿಗೆ ಕಾರ್ಮಿಕರು 20,000 ರಿಂದ 30,000 ರೂ.ಗಳವರೆಗಿನ ಅಲ್ಪ ವೇತನವನ್ನು ಪಡೆಯುತ್ತಿದ್ದಾರೆ, ವೇತನ ಹೆಚ್ಚಳ ಅಥವಾ ಕಾನೂನುಬದ್ಧವಾಗಿ ಬೋನಸ್‌ಗಳನ್ನು ನೀಡಲಾಗುತ್ತಿಲ್ಲ. ಆದರೆ, ಹೊಸದಾಗಿ ನೇಮಕಗೊಂಡ ಗುತ್ತಿಗೆ ಸಿಬ್ಬಂದಿಗೆ 1.5 ಲಕ್ಷ ರೂ.ಗಳವರೆಗೆ ವೇತನವನ್ನು ಪಾವತಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಲಾಗುತ್ತಿದೆ. ಇದರ ಹೊರತಾಗಿ ಹೊಸ ಒಪ್ಪಂದ ಪತ್ರಗಳಿಗೆ ಸಹಿ ಹಾಕುವಂತೆ ಕಾರ್ಮಿಕರ ಮೇಲೆ ಆಡಳಿತ ಮಂಡಳಿ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಸಂಸ್ಥೆಯಲ್ಲಿ ಭ್ರಷ್ಟಾಚಾರವೂ ತಾರಕಕ್ಕೇರಿದೆ ಎಂದ ಅವರು, ಶ್ರೀಗಂಧದ ಎಣ್ಣೆಯಂತಹ ಕಚ್ಚಾ ವಸ್ತುಗಳ ಖರೀದಿಸುವಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಉನ್ನತ ಅಧಿಕಾರಿಗಳೂ ಭಾಗಿಯಾಗಿದ್ದಾರೆಂದು ಆರೋಪಿಸಿದ್ದಾರೆ.

ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದ್ದು, ಸೂಕ್ತ ತನಿಖೆಗೆ ಆದೇಶಿಸುವಂತೆ ಮತ್ತು ದೀರ್ಘಕಾಲದಿಂದ ಕೆಲಸ ಮಾಡುತ್ತಿರುವವರಿಗೆ ಶಾಶ್ವತ ಉದ್ಯೋಗ ಮತ್ತು ಅವರಿಗೆ ಸಿಗಬೇಕಾದ ಸವಲತ್ತುಗಳನ್ನು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ