ಡಿಜಿ-ಐಜಿಪಿ ಸಲೀಂ  
ರಾಜ್ಯ

ಸಹೋದ್ಯೋಗಿಗಳಿಗೆ ನೂತನ ಡಿಜಿ-ಐಜಿಪಿ ಸಲೀಂ ಪತ್ರ: ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಕರೆ

ನಾಡಿನಲ್ಲಿ ಶಾಂತಿ-ಸೌಹಾರ್ದಯುತ, ಸುರಕ್ಷತೆಯ ವಾತಾವರಣ ನಿರ್ಮಿಸುವ ಹಾಗೂ ಇಲಾಖೆಯನ್ನು ಸಮಾಜಸ್ನೇಹಿಯಾಗಿ ಬದಲಿಸಿ ಆಧುನೀಕರಣದೆಡೆಗೆ ಕೊಂಡೊಯ್ಯಲು ಸಾಮರ್ಥ್ಯ ಮೀರಿ ದುಡಿಯುವ ಧೈರ್ಯದೆಡೆಗೆ ಎಲ್ಲರೂ ಒಮ್ಮತವಾಗಿ ಕಾರ್ಯಪ್ರವೃತ್ತರಾಗೋಣ ಎಂದು ಸಲೀಂ ಪತ್ರದಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕ (ಡಿಜಿ-ಐಜಿಪಿ) ಡಾ.ಎಂ.ಎ. ಸಲೀಂ ಅವರು ಇಲಾಖೆಯ ಸುಧಾರಣೆ, ಕ್ರಿಯಾಶೀಲತೆ, ಸಾಮರ್ಥ್ಯ ವೃದ್ಧಿ ಸಂಬಂಧ ಸಹೋದ್ಯೋಗಿಗಳಿಗೆ ಸುದೀರ್ಘ ಪತ್ರ ಬರೆದು ಬೆಂಬಲ ಕೋರಿದ್ದಾರೆ.

ಪೊಲೀಸ್ ಇಲಾಖೆಯ ಕಾರ್ಯಚಟುವಟಿಕೆಯಲ್ಲಿ ಪಾರದರ್ಶಕತೆ ತರಲು ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಸಂತ್ರಸ್ತ ಕೇಂದ್ರಿತ ವಿಧಾನವನ್ನು ಅಳವಡಿಸಿಕೊಳ್ಳಲು, ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ಎಂಎ ಸಲೀಮ್ ಅವರು ತಮ್ಮ ಸಹೋದ್ಯೋಗಿ ಪೊಲೀಸ್ ಸಿಬ್ಬಂದಿಗೆ ಕರ್ತವ್ಯದಲ್ಲಿ ಪ್ರಾಮಾಣಿಕತೆಗೆ ಆದ್ಯತೆ ನೀಡಿ 10 ಅಂಶಗಳ ಪತ್ರ ಬರೆದಿದ್ದಾರೆ.

ನಾಡಿನಲ್ಲಿ ಶಾಂತಿ-ಸೌಹಾರ್ದಯುತ, ಸುರಕ್ಷತೆಯ ವಾತಾವರಣ ನಿರ್ಮಿಸುವ ಹಾಗೂ ಇಲಾಖೆಯನ್ನು ಸಮಾಜಸ್ನೇಹಿಯಾಗಿ ಬದಲಿಸಿ ಆಧುನೀಕರಣದೆಡೆಗೆ ಕೊಂಡೊಯ್ಯಲು ಸಾಮರ್ಥ್ಯ ಮೀರಿ ದುಡಿಯುವ ಧೈರ್ಯದೆಡೆಗೆ ಎಲ್ಲರೂ ಒಮ್ಮತವಾಗಿ ಕಾರ್ಯಪ್ರವೃತ್ತರಾಗೋಣ ಎಂದು ಸಲೀಂ ಪತ್ರದಲ್ಲಿ ತಿಳಿಸಿದ್ದಾರೆ.

ಈ ಗುರಿ ಸಾಧನೆಗೆ, ಪೊಲೀಸ್‌ ಇಲಾಖೆಯ ಅಡಿಪಾಯವಾಗಿರುವ ಕಿರಿಯ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಹಿಡಿದು ಹಿರಿಯ ಪೊಲೀಸ್‌ ಅಧಿಕಾರಿಗಳವರೆಗಿನ ಎಲ್ಲಾ ಸಹೋದ್ಯೋಗಿಗಳಿಂದ ಸದಾ ಬೆಂಬಲ ಅಪೇಕ್ಷಿಸುತ್ತೇನೆ. ಸಮಾಜದಲ್ಲಿ ನೆಮ್ಮದಿ ಹೆಚ್ಚಿಸುವ, ಶಾಂತಿ ಸ್ಥಾಪಿಸುವ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ, ದುರ್ಬಲ ವರ್ಗದವರು ಮತ್ತು ನೊಂದವರಿಗೆ ನ್ಯಾಯ ಕೊಡಿಸುವ ವಿಶೇಷ ಅವಕಾಶ ಮತ್ತು ಜವಾಬ್ದಾರಿ ಪೊಲೀಸರ ಮೇಲಿದೆ ಎಂಬುದನ್ನು ಮರೆಯಕೂಡದು.

ಈ ನಾಡು ಮತ್ತು ನಾಡಿನ ಜನತೆಯ ಒಳಿತಿಗಾಗಿ ಎಲ್ಲರೂ ಶಕ್ತಿ ಮೀರಿ ಪಾರದರ್ಶಕತೆ, ವೃತ್ತಿಪರತೆಯಿಂದ ಸೇವೆ ಸಲ್ಲಿಸಿ ಕರ್ನಾಟಕವನ್ನು ದೇಶದಲ್ಲೇ ಅತಿ ಹೆಚ್ಚು ಸುರಕ್ಷಿತ ವಾತಾವರಣವಿರುವ ಹಾಗೂ ಅತ್ಯುತ್ತಮ ವಾಸ ಯೋಗ್ಯ ತಾಣವಾಗಿ ಪರಿವರ್ತಿಸಲು ಪಣ ತೊಡೋಣ ಎಂದು ಕಿವಿಮಾತು ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳು ಸಮಗ್ರತೆಯ ಬಗ್ಗೆ ಎಂದಿಗೂ ರಾಜಿ ಮಾಡಿಕೊಳ್ಳಬಾರದು. ಇದು ನಮ್ಮ ಎಲ್ಲಾ ಸಹೋದ್ಯೋಗಿಗಳ ನಿರೀಕ್ಷೆಯಾಗಿದೆ. ನೀವು ಯಾವಾಗಲೂ ಪ್ರಾಮಾಣಿಕತೆಗೆ ಆದ್ಯತೆ ನೀಡುತ್ತೀರಿ ಎಂದು ನಾನು ದೃಢವಾಗಿ ನಂಬುತ್ತೇನೆ. ಎಲ್ಲಾ ಅಧಿಕೃತ ಕಾರ್ಯವಿಧಾನಗಳಲ್ಲಿ ಪಾರದರ್ಶಕತೆಯನ್ನು ಒತ್ತಿಹೇಳುವುದು ಸಾರ್ವಜನಿಕ ನಂಬಿಕೆಯನ್ನು ಬೆಳೆಸುತ್ತದೆ ಮತ್ತು ಸಮಾಜದ ದುರ್ಬಲ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ನ್ಯಾಯವನ್ನು ನೀಡಲು ಸಾಧ್ಯವಾಗಿಸುತ್ತದೆ.

ಕಾನೂನು ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವುದು, ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲದಂತೆ ಪರಿಣಾಮಕಾರಿ ಹಾಗೂ ಸಮಯೋಚಿತ ಕ್ರಮಗಳನ್ನು ಕೈಗೊಳ್ಳುವುದು. ಕಾನೂನು ಸುವ್ಯವಸ್ಥೆ ಮತ್ತು ಸೌಹಾರ್ದತೆಗೆ ಅಪಾಯ ತಂದೊಡ್ಡಬಹುದಾದ ವ್ಯಕ್ತಿಗಳ ಹಾಗೂ ಶಕ್ತಿಗಳ ವಿರುದ್ಧ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು.

ಅಪರಾಧಗಳನ್ನು ವ್ಯವಸ್ಥಿತವಾಗಿ ತಡೆಯುವ ಕ್ರಮ ಕೈಗೊಳ್ಳುವುದು ಮತ್ತು ಅಪರಾಧ ಪ್ರಕರಣಗಳ ಸಮರ್ಥ ಹಾಗೂ ನಿಖರ ತನಿಖೆಯನ್ನು ನಡೆಸುವ ಮೂಲಕ ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುವುದನ್ನು ತಡೆದು, ನೊಂದವರಿಗೆ ಶೀಘ್ರ ನ್ಯಾಯ ದೊರಕಿಸಿಕೊಡಲು ಅನುವಾಗುವುದು.

ಈವರೆಗೆ ಅಪರಾಧ ಪ್ರಕರಣಗಳ ತನಿಖೆಯಲ್ಲಿ ಅನುಸರಿಸುತ್ತಿದ್ದ ಅಪರಾಧಿ ಕೇಂದ್ರಿತ ವ್ಯವಸ್ಥೆಯನ್ನು ಸಂತ್ರಸ್ತ ಕೇಂದ್ರಿತ ವ್ಯವಸ್ಥೆಯ ಪಥವಾಗಿ ಬದಲಿಸಿಕೊಳ್ಳುವುದು. ಇಂತಹ ಕ್ರಮದಿಂದ ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸುವುದರ ಜತೆಗೆ ಸಂತ್ರಸ್ತರಿಗೆ ನ್ಯಾಯ, ಅರ್ಹ ಸವಲತ್ತು ದೊರಕಿಸಿಕೊಡಲು ಮತ್ತು ಅವರನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸಬಹುದಾಗಿದೆ.

ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿರಿಸುವುದು, ಮಾದಕ ವಸ್ತುಗಳ ವಿರುದ್ಧ ಹೋರಾಡುವುದು. ಎಲ್ಲಾ ರೀತಿಯ ಕಾನೂನುಬಾಹಿರ ಚಟುವಟಿಕೆಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದು ಮತ್ತು ತಡೆಗಟ್ಟಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT