ಶಿರಾಡಿ ಘಾಟ್ ರಸ್ತೆ  
ರಾಜ್ಯ

ಶಿರಾಡಿ ಘಾಟ್ ನ ಎರಡು ಕಡೆ ಭೂಕುಸಿತ: ವಾಹನ ಸಂಚಾರಕ್ಕೆ ಅಡ್ಡಿ

ಬೆಂಗಳೂರು ಟು ಮಂಗಳೂರು ರಸ್ತೆಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಹಾಸನ: ರಾಜ್ಯದಲ್ಲಿ ಈ ತಿಂಗಳು ಪೂರ್ವ ಮುಂಗಾರು ಮಳೆ ಧಾರಾಕಾರವಾಗಿ ಸುರಿದಿದೆ. ನೈರುತ್ಯ ಮಾನ್ಸೂನ್ ಮಾರುತಗಳು ರಾಜ್ಯವನ್ನು ಪ್ರವೇಶಿಸಿವೆ. ನಿರಂತರ ಬಿರುಗಾಳಿ ಮಳೆಯಿಂದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ (Shiradi Ghat Road) ಎರಡು ಕಡೆ ಭೂ ಕುಸಿತ ಉಂಟಾಗಿದೆ. ಬೆಂಗಳೂರು ಟು ಮಂಗಳೂರು ರಸ್ತೆಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಅಡ್ಡನಗುಡ್ಡದ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ತಡೆಗೋಡೆ ನಿರ್ಮಿಸಿದ್ದರೂ ಕೂಡ ರಸ್ತೆ ಮೇಲೆ ಮಣ್ಣು ಕುಸಿದಿದ್ದು, ಮಣ್ಣಿನ ಸಮೇತ ಮರಗಳು ನೆಲಕ್ಕೆ ಉರುಳುತ್ತಿವೆ.

ವೀಕೆಂಡ್ ಹಿನ್ನೆಲೆ ಶಿರಾಡಿಘಾಟ್​ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್