ಟೀ ಅಂಗಡಿ ಮೇಲೆ ಪುಡಿ ರೌಡಿ ದಾಂಧಲೆ 
ರಾಜ್ಯ

ಮತ್ತೆ ಪುಡಿ ರೌಡಿಗಳ ಅಟ್ಟಹಾಸ: ಟೀ ಅಂಗಡಿ ಮೇಲೆ ದಾಳಿ; ಬಾಟಲ್ ಹೊಡೆದು ಪೊಲೀಸರ ವಿರುದ್ಧವೇ ಅವಾಚ್ಯ ನಿಂದನೆ, Video Viral

ಬೆಂಗಳೂರಿನ ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್ ಜಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ವರದಿಯಾಗಿದ್ದು, ಟೀ ಅಂಗಡಿಯೊಂದರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಪೊಲೀಸರ ವಿರುದ್ಧವೇ ಅವಾಚ್ಯ ಪದ ಬಳಕೆ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ.

ಬೆಂಗಳೂರಿನ ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್ ಜಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಟೀ ಮಾರುವ ಅಂಗಡಿ ಮತ್ತು ಬೇಕರಿ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳು ಅಂಗಡಿಯವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಪೊಲೀಸರಿಗೆ ಹೇಳುತ್ತೇನೆ ಎಂದಾಗ ಪೊಲೀಸರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾತ್ರವಲ್ಲದೇ ಅಂಗಡಿಯಲ್ಲಿ ಚೌಚೌ ಬಾಟಲಿ ತೆಗೆದುಕೊಂಡು ರಸ್ತೆಯಲ್ಲಿ ಹೊಡೆದು ಹಾಕಿದ್ದಾರೆ. ಅಲ್ಲದೆ ಬಾಡಲ್ ಚೂರು ತೆಗೆದುಕೊಂಡು ಪೊಲೀಸರು ಇದನ್ನು ಕೆಳಗೆ ಇಟ್ಟುಕೊಳ್ಳಲಿ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ.

ಈ ಹಿಂದೆಯೂ ಕೂಡ ಬೆಂಗಳೂರಿನಲ್ಲಿ ಇಂತಹುದೇ ಹಲವು ಘಟನೆಗಳು ನಡೆದಿದ್ದವು. ಆಗ ಪೊಲೀಸರು ಕ್ಷಿಪ್ರ ಕ್ರಮ ಕೈಗೊಂಡು ದುಷ್ಕರ್ಮಿಗಳ ಹೆಡೆಮುರಿಕಟ್ಟಿದ್ದರು.

ಜೆಡಿಎಸ್ ಕಿಡಿ

ಇನ್ನು ಇದೇ ಘಟನೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕೂಡ ಕಿಡಿಕಾರಿದ್ದು, ಈ ಕುರಿತು ಎಕ್ಸ್ ನಲ್ಲಿ ವಿಡಿಯೋ ಸಮೇತ ಪೋಸ್ಟ್ ಮಾಡಿ ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದೆ. 'ಎತ್ತ ಸಾಗಿದೆ ರಾಜ್ಯದ ಕಾನೂನು ಸುವ್ಯವಸ್ಥ?... ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಈಗ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ.

ಬೆಂಗಳೂರಿನ ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪುಡಿರೌಡಿಗಳ ಅಟ್ಟಹಾಸ ಮಿತಿಮೀರಿದೆ. ಪುಂಡರಿಗೆ ಪೊಲೀಸರು, ಕಾನೂನಿನ ಭಯವೇ ಇಲ್ಲವಾಗಿದೆ. ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಪಾತಳಕ್ಕೆ ಕುಸಿದಿದೆ. ಕಾಂಗ್ರೆಸ್ ಸರ್ಕಾರದ ಅರಾಜಕತೆಯಲ್ಲಿ ದಿನೇ ದಿನೇ ಸಾರ್ವಜನಿಕರಿಗೆ ರಕ್ಷಣೆ ಎಂಬುದು ಮರೀಚಿಕೆಯಾಗಿದ್ದು, ಜನರು ಆತಂಕದಲ್ಲಿ ಬದುಕುವಂತಾಗಿದೆ ಎಂದು ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT