ನಟ ದರ್ಶನ್  
ರಾಜ್ಯ

ವಿದೇಶಕ್ಕೆ ಹಾರಲು ದರ್ಶನ್ ರೆಡಿ: ಯುರೋಪ್ ಗೆ ತೆರಳಲು ಅರ್ಜಿ ಸಲ್ಲಿಕೆ; ಹೋದರೆ ವಾಪಸ್ ಬರೋಲ್ಲ SSP ಆಕ್ಷೇಪಣೆ

ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.

ಬೆಂಗಳೂರು: ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.

ಕೊಲೆ ಕೇಸ್​ನ ಎರಡನೇ ಆರೋಪಿ ದರ್ಶನ್ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಜಾಮೀನು ನೀಡುವಾಗ ವಿದೇಶಕ್ಕೆ ತೆರಳುವಂತಿಲ್ಲ ಎಂಬ ಷರತ್ತನ್ನು ಕೋರ್ಟ್ ವಿಧಿಸಿತ್ತು. ಹೀಗೆ ತೆರಳಬೇಕು ಎಂದರೆ ಕೋರ್ಟ್ ಅನುಮತಿ ಕಡ್ಡಾಯ ಎಂಬ ಷರತ್ತನ್ನು ನ್ಯಾಯಾಲಯ ವಿಧಿಸಿತ್ತು. ಈಗ ದರ್ಶನ್ ಅವರು ವಿದೇಶಕ್ಕೆ ತೆರಳಲು ಅನುಮತಿ ಕೋರಿ 57ನೇ ಸಿಸಿಹೆಚ್ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೋರ್ಟ್ ಇದರಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ದರ್ಶನ್ ಬೆಂಗಳೂರು ಬಿಟ್ಟು ತೆರಳುವಂತಿಲ್ಲ ಎನ್ನುವ ಸೂಚನೆಯನ್ನು ನ್ಯಾಯಾಲಯವು ನೀಡಿತ್ತು. ಆದರೆ, ಹೈಕೋರ್ಟ್​ನಿಂದ ದೇಶ ಸುತ್ತಾಟ ಮಾಡಲು ದರ್ಶನ್ ಅನುಮತಿ ಪಡೆದರು. ರಾಜಸ್ಥಾನ ಮೊದಲಾದ ಕಡೆಗಳಲ್ಲಿ ‘ಡೆವಿಲ್’ ಸಿನಿಮಾ ಶೂಟ್ ಮುಗಿಸಿ ದರ್ಶನ್ ಮರಳಿದ್ದರು. ಈಗ ವಿದೇಶಕ್ಕೆ ಹಾರಲು ಆರೋಪಿ ದರ್ಶನ್ ಸಿದ್ಧತೆ ಮಾಡಿಕೊಂಡಿದ್ದಾರೆ.

ದರ್ಶನ್ ಅವರು ಮಿಲನ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಹಾಡಿನ ಶೂಟ್​ಗಾಗಿ ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಸಿನಿಮಾ ಶೂಟಿಂಗ್​ಗಾಗಿ ದುಬೈ ಮತ್ತು ಯೂರೋಪ್​ಗೆ ತೆರಳಲು ಅವಕಾಶ ಕೋರಿ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಆಗಿದೆ. 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅವಕಾಶ ಕೋರಲಾಗಿದೆ. ವಿದೇಶಕ್ಕೆ ತೆರಳಿದರೆ ಭಾರತಕ್ಕೆ ಮತ್ತೆ ವಾಪಸ್‌ ಬರುವುದು ಅನುಮಾನ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಯುತ್ತಿರುವುದ್ದರಿಂದ ವಿದೇಶಕ್ಕೆ ತೆರಳಲು ಅನಮತಿ ನೀಡದಂತೆ ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್‌ಪಿಪಿ) ಆಕ್ಷೇಪಣೆ ಸಲ್ಲಿಸಿದ್ದಾರೆ. ದರ್ಶನ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಕೋರ್ಟ್‌ನಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!