ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ 
ರಾಜ್ಯ

ಕೋವಿಡ್ ಪರಿಸ್ಥಿತಿ ಎದುರಿಸಲು ಸಕಲ ಸಿದ್ಧತೆ, ಸದ್ಯಕ್ಕೆ ಮಾಸ್ಕ್ ಕಡ್ಡಾಯವಿಲ್ಲ: ಸಿಎಂ ಸಿದ್ದರಾಮಯ್ಯ

ಎಂತಹ ಪರಿಸ್ಥಿತಿ ಎದುರಾದರೂ ಎದುರಿಸಲು ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಕೊರೋನಾದಿಂದ ಯಾವುದೇ ಭಯವಿಲ್ಲ. ಆದರೆ, ಪರಿಸ್ಥಿತಿ ಎದುರಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂತಹ ಪರಿಸ್ಥಿತಿ ಎದುರಾದರೂ ಎದುರಿಸಲು ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸುಮಾರು 65 ಇದ್ದ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು.

ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿಲ್ಲ. ಆದರೆ ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲು ಕೇಂದ್ರದಿಂದ ಇನ್ನೂ ಸೂಚನೆ ಬಂದಿಲ್ಲ, ಆದರೂ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.

ಪರಿಸ್ಥಿತಿ ನಿಯಂತ್ರಣದಲ್ಲಿದೆ, ಭಯಪಡುವ ಅಗತ್ಯವಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಕೊರೋನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳು ದಿನದಿಂದ ಹೆಚ್ಚಾಗುತ್ತಿವೆ. ಆದರೆ ಇದರ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿಯರು ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಜನರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಹೇಳಿದರು.

ಕೋವಿಡ್ ಪ್ರಕರಣಗಳು ಇದ್ದರೂ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡುವ ಅಗತ್ಯವಿಲ್ಲ. ಜ್ವರ, ಶೀತ, ನೆಗಡಿ ಇದ್ದವರು ಧರಿಸಿದರೆ ಸಾಕು. ನಾವು ಉತ್ತಮವಾಗಿ ಮಾನಿಟರ್ ಮಾಡುತ್ತೇವೆ. ಈ ಬಾರಿ ಮಳೆ ಹೆಚ್ಚಾಗಿದ್ದರಿಂದ ಹವಾಮಾನ ಕೂಡ ಬದಲಾವಣೆ. ಇದರಿಂದಲೂ ಜ್ವರ, ನೆಗಡಿ, ಕೆಮ್ಮು ಬರುತ್ತಿದೆ.

ಕೋವಿಡ್ ಪ್ರಕರಣ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ. ಆದರೆ ದೊಡ್ಡ ಪ್ರಮಾಣದಲ್ಲಿ ಹರಡುತ್ತಿಲ್ಲ. ಹಾಗಾಗಿ ಜನರು ಆತಂಕ ಪಡಬೇಕಾದ ಅಗತ್ಯ ಇಲ್ಲ. ಸರ್ಕಾರದ ಮಾರ್ಗಸೂಚಿ ಪಾಲಿಸಿದರೆ ಎಲ್ಲರಿಗೂ ಕ್ಷೇಮ. ವ್ಯಾಕ್ಸಿನೇಷನ್ ಈಗಾಗಲೇ ಆಗಿದೆ. ಅವಶ್ಯಕತೆ ಇದ್ದರೆ ಕೇಂದ್ರ ಆರೋಗ್ಯ ಇಲಾಖೆ ಜೊತೆ ಚರ್ಚೆ ನಡೆಸಿ ಲಸಿಕೆ ತರಿಸುತ್ತೇವೆ ಎಂದು ತಿಳಿಸಿದರು.

ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕೋವಿಡ್ ಹೆಚ್ಚಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. ಜನದಟ್ಟಣೆ ಇರುವ ಸ್ಥಳದಲ್ಲಿ ಹಿರಿಯರು, ಗರ್ಭಿಣಿಯರು ಮಾಸ್ಕ್ ಧರಿಸಬೇಕು. ನೆಗಡಿ ಕೆಮ್ಮು ಇರುವ ಮಕ್ಕಳು ಶಾಲೆಗೆ ಹೋಗದಂತೆ ಸೂಚನೆ ನೀಡಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT