ಸಂತೋಷ್ ಲಾಡ್ 
ರಾಜ್ಯ

ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರಿಗೆ ಆರ್ಥಿಕ ಭದ್ರತೆ, ಸಲೀಕರಣಕ್ಕಾಗಿ ಹಲವು ಕ್ರಮ ಕೈಗೊಳ್ಳಲಾಗಿದೆ: ಸಚಿವ ಸಂತೋಷ್ ಲಾಡ್

ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಅಧಿನಿಯಮ ಹಾಗೂ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕದಂತ ಮೂರು ಕ್ರಾಂತಿಕಾರಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ.

ಬೆಂಗಳೂರು: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸರ್ಕಾರವು ಮೂರು ಪ್ರಮುಖ ಕಾನೂನುಗಳನ್ನು ಜಾರಿಗೆ ತಂದಿದ್ದು, ಇಂತಹ ಕಾನೂನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಮಂಗಳವಾರ ಹೇಳಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 'ಕರ್ನಾಟಕ ಪ್ಲಾಟ್‌ಫಾರ್ಮ್‌ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸುಗ್ರೀವಾಜ್ಞೆ -2025', ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಮಿಕರ ಕಲ್ಯಾಣ ಕಾಯ್ದೆ, 2024 ಮತ್ತು ಕರ್ನಾಟಕ ಮೋಟಾರ್ ಸಾರಿಗೆ ಮತ್ತು ಮಿತ್ರ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಕಾಯ್ದೆ 2014ಗೆ ಸುಗ್ರೀವಾಜ್ಞೆ ಹೊರಡಿಸಲಾಗಿದ್ದು, ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಮತ್ತು ಅವರ ಸಬಲೀಕರಣಕ್ಕಾಗಿ ಹಲವು ವಿನೂತನ ಕ್ರಮ ಕೈಗೊಳ್ಳಲಾಗಿದೆ.

ಪ್ರಮುಖವಾಗಿ ವಿಧೇಯಕ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಅಧಿನಿಯಮ ಹಾಗೂ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕದಂತ ಮೂರು ಕ್ರಾಂತಿಕಾರಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.

ಗಿಗ್‌ ಕಾರ್ಮಿಕರಿಗೆ ಸಂಬಂಧಿಸಿದ ಕಾಯ್ದೆಯಲ್ಲಿ ಫಲಾನುಭವಿ ಮರಣದ ನಂತರ ವಾರಸುದಾರರಿಗೆ 2 ಲಕ್ಷ ರು. ಜೀವವಿಮೆ ಪರಿಹಾರ, ಅಪಘಾತ ಮರಣ ಪ್ರಕರಣದಲ್ಲಿ 2 ಲಕ್ಷ ರು. ಅಪಘಾತ ವಿಮಾ ಪರಿಹಾರ, ಅಂಗವಿಕಲತೆಗೆ ಶೇಕಡಾವಾರು ದುರ್ಬಲತೆ ಆಧಾರದಲ್ಲಿ 2 ಲಕ್ಷ ರು. ಪರಿಹಾರ ಹಾಗೂ ಆಸ್ಪತ್ರೆ ವೆಚ್ಚ ಮರುಪಾವತಿಗೆ 1 ಲಕ್ಷ ರು. ಸಹಾಯಧನ ನೀಡಲಾಗುತ್ತದೆ. ಇದು ದೇಶದಲ್ಲಿಯೇ ಮಾದರಿ ಕಾಯ್ದೆಯಾಗಿದೆ.

ಅದೇ ರೀತಿ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರಿಗೆ ಸಂಬಂಧಿಸಿದ ಕಾಯ್ದೆಯಲ್ಲಿ ಅಪಘಾತ ಮರಣ ಪ್ರಕರಣದಲ್ಲಿ 1 ಲಕ್ಷ ರು. ವಿಮಾ ಪರಿಹಾರ, ಅಂಗವಿಕಲತೆಗೆ 1 ಲಕ್ಷ ರು.ವರೆಗೆ ಪರಿಹಾರ ಹಾಗೂ 50 ಸಾವಿರ ರು. ಆಸ್ಪತ್ರೆ ವೆಚ್ಚ ಮರುಪಾವತಿ ಸಹಾಯಧನ ದೊರೆಯಲಿದೆ. ಹಾಗೆಯೇ, ಸಾರಿಗೆ ಕಾರ್ಮಿಕರ ಕಾಯ್ದೆಯಲ್ಲಿ ಅಪಘಾತದಿಂದ ಮರಣ ಹೊಂದಿದರೆ 5 ಲಕ್ಷ ರು. ಪರಿಹಾರ, ಅಪಘಾತದಿಂದ ಶಾಶ್ವತ ಅಂಗವಿಕಲತೆಗೆ 2 ಲಕ್ಷ ರು, ತಾತ್ಕಾಲಿಕ ದುರ್ಬಲರಾದರೆ ಗರಿಷ್ಠ 1 ಲಕ್ಷ ರು. ಹಾಗೂ ಆಸ್ಪತ್ರೆ ವೆಚ್ಚ ಮರುಪಾವತಿ ಸಹಾಯಧನ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಹೊರಗುತ್ತಿಗೆ ಕಾರ್ಮಿಕರ ನೇಮಕದಲ್ಲಿದ್ದ ಗೊಂದಲಗಳ ನಿವಾರಣೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪ್ರತಿ ಜಿಲ್ಲೆಯಲ್ಲಿ ಹೊರಗುತ್ತಿಗೆ ಕಾರ್ಮಿಕ ಸೇವೆ ಒದಗಿಸುವ ಸೊಸೈಟಿ ರಚಿಸುವ ಹೊಸ ಪರಿಕಲ್ಪನೆ ಜಾರಿಗೊಳಿಸಲಾಗಿದೆ. ಮೊದಲಿಗೆ ಬೀದರ್‌ ಜಿಲ್ಲೆಯಲ್ಲಿ ಈ ಪ್ರಯೋಗ ಮಾಡಲಾಗಿದ್ದು, ಅದು ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ತುಮಕೂರು, ಮೈಸೂರು ಹಾಗೂ ಧಾರವಾಡ ಜಿಲ್ಲೆಗಳಲ್ಲೂ ಸೊಸೈಟಿ ರಚಿಸಲಾಗುತ್ತದೆ. ಅದಾದ ನಂತರ ರಾಜ್ಯಾದ್ಯಂತ ಅದನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಕಾರ್ಮಿಕರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡಲು ಆಶಾ ದೀಪ ಯೋಜನೆ ಜಾರಿಗೊಳಿಸಲಾಗಿದ್ದು, ಅದರಿಂದ ಒಟ್ಟಾರೆ 5,733 ಮಂದಿ ಪ್ರಯೋಜನ ಪಡೆದಿದ್ದಾರೆ. ಅದರ ಜತೆಗೆ ವಲಸೆ ಕಟ್ಟಡ ಕಾರ್ಮಿಕರಿಗಾಗಿ ವಸತಿ ಸಮುಚ್ಚಯ ನಿರ್ಮಾಣ, 43 ಸ್ಥಳಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಕಾರ್ಮಿಕ ಸೇವಾ ಕೇಂದ್ರಗಳ ಸ್ಥಾಪನೆ, 65 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಕಡ್ಡಾಯ ಉಪಧನ ಕಾಯ್ದೆ, ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಎಲ್ಲ ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳ ನಿರ್ಮಾಣ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT