ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಶಾಲಾ ಮೂಲಸೌಕರ್ಯಕ್ಕಾಗಿ 725 ಕೋಟಿ ಅನುದಾನ; ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ: ಸಿಎಂ

ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ.

ಬೆಂಗಳೂರು: ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ ಈ ವರ್ಷ ಮತ್ತೆ 725 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದ್ದು, ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

ಶೈಕ್ಷಣಿಕ ವರ್ಷದ ಪುನರಾರಂಭದ ಅಂಗವಾಗಿ ಗುರುವಾರ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ. ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ‌ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ ಎಂದು ಹೇಳಿದರು.

1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ರೂ.725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ. ಮಕ್ಕಳಿಗೆ ಉತ್ತಮ‌ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ‌ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ.

ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಚಾರಿಕ ಗುಣ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ತಿಳಿಸಿದರು.

ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಮಕ್ಕಳ‌ ಅನುಕೂಲಕ್ಕಾಗಿ ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇಟ್ಟಿಲ್ಲ. ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ‌ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT