ಸಿಎಂ ಸಿದ್ದರಾಮಯ್ಯ 
ರಾಜ್ಯ

125 ವರ್ಷಗಳಲ್ಲಿ ಇದೇ ಮೊದಲ ಬಾರಿ ರಾಜ್ಯದಲ್ಲಿ ಮೇ ತಿಂಗಳಲ್ಲಿ ಅತಿ ಹೆಚ್ಚು ಮಳೆ: ಸಿಎಂ ಸಿದ್ದರಾಮಯ್ಯ

ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಸಂತ್ರಸ್ತರಿಗೆ ಅಗತ್ಯ ಪರಿಹಾರವನ್ನು ನೀಡುವಂತೆ ಸೂಚಿಸಿದರು.

ಬೆಂಗಳೂರು: ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಮತ್ತು 28 ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ಗಳ ಸಿಇಒಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಸಂತ್ರಸ್ತರಿಗೆ ಅಗತ್ಯ ಪರಿಹಾರವನ್ನು ನೀಡುವಂತೆ ಸೂಚಿಸಿದರು.

"ಮಳೆ ಹಾನಿಗೆ ಪರಿಹಾರ ನೀಡಲು ಯಾವುದೇ ಹಣದ ಕೊರತೆಯಿಲ್ಲ. ಜಿಲ್ಲೆಗಳಲ್ಲಿ ಎಸ್‌ಡಿಆರ್‌ಎಫ್ ಅಡಿಯಲ್ಲಿ 1,000 ಕೋಟಿ ರೂ.ಗಳಿಗೂ ಹೆಚ್ಚು ಹಣ ಲಭ್ಯವಿದೆ" ಎಂದು ಸಿಎಂ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರೀ ಮಳೆಯಿಂದ ಮನೆಗಳಿಗೆ ಹಾನಿಯಾದರೆ ಪರಿಹಾರ ನೀಡಲು ಈಗಾಗಲೇ ಮಾರ್ಗಸೂಚಿಗಳನ್ನು ನೀಡಲಾಗಿದೆ. ತಕ್ಷಣ ಪರಿಹಾರ ನೀಡಬೇಕು" ಎಂದು ಅವರು ಹೇಳಿದರು.

ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಸ್ಥಳಗಳಲ್ಲಿ, ಜನರನ್ನು ಸ್ಥಳಾಂತರಿಸುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಳೆಯಿಂದ ಮನೆ ಸಂಪೂರ್ಣವಾಗಿ ಹಾನಿಗೊಳಗಾದರೆ, ತಕ್ಷಣ 1.20 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಕಳೆದ ವರ್ಷದಂತೆ ಮನೆ ಕಳೆದುಕೊಂಡ ಜನರಿಗೆ ಹೊಸ ಮನೆಗಳನ್ನು ಒದಗಿಸುವ ಮೂಲಕ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಪ್ರವಾಹ ವಿಪತ್ತನ್ನು ಎದುರಿಸಲು ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಇಲಾಖೆಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದೆ ಮತ್ತು ಅವರು ಸಮನ್ವಯದಿಂದ ಕೆಲಸ ಮಾಡಿದರೆ, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT